ಉತ್ತಮ ಫಲಿತಾಂಶ
ಧಾರವಾಡ 08 : ಕೆ.ಇ. ಬೋರ್ಡಿನ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಆಕಾಶ ಲಮಾಣಿ 574 ಅಂಕಗಳನ್ನು ಗಳಿಸಿ ಕಲಾ ವಿಭಾಗದಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. 12 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 65 ವಿದ್ಯಾರ್ಥಿಗಳು ಪ್ರಥಮವರ್ಗದಲ್ಲಿ ಪಾಸಾಗಿದ್ದಾರೆ. ಕುಮರಿ. ಸವಿತಾ ತಳವಾರ 557 ಅಂಕಗಳನ್ನು ಗಳಿಸಿ ವಾಣಿಜ್ಯ ವಿಭಾಗದಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಸಾಧನೆಗೈದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಚೇರಮನ್ನರು, ಕಾರ್ಯದರ್ಶಿಗಳು ಆಡಳಿತ ಮಂಡಳಿ, ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.