ಪೋಲಿಯೊ ಲಸಿಕೆ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ
Good response to polio vaccination campaign
ಲೋಕದರ್ಶನ ವರದಿ
ಹಾರೂಗೇರಿ 28: ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಎರಡು ಹನಿ ಪೋಲಿಯೊ ಲಸಿಕೆ ನೀಡುವ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಕುಡಚಿ ಶಾಸಕ ಮಹೇಂದ್ರ ತಮಣ್ಣವರ ಹೇಳಿದರು.
ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಕ್ಕಳಲ್ಲಿ ಪೋಲಿಯೊ ವಿರುದ್ಧ ರೋಗನಿರೋಧಕ ಶಕ್ತಿ ಹೆಚ್ಚಿಸಲು ಲಸಿಕೆ ಅತ್ಯಗತ್ಯವಾಗಿದ್ದು, ಸಾರ್ವಜನಿಕರು ಯಾವುದೇ ಗೊಂದಲವಿಲ್ಲದೆ ತಮ್ಮ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು.
ರಾಯಬಾಗ ತಾಲೂಕಿನಲ್ಲಿ ಈವರೆಗೆ 47,533 ಮಕ್ಕಳನ್ನು ಗುರುತಿಸಲಾಗಿದ್ದು, 217 ಲಸಿಕಾ ಕೇಂದ್ರಗಳು, 423 ತಂಡಗಳು ಹಾಗೂ 868 ಲಸಿಕಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ವೈದ್ಯಾಧಿಕಾರಿ ಡಾ. ಎಸ್.ಎಂ. ಪಾಟೀಲ ಮಾಹಿತಿ ನೀಡಿದರು.
ಬೂತ್ಗಳಿಗೆ ಬರಲು ಸಾಧ್ಯವಾಗದ ಮಕ್ಕಳಿಗೆ ಮುಂದಿನ ಮೂರು ದಿನಗಳಲ್ಲಿ ಆಶಾ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ಲಸಿಕೆ ನೀಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದರು. ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 