ಚಿನ್ನ ಕಳವು : ಕರ್ನಾಟಕ, ಕೇರಳ ಸೇರಿ 21 ಸ್ಥಳಗಳ ಮೇಲೆ ಇ.ಡಿ ದಾಳಿ
Gold theft: ED raids 21 places including Karnataka, Kerala
ತಿರುವನಂತಪುರಂ: ಶಬರಿಮಲೆ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಂಗಳವಾರ (ಜ.20) ಕೇರಳ, ಕರ್ನಾಟಕ ಹಾಗೂ ತಮಿಳುನಾಡು ಸೇರಿದಂತೆ 21 ಸ್ಥಳಗಳ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ.
ಪ್ರಕರಣದ ಪ್ರಮುಖ ಆರೋಪಿಗಳಾದ ಉನ್ನಿಕೃಷ್ಣನ್ ಪೊಟ್ಟಿ, ದೇವಸ್ವಂ ಮಂಡಳಿಯ ಮಾಜಿ ಅಧ್ಯಕ್ಷ ಎ ಪದ್ಮಕುಮಾರ್, ಎನ್ ವಾಸು, ಮುರಾರಿ ಬಾಬು ಮತ್ತು ಚಿನ್ನದ ವ್ಯಾಪಾರಿ ಗೋವರ್ಧನ್ ಅವರ ನಿವಾಸಗಳು ಹಾಗೂ ಚೆನ್ನೈನಲ್ಲಿರುವ ಸ್ಮಾರ್ಟ್ ಕ್ರಿಯೇಷನ್ಸ್ ಮತ್ತು ಗೋವರ್ಧನ್ ಅವರ ಬಳ್ಳಾರಿ ನಿವಾಸಗಳಲ್ಲಿ ಶೋಧ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
ಕೇರಳದಲ್ಲಿ, ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡಗಳು ತಿರುವನಂತಪುರಂನಲ್ಲಿರುವ ದೇವಸ್ವಂ ಬೋರ್ಡ್ ಪ್ರಧಾನ ಕಛೇರಿ ಮೇಲೆ ದಾಳಿ ನಡೆಸಿ ದಾಖಲೆ ಪತ್ರಗಳನ್ನು ಪರಿಶೀಲಿಸುತ್ತಿದೆ. ಕೊಟ್ಟಾಯಂ, ಕಿಲಿಮನೂರ್, ಪೆಟ್ಟಾ, ಅರನ್ಮುಲಾ ಮತ್ತು ವಲಿಯಕಟ್ಟಕ್ಕಲ್ ಸೇರಿದಂತೆ ಇತರ ಸ್ಥಳಗಳ ಮೇಲೆ ದಾಳಿ ನಡೆಸಿರುವುದಾಗಿ ವರದಿಯಾಗಿದೆ.
ಈ ಕಾರ್ಯಾಚರಣೆಯನ್ನು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ನಡೆಸಲಾಗುತ್ತಿದ್ದು, ಕಳ್ಳತನಕ್ಕೆ ಸಂಬಂಧಿಸಿದ ಹಣಕಾಸಿನ ವಹಿವಾಟುಗಳ ಬಗ್ಗೆ ಇಡಿ ತನಿಖೆ ನಡೆಸುತ್ತಿದೆ.
ಇ.ಡಿ ಈಗಾಗಲೇ ಜಾರಿ ಪ್ರಕರಣ ಮಾಹಿತಿ ವರದಿ (ECIR) ಅನ್ನು ದಾಖಲಿಸಿದ್ದು, ತಂತ್ರಿ ಕಂದರಾರು ರಾಜೀವರು ಸೇರಿದಂತೆ ಎಲ್ಲಾ ಆರೋಪಿಗಳನ್ನು SIT ತನಿಖೆಯಲ್ಲಿ ಸೇರಿಸಲಾಗಿದೆ, ಆದರೆ ಇಲ್ಲಿಯವರೆಗೆ ತಂತ್ರಿ ಅವರ ನಿವಾಸದಲ್ಲಿ ಯಾವುದೇ ಶೋಧ ನಡೆಸಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ವರ್ಷ ಅಕ್ಟೋಬರ್ನಲ್ಲಿ ಉನ್ನಿಕೃಷ್ಣನ್ ಪೊಟ್ಟಿ ಅವರನ್ನು ಎಸ್ಐಟಿ ವಶಕ್ಕೆ ಪಡೆದಿತ್ತು. ದಾಳಿಯ ತನಿಖೆಯ ಆಧಾರದ ಮೇಲೆ, ಮುಂದಿನ ದಿನಗಳಲ್ಲಿ ಇಡಿ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಮುಂದಾಗಬಹುದು. ದೊಡ್ಡ ಪ್ರಮಾಣದ ಹಣ ವರ್ಗಾವಣೆ ನಡೆದಿದೆ ಎಂಬ ಗುಪ್ತಚರ ಮಾಹಿತಿಯ ನಂತರ, ಎಸ್ಐಟಿ ತನಿಖೆ ಪ್ರಾರಂಭವಾದ ನಂತರ ಇ.ಡಿ ಪ್ರಾಥಮಿಕ ವಿಚಾರಣೆಯನ್ನು ಪ್ರಾರಂಭಿಸಿತ್ತು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 