ಕೆಎಲ್‌ಇ- ಕೃಷಿ ವಿಜ್ಞಾನ ಕೇಂದ್ರದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ

ಕೆಎಲ್‌ಇ- ಕೃಷಿ ವಿಜ್ಞಾನ ಕೇಂದ್ರದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ Good response to Pradhan Mantri Kisan Samman Nidhi program at KLE- Krishi Vigyan Kendra

ಲೋಕದರ್ಶನ ವರದಿ 

        ನೇಸರಗಿ   23:  ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ರೈತಪರ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 23ನೇ ಕಂತಿನ ಹಣ ಬಿಡುಗಡೆ ಸಮಾರಂಭದ ನೇರ ಪ್ರಸಾರವನ್ನು ಐಸಿಎಆರ್‌ಹಿಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರ, ಮತ್ತಿಕೊಪ್ಪದಲ್ಲಿ ರೈತರಿಗೆ ವೀಕ್ಷಿಸಲು ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಾರಕೇಶ್ವರದಲ್ಲಿ ನಡೆದ ಈ ರಾಷ್ಟ್ರೀಯ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದಾದ್ಯಂತ ಸುಮಾರು 9.44 ಕೋಟಿ ರೈತ ಫಲಾನುಭವಿಗಳ ಖಾತೆಗಳಿಗೆ ?18,880 ಕೋಟಿ ಮೊತ್ತವನ್ನು ನೇರ ಲಾಭ ವರ್ಗಾವಣೆ  ಮೂಲಕ ಜಮಾ ಮಾಡಿದರು. 

ಕೆಎಲ್‌ಇ-ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಿದ್ದ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ರೈತರು, ರೈತ ಮಹಿಳೆಯರು ಹಾಗೂ ಕೃಷಿ ಸಖಿಯರು ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮವನ್ನು ವೀಕ್ಷಿಸಿದರು. ರೈತರಿಗೆ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ನೀಡುವ ಜೊತೆಗೆ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನಗಳ ಅಳವಡಿಕೆಯ ಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು. 

        ಬೈಲಹೊಂಗಲ ತಾಲೂಕಿನ ತಹಶೀಲ್ದಾರ ಶ್ರೀ ಸದಾಶಿವ ಸಂಭಾಜಿ ಮಕ್ಕೋಜಿಯವರು ಸಸಿಗೆ ನೀರೆರೆಯುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳುವುದರ ಮೂಲಕ ಸುಸ್ಥಿರ ಕೃಷಿಯನ್ನು ಅಳವಡಿಸಿಕೊಳ್ಳಬೇಕು ಹಾಗೂ ದೇಶದ ಆಹಾರ ಉತ್ಪಾದನೆಯನ್ನು ಬಲಪಡಿಸಬೇಕೆಂದು  ರೈತರಿಗೆ ಕರೆ ನೀಡಿದರು ಹಾಗೂ ಕೆಎಲ್‌ಇ ಸಂಸ್ಥೆಯು ಶಿಕ್ಷಣ, ವೈದ್ಯಕೀಯ, ಕೃಷಿ  ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಶ್ಲಾಘಿಸಿದರು.