ಉತ್ತಮ ಆರೋಗ್ಯವೇ ನಿಜವಾದ ಸಂಪತ್ತು : ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು
Good health is true wealth: Dr. Allama Prabhu Mahaswamy
ಬೆಳಗಾವಿ 25 : ಒಬ್ಬ ವ್ಯಕ್ತಿಯ ಬಳಿ ಎಷ್ಟೇ ಹಣ, ಬಂಗಾರ, ಆಸ್ತಿ ಇದ್ದರೂ ಅವನಿಗೆ ರೋಗಗಳಿದ್ದರೆ ಆ ಸಂಪತ್ತನ್ನು ಅನುಭವಿಸಲು ಸಾಧ್ಯವಿಲ್ಲ. ಧನ-ಸಂಪತ್ತು ಕಳೆದುಹೋದರೆ ಮತ್ತೆ ಗಳಿಸಬಹುದು. ಆದರೆ ಆರೋಗ್ಯ ಒಮ್ಮೆ ಕೈಕೊಟ್ಟರೆ ಮರಳಿ ಪಡೆಯುವುದು ಕಷ್ಟ. ಶಾರೀರಿಕವಾಗಿ ಸದೃಢರಾಗಿದ್ದರೆ ಮಾತ್ರ ಮನಸ್ಸು ಕೂಡ ಉಲ್ಲಾಸದಿಂದ ಇರುತ್ತದೆ. ಆರೋಗ್ಯವಂತ ವ್ಯಕ್ತಿ ಮಾತ್ರ ಸಮಾಜದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಾಧ್ಯ. ಆದ್ದರಿಂದ ಉತ್ತಮ ಆರೋಗ್ಯವೇ ನಮ್ಮೆಲ್ಲರ ನಿಜವಾದ ಸಂಪತ್ತು ಎಂದು ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು. ಅವರು ಇತ್ತೀಚಿಗೆ ಇಲ್ಲಿನ ಶಿವಬಸವ ನಗರದ ಎಸ್. ಜಿ. ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಎಸ್. ಜಿ. ಸಂಬರಗಿಮಠ ಸಭಾಭವನದಲ್ಲಿ ಹಮ್ಮಿಕೊಂಡ ಕಾಲೇಜಿನ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ದೈಹಿಕ ನಿರ್ದೇಶಕ ಡಾ. ಪಿ.ವಿ. ಕಡಗದಕಾಯಿ, ವಿದ್ಯಾರ್ಥಿಗಳು ನಿಯಮಿತವಾಗಿ ಆಟ ಆಡುವುದರಿಂದ ದೇಹದ ರಕ್ತ ಪರಿಚಲನೆ ಸುಧಾರಿಸುತ್ತದೆ ಮತ್ತು ಹೃದಯದ ಆರೋಗ್ಯ ಸಹ ಕಾಪಾಡಬಹುದು. ಅದಲ್ಲದೇ ಸ್ಥೂಲಕಾಯ ಹಾಗೂ ದೇಹದ ಹೆಚ್ಚುವರಿ ತೂಕ ಮತ್ತು ಬೊಜ್ಜನ್ನು ಕರಗಿಸಲು ಕ್ರೀಡೆ ಸಹಾಯಕ. ಎಲ್ಲ ವಿದ್ಯಾರ್ಥಿಗಳು ಪ್ರತಿನಿತ್ಯ ವಿವಿಧ ಕ್ರೀಡೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು.ಕಾಲೇಜಿನ ಆಡಳಿತ ಮಂಡಳಿಯ ಚೇರ್ಮನ್ ಡಾ. ಎಫ್. ವಿ. ಮಾನ್ವಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ದೈಹಿಕ ನಿರ್ದೇಶಕ ಶ್ರೀಧರ ನೇಮಗೌಡ, ಕ್ರೀಡಾ ಸಂಯೋಜಕ ಆನಂದ ಬಂಕದ ವೇದಿಕೆ ಮೇಲೆ ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಬಿ.ಆರ್. ಪಟಗುಂದಿ ಸ್ವಾಗತಿಸಿದರು. ಪ್ರಾಧ್ಯಾಪಕಿ ಲಕ್ಷ್ಮಿ ಪಾಟೀಲ ನಿರೂಪಿಸಿ ಶೃತಿ ಪಾಟೀಲ ವಂದಿಸಿದರು.
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 