ಮಂಗಳೂರು ವಿಮಾನ ನಿಲ್ದಾಣದಲ್ಲಿ 63 ಲಕ್ಷ ರೂ ಮೌಲ್ಯದ ಚಿನ್ನ ವಶ
ಮಂಗಳೂರು, ಜ9 ಮಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಸುಂಕ ಅಧಿಕಾರಿಗಳು 63 ಲಕ್ಷ ರೂ. ಮೌಲ್ಯದ 1.575 ಕೆಜಿ ತೂಕದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಮೂರು ದಿನಗಳ ಹಿಂದೆ ವಿಮಾನ ಪ್ರಯಾಣಿಕನೊಬ್ಬನಿಂದ 336.7 ಗ್ರಾಂ ತೂಕದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ದುಬೈನಿಂದ ಏರ್ ಇಂಡಿಯಾ ವಿಮಾನದ ಮೂಲಕ ಆಗಮಿಸಿದ ವ್ಯಕ್ತಿಯು ಚಿನ್ನವನ್ನು ಶೂ ನ ಸಾಕ್ಸ್ ನಲ್ಲಿ ಬಚ್ಚಿಟ್ಟುಕೊಂಡಿದ್ದ. ವಶಪಡಿಸಿಕೊಳ್ಳಲಾದ ಚಿನ್ನದ ಮೌಲ್ಯ 13.43 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಇನ್ನೆರಡು ಪ್ರಕರಣಗಳು ಜ 7ರಂದು ನಡೆದಿದ್ದು, ದುಬೈನಿಂದ ಏರ್ ಇಂಡಿಯಾ ವಿಮಾನದ ಮೂಲಕ ಆಗಮಿಸಿದ ಇಬ್ಬರು ಪ್ರಯಾಣಿಕರಿಂದ 1,239 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಪೇಸ್ಟ್ ರೂಪದಲ್ಲಿ 523 ಗ್ರಾಂ ಚಿನ್ನವನ್ನು ಕಳ್ಳಸಾಗಣೆ ಮಾಡಲು ಒಬ್ಬ ಪ್ರಯಾಣಿಕ ಪ್ರಯತ್ನಿಸಿದ್ದ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ಮುಂದಿನ ಕ್ರಮಕ್ಕಾಗಿ ಬಂಧಿತ ಪ್ರಯಾಣಿಕರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 