ಗೋಟೂರು ರಸ್ತೆ ದುರಸ್ತಿ ಆರಂಭ; ವಾಹನ ಸವಾರರಿಗೆ ನೆಮ್ಮದಿ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಸೂಚನೆ ಮೇರೆಗೆ ಕಾಮಗಾರಿ ಚುರುಕು

ಗೋಟೂರು ರಸ್ತೆ ದುರಸ್ತಿ ಆರಂಭ; ವಾಹನ ಸವಾರರಿಗೆ ನೆಮ್ಮದಿ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಸೂಚನೆ ಮೇರೆಗೆ ಕಾಮಗಾರಿ ಚುರುಕು Gotur road repair begins; peace of mind for motorists: Work expedited on instructions from MP Priyan

ಲೋಕದರ್ಶನ ವರದಿ 

ಚಿಕ್ಕೋಡಿ  07: ತೀವ್ರ ಹದಗೆಟ್ಟಿದ್ದ ಚಿಕ್ಕೋಡಿ-ಗೋಟೂರು-ಕಾಗವಾಡ್ ರಸ್ತೆಯ ದುರಸ್ತಿ ಕಾಮಗಾರಿ ಕೊನೆಗೂ ಆರಂಭಗೊಂಡಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರಲ್ಲಿ ಸಮಾಧಾನ ಮೂಡಿಸಿದೆ. ಕಳೆದ ಹಲವು ತಿಂಗಳುಗಳಿಂದ ರಸ್ತೆಯಲ್ಲಿದ್ದ ದೊಡ್ಡ ಗುಂಡಿಗಳು, ಕಿರಿದಾದ ಮಾರ್ಗ ಮತ್ತು ಅಸಮರ​‍್ಕ ನಿರ್ವಹಣೆಯಿಂದ ಪ್ರಯಾಣಿಕರು ಜೀವವನ್ನು ಕೈಯಲ್ಲಿ ಹಿಡಿದು ಸಂಚರಿಸುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು.ಈ ಕುರಿತು ಸಾರ್ವಜನಿಕರಿಂದ ನಿರಂತರವಾಗಿ ದೂರುಗಳು ವ್ಯಕ್ತವಾಗುತ್ತಿದ್ದ ಹಿನ್ನೆಲೆಯಲ್ಲಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ರಸ್ತೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವ ಭರವಸೆ ನೀಡಿದ್ದರು.

ಅವರ ಸಲಹೆ ಹಾಗೂ ಸೂಚನೆ ಮೇರೆಗೆ ಇದೀಗ ತಾತ್ಕಾಲಿಕ ದುರಸ್ತಿ ಕಾರ್ಯ ಚುರುಕುಗೊಂಡಿದೆ.ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಗೋಟೂರು-ಬಿಜಾಪುರ ಮಾರ್ಗವನ್ನು ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯಾಗಿ ಅಭಿವೃದ್ಧಿಪಡಿಸುವ ಯೋಜನೆ ಕೈಗೆತ್ತಿಕೊಳ್ಳಲಾಗಿದ್ದು, ಇದಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆಯೂ ಪೂರ್ಣಗೊಂಡಿದೆ. ಪ್ರಯಾಣಿಕರ ಸುಗಮ ಸಂಚಾರದ ದೃಷ್ಟಿಯಿಂದ ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ತಾತ್ಕಾಲಿಕ ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ.ಬಿಜಾಪುರ-ಮುರುಗುಂಡಿ ವಿಭಾಗದ ಸುಮಾರು 80 ಕಿ.ಮೀ. ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು, ಉಳಿದಿರುವ ಮುರುಗುಂಡಿ-ಗೋಟೂರು ವಿಭಾಗದ ಕಾಮಗಾರಿ ಮುಂದುವರಿದಿದೆ. ಪ್ರಸ್ತುತ ಕಾಗವಾಡ್‌ನಿಂದ ಮಂಜರಿ ವರೆಗೆ ರಸ್ತೆ ದುರಸ್ತಿ ಕಾರ್ಯ ಆರಂಭವಾಗಿದೆ.

ಕಳೆದ ಕೆಲವು ದಿನಗಳಿಂದ ಈ ರಸ್ತೆಯಲ್ಲಿ ಅನೇಕ ಅಪಘಾತಗಳು ಸಂಭವಿಸಿದ್ದವು. ವಿಶೇಷವಾಗಿ ದ್ವಿಚಕ್ರ ವಾಹನ ಸವಾರರು ಅಪಾಯದ ನಡುವೆ ಸಂಚರಿಸಬೇಕಾಗಿತ್ತು. ಇದೀಗ ದುರಸ್ತಿ ಕಾರ್ಯ ಆರಂಭಗೊಂಡಿರುವುದರಿಂದ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ.ಕೋಟ್ಬಿಜಾಪುರ-ಗೋಟೂರು ಹೆದ್ದಾರಿಯ ಕಾಮಗಾರಿ ಹಂತ ಹಂತವಾಗಿ ನಡೆಯುತ್ತಿದೆ. ಬಿಜಾಪುರ-ಮುರುಗುಂಡಿ ವಿಭಾಗ ಪೂರ್ಣಗೊಂಡಿದ್ದು, ಉಳಿದ ಭಾಗದಲ್ಲೂ ಕೆಲಸ ಮುಂದುವರಿದಿದೆ. ಚಿಕ್ಕೋಡಿಯಿಂದ ಬೆಳಗಾವಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿರುವುದರಿಂದ ಸಾರ್ವಜನಿಕರ ಒತ್ತಾಯದ ಮೇರೆಗೆ ದುರಸ್ತಿ ಕಾರ್ಯ ಆರಂಭಿಸಲಾಗಿದೆ,  ಪ್ರಿಯಾಂಕಾ ಜಾರಕಿಹೊಳಿ ಸಂಸದರು ಚಿಕ್ಕೋಡಿ