ಉತ್ತಮ ಆರೋಗ್ಯದಿಂದ ಕೆಲಸದಲ್ಲಿ ದಕ್ಷತೆ : ಡಾ.ದೀಲೀಷ್ ಶಶಿ
Good health leads to efficiency at work: Dr. Dileesh Shashi
ಲೋಕದರ್ಶನ ವರದಿ
ಕಾರವಾರ ಜೂ.17 :- ಸರ್ಕಾರಿ ನೌಕರರು ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳುವುದರಿಂದ, ಕಚೇರಿಯ ದೈನಂದಿನ ಕರ್ತವ್ಯಗಳನ್ನು ಮತ್ತಷ್ಟು ಉತ್ಸಾಹ ಮತ್ತು ದಕ್ಷತೆಯಿಂದ ಮಾಡಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದೀಲೀಷ್ ಶಶಿ ಹೇಳಿದರು.
ಅವರು ಬುಧವಾರ ಜಿಲ್ಲಾ ಪಂಚಾಯತ್ ಆವರಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಡುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ, ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ನೌಕರರು ದಿನನಿತ್ಯದ ಹಲವು ಒತ್ತಡಗಳಿಂದ ತಮ್ಮ ಆರೋಗ್ಯದ ಕಡೆ ಗಮನ ನೀಡದಿದ್ದಲ್ಲಿ ಸಾರ್ವಜನಿಕರಿಗೆ ಗುಣಮಟ್ಟದ ಸೇವೆಯನ್ನು ಒದಗಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯದ ಕಡೆಗೆ ಹೆಚ್ಚು ಆದ್ಯತೆ ನೀಡಿ, ನಿಯಮಿತವಾಗಿ ತಪಾಸಣೆಗಳನ್ನು ಮಾಡಿಸಿಕೊಳ್ಳುವಂತೆ ತಿಳಿಸಿದ ಅವರು, ನೌಕರರಿಗೆ ಎಲ್ಲಾ ಅಗತ್ಯ ಆರೋಗ್ಯ ಸೇವೆಗಳು ಒಂದೇ ಕಡೆ ದೊರಕಿಸುವ ಉದ್ದೇಶದಿಂದ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿದ್ದು ಇದರ ಸಂಪೂರ್ಣ ಪ್ರಯೋಜನ ಪಡೆಯುವಂತೆ ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 