ಬೆಂಗಳೂರು, ಮೇ 9,ಸ್ವಾತಂತ್ರ್ಯಪೂರ್ವ ಭಾರತದ ಮಹಾನ್ ರಾಜಕೀಯ ನಾಯಕರು, ಸಮಾಜ ಸುಧಾರಕರೂ ಆದ ಗೋಪಾಲಕೃಷ್ಣ ಗೋಖಲೆಯವರ ಜಯಂತಿಯಂದು ಅವರಿಗೆ ನಮನಗಳನ್ನು ಸಲ್ಲಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕೂಡ ಟ್ವೀಟ್ ಮಾಡಿ ಗೋಪಾಲಕೃಷ್ಣ ಗೋಖಲೆ ಅವರಿಗೆ ಗೌರವ ಸಲ್ಲಿಸಿದ್ದಾರೆ.