ಗೊಲ್ಲಾಳಪ್ಪ ಪಟ್ಟಣಶೆಟ್ಟಿ ಪಿಡಿಒ ಆಗಿ ಬಡ್ತಿ

ಗೊಲ್ಲಾಳಪ್ಪ ಪಟ್ಟಣಶೆಟ್ಟಿ ಪಿಡಿಒ ಆಗಿ ಬಡ್ತಿ  Gollalappa Pattanashetty promoted as PDO


ದೇವರಹಿಪ್ಪರಗಿ 11: ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಪಂಚಾಯಿತಿ ಕಾರ್ಯದರ್ಶಿಯಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಗೊಲ್ಲಾಳಪ್ಪ ಪಟ್ಟಣಶೆಟ್ಟಿ ಅವರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ (ಪಿಡಿಒ) ಬಡ್ತಿ ಹೊಂದಿದ್ದಾರೆ.  

ಇತ್ತೀಚೆಗೆ ಹುಣಶ್ಯಾಳ ಗ್ರಾಮ ಪಂಚಾಯಿತಿಯಿಂದ ಕೋರವಾರ ಗ್ರಾಮ ಪಂಚಾಯಿತಿಗೆ ಗ್ರೇಡ್‌-1 ಕಾರ್ಯದರ್ಶಿಯಾಗಿ ವರ್ಗಾವಣೆಗೊಂಡಿದ್ದ ಅವರು, ಇದೀಗ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಿರ್ಧಳ್ಳಿ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ನಿಯುಕ್ತಿಗೊಂಡಿದ್ದಾರೆ.  

ತಮ್ಮ ಸೇವಾವಧಿಯಲ್ಲಿ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಗೊಲ್ಲಾಳಪ್ಪ ಪಟ್ಟಣಶೆಟ್ಟಿ ಅವರ ಬಡ್ತಿಗೆ ಸಹೋದ್ಯೋಗಿಗಳು, ಸ್ನೇಹಿತರು ಹಾಗೂ ಅಭಿಮಾನಿಗಳು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ.