ಕೊರೋನಾ ನಿಯಂತ್ರಣಕ್ಕಾಗಿ ಸರ್ಕಾರದ ನಿರ್ದೇಶನಗಳನ್ನು ಪಾಲಿಸಿ: ಗೋವಿಂದ ಎಂ ಕಾರಜೋಳ
ಬಾಗಲಕೋಟೆ, ಮಾ.28,ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ಹಾಗೂ ಜಿಲ್ಲಾಡಳಿತದ ಸಲಹೆ ಸೂಚನೆಗಳನ್ನು ಸಾರ್ವಜನಿಕರು ಪಾಲಿಸಿ ತಮ್ಮ ತಮ್ಮ ಕುಟುಂಬ ಪರಿವಾರದ ಆರೋಗ್ಯ ರಕ್ಷಣೆಗಾಗಿ ಸಹಕರಿಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಮನವಿ ಮಾಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಇಂದು ಅಧಿಕಾರಿಗಳೊಂದಿಗೆ ಕೊರೊನಾ ಕುರಿತು ಸಭೆ ನಡೆಸಿದ ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ 4 ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದ್ದು, ದಿನದ 24ಗಂಟೆ ಚೆಕ್ ಪೋಸ್ಟ್ ಗಳು ಕಾರ್ಯನಿರ್ವಹಿಸುತ್ತಿವೆ. 16,929 ವಾಹನಗಳಲ್ಲಿ ಪ್ರಯಾಣಿಸುತ್ತಿದ್ದ. 91,717 ಜನರನ್ನು ತಪಾಸಣೆ ಮಾಡಲಾಗಿದೆ. ಜಿಲ್ಲೆಗೆ ವಿದೇಶಗಳಿಂದ ಹಿಂದುರಿಗಿದ 165 ಜನರನ್ನು ಹೋಮ್ ಕ್ವಾರಂಟೈನ್ ನಲ್ಲಿಡಲಾಗಿದೆ.10 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಎಲ್ಲಾ ಮಾದರಿಗಳು ನೆಗಿಟಿವ್ ಆಗಿದೆ ಎಂದು ಅವರು ಮಾಹಿತಿ ನೀಡಿದರು.
ಬಾಗಲಕೋಟೆ ನಗರದಲ್ಲಿರುವ ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ದಲ್ಲಿ 12 ಬೆಡ್ ಗಳ ಐಸೊಲೇಷನ್ ವಾರ್ಡ್ ತೆರೆಯಲಾಗಿದೆ. ಜಿಲ್ಲೆಯಲ್ಲಿ 12 ಫೀವರ್ ಕ್ಲೀನಿಕ್ ಗಳನ್ನು ತೆರೆಯಲಾಗಿದೆ. 11 ವೆಂಟಿಲೇಟರ್ ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. 3 ತಾತ್ಕಾಲಿಕ ಹಾಸ್ಟಲ್ ಗಳನ್ನು ಗುರುತಿಸಿ, ಅದರಲ್ಲಿ ಎಸ್ ಐಸಿ ಗಳನ್ನು ತೆರೆಯಲಾಗಿದೆ. ಜಿಲ್ಲೆಯಲ್ಲಿ ಎಲ್ಲಾ ಐತಿಹಾಸಿಕ ಪ್ರವಾಸಿ ತಾಣಗಳು, ಧಾರ್ಮಿಕ ಕೇಂದ್ರಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಕಲಂ 144 ಜಾರಿಗೊಳಿಸಲಾಗಿದೆ. ಸರಕು ಸಾಗಾಣಿಕೆ ವಾಹನಗಳ ಮಾಲೀಕರ ಜೊತೆಗೆ ಸಭೆ ನಡೆಸಿ ಅವಶ್ಯಕ ಸಾಮಗ್ರಿಗಳನ್ನು ಮಾತ್ರ ಪೂರೈಕೆ ಮಾಡುವಂತೆ ಸೂಚಿಸಲಾಗಿದೆ. ಸಾರಿಗೆ ಸೇವೆಯನ್ನು ನಿರ್ಬಂಧಿಸಲಾಗಿದೆ ಎಂದು ಅವರು ತಿಳಿಸಿದರು.
ಮಾರ್ಚ್ ತಿಂಗಳ ಪಡಿತರವನ್ನು ವಿತರಿಸಲಾಗಿದ್ದು, ಏಪ್ರಿಲ್ ಮೊದಲ ವಾರದಲ್ಲಿ ಎರಡು ತಿಂಗಳ ಪಡಿತರವನ್ನು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ವಿತರಿಸಲಾಗುವುದು. ಸ್ವಚ್ಛತೆಯನ್ನು ಕಾಪಾಡಿ, ಶುದ್ದ ಕುಡಿಯುವ ನೀರು ಪೂರೈಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜಿಲ್ಲಾ ಆಡಳಿತವು ಕೊರೊನಾ ನಿಯಂತ್ರಣಕ್ಕಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಮತ್ತಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು. ಶಾಸಕರಾದ ಡಾ. ವೀರಣ್ಣ ಚರಂತಿಮಠ, ಸಂಸದ ಪಿ.ಸಿ. ಗದ್ದಿಗೌಡರ, ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ, ಜಿ.ಪಂ. ಸಿಇಓ, ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ, ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 