ಗುರು ಸ್ಮರಣೆಯಿಂದ ಸದ್ಗತಿ, ಪುಣ್ಯ ಪ್ರಾಪ್ತಿ: ಮಲ್ಲಿಕಾರ್ಜುನ್ ಕೋರೆ
Good fortune and merit are attained through remembering the Guru: Mallikarjun Kore
ಲೋಕದರ್ಶನ ವರದಿ
ಮಾಂಜರಿ 04: ವಿದ್ಯೆ ಕಲಿಸಿದ ಗುರುಗಳನ್ನು ಸ್ಮರಿಸುವುದರಿಂದ ಸದ್ಗತಿ ದೊರೆಯುತ್ತದೆ ಮತ್ತು ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ಚಿದಾನಂದ ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಕೋರೆ ಹೇಳಿದರು.
ಅವರು ಸೋಮವಾರ ರಂದು ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ಕೆಎಲ್ಇ ಶಿಕ್ಷಣ ಸಂಸ್ಥೆಯ ಶಾರದಾದೇವಿ ಕೋರೆ ಪ್ರೌಢಶಾಲೆಯ 1998/99 ಸಾಲಿನ ಹಳೆಯ ವಿದ್ಯಾರ್ಥಿಗಳ ಸಹಯೋಗದಲ್ಲಿ ಏರಿ್ಡಸಿದ್ದ ಗುರು ನಮನ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಮಾತನಾಡಿದ ಅವರು, ನಾವು ಗಳಿಸಿದ ಆಸ್ತಿ, ಅಂತಸ್ತು, ಸಂಪತ್ತು ಯಾವುದೂ ಕೊನೆಯವರೆಗೂ ಉಳಿಯುವುದಿಲ್ಲ. ಆದರೆ, ಕಲಿತ ವಿದ್ಯೆ ಮಾತ್ರ ಕೊನೆಯವರೆಗೂ ಇರುತ್ತದೆ. ಹಾಗಾಗಿ, ಪ್ರತಿಯೊಬ್ಬರ ಬದುಕಿನಲ್ಲಿ ಗುರುವಿನ ಶ್ರಮ ದೊಡ್ಡದು. ಗುರುವಿನ ಶ್ರಮಕ್ಕೆ ಪ್ರತಿಫಲವಾಗಿ ಶಿಷ್ಯರು ಜವಾಬ್ದಾರಿಯುತ ಪ್ರಜೆಗಳಾಗಿ ರೂಪುಗೊಂಡಿರುವುದು ಸಂತಸದ ಸಂಗತಿ ಎಂದು ಹರ್ಷ ವ್ಯಕ್ತಪಡಿಸಿದರು.
ನಿವೃತ್ತ ಪ್ರಾಚಾರ್ಯಕೆ ಎಂ ಕಮತೆ ಸನ್ಮಾನ ಸ್ವೀಕರಿಸಿ ಮಾತನಾಡಿ, 35 ವರ್ಷಗಳ ನಂತರ ತಮಗೆ ಕಲಿಸಿದ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಆತ್ಮೀಯವಾಗಿ ಸನ್ಮಾನಿಸಿ ಗುರುವಂದನೆ ಸಲ್ಲಿಸಿದ್ದು ಶಿಷ್ಯವೃಂದದ ಗುರುಋಣಕ್ಕ ಸಾಕ್ಷಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಸ್ಥಳೀಯ ಆಡಳಿತ ಮಂಡಳಿಯ ಸದಸ್ಯ ಸುರೇಶ್ ಪಾಟೀಲ್ ಮಾತನಾಡಿ ನಾವು ಗಳಿಸಿದ ಆಸ್ತಿ, ಅಂತಸ್ತು, ಸಂಪತ್ತು ಯಾವುದೂ ಕೊನೆಯವರೆಗೂ ಉಳಿಯುವುದಿಲ್ಲ. ಆದರೆ, ಕಲಿತ ವಿದ್ಯೆ ಮಾತ್ರ ಕೊನೆಯವರೆಗೂ ಇರುತ್ತದೆ. ಹಾಗಾಗಿ, ಪ್ರತಿಯೊಬ್ಬರ ಬದುಕಿನಲ್ಲಿ ಗುರುವಿನ ಶ್ರಮ ದೊಡ್ಡದು. ಗುರುವಿನ ಶ್ರಮಕ್ಕೆ ಪ್ರತಿಲವಾಗಿ ಶಿಷ್ಯರು ಜವಾಬ್ದಾರಿಯುತ ಪ್ರಜೆಗಳಾಗಿ ರೂಪುಗೊಂಡಿರುವುದು ಸಂತಸದ ಸಂಗತಿ. ಎಂದು ಹೇಳಿದರು
ಈ ಗುರುವಂದನ ಕಾರ್ಯಕ್ರಮಕ್ಕೆ ಶಿಕ್ಷಕರಾದ ಎಲ್ ಜೆ ಚೌಗುಲಾ, ವಿ ಎಸ್ ಸಮಾಜೆ, ಪಿ ಎನ್ ತಳವಾರ್, ಎಸ್ ಎಸ್ ಹಲಕಾಟೆ, ಕೆ ಆರ್ ಪಾಟೀಲ್, ಎಸ್ ಕೆ ಮೇಟಿ, ಎಂ ಬಿ ಪಾಟೀಲ್, ಕೆ ಎಂ ಮಲ್ಲನವರ್, ಟಿ ಎನ್ ಮಾಳೆ, ಎಮ ಬಿ ಕೊರಬು, ಐ ಎಂ ಬಡಿಗೇರ್, ಎಸ್ ಎಸ್ ಪಟ್ಟಣಶೆಟ್ಟಿ, ಎಸ್ ಕೆ ಭಮನಾಳೆ, ಡಿ ಡಿ ನಾಯಕ್, ಕೆ ಬಿ ಸಿಂಧೆ, ಎ ಡಿ ಜಾಧವ್, ಎಸ್ ಎಸ್ ನಿಡಗುಂದೆ, ಕೆ ಎಮ್ ಖೋತ್, ಎಸ್ ಎಸ್ ಕುಲಕರ್ಣಿ, ಬಿ ಬಿ ಪರಿಟ್, ಬಿ ಬಿ ಮಂಜರೆಕರ್ ಹಾಗೂ ಇನ್ನಿತರರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 