ಯಾದಗಿರಿ,
ಡಿ.18 ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ ಆರ್ ಟಿಸಿ) ಬಸ್ಸೊಂದು ಪಲ್ಟಿಯಾದ ಪರಿಣಾಮ
10 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮದ
ಬಳಿ ಈ ಅಪಘಾತ ಸಂಭವಿಸಿದೆ. ಅಡ್ಡ ಬಂದ ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ, ಚಾಲಕನ
ನಿಯಂತ್ರಣ ತಪ್ಪಿ ಬಸ್ಸು ಪಲ್ಟಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ 10 ಕ್ಕೂ ಹೆಚ್ಚು ಪ್ರಯಾಣಿಕರು
ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನೆಗೆ ಸಂಬಂಧಿಸಿದಂತೆ ಭೀಮರಾಯನಗುಡಿ
ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.