ಸರಕಾರಿ ಆಂಗ್ಲ ಮಾಧ್ಯಮ ಶಾಲೆಗೆ ಚಾಲನೆ
ಬೆಂಗಳೂರು, ಜೂ 14 : ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮವನ್ನು ತೆರೆಯುತ್ತಿರುವುದರಿಂದ ಕನ್ನಡ ಭಾಷೆಯನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಯಾರೂ ಭಾವಿಸಬಾರದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದರು. ವಿಧಾನಸೌಧದ ಬ್ಯಾಂಕ್ಟೆಟ್ ಸಭಾಂಗಣದಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ 1 ಸಾವಿರ ಪ್ರಾಥಮಿಕ ಶಾಲೆಗಳಲ್ಲಿ 1ನೇ ತರಗತಿ ಆಂಗ್ಲ ಮಾಧ್ಯಮ ಹಾಗೂ 100 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳ ಪ್ರಾರಂಭ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಮಾತೃಭಾಷೆಯನ್ನು ರಕ್ಷಣೆ ಮಾಡುವ ಜೊತೆ ಜೊತೆಗೆ ಸರಕಾರಿ ಶಾಲೆಯಲ್ಲೂ ಆಂಗ್ಲ ಮಾಧ್ಯಮ ತೆರೆಯಲಾಗಿದೆ. ಪ್ರಸ್ತುತ ಸ್ಮಧರ್ಾತ್ಮಕ ಯುಗದಲ್ಲಿ ಆಂಗ್ಲ ಮಾಧ್ಯಮ ಅವಶ್ಯಕ. ಸರಕಾರಿ ಶಾಲೆ ಬಗ್ಗೆ ನಿರ್ಲಕ್ಷ್ಯ ಬೇಡ. ನಾವೆಲ್ಲರೂ ಸಹ ಸರಕಾರಿ ಶಾಲೆಯಲ್ಲಿಯೇ ಶಿಕ್ಷಣ ಪಡೆದಿದ್ದು. ಗೊಲ್ಲಹಳ್ಳಿ ಎಂಬ ಹಳ್ಳಿಯ ಸರಕಾರಿ ಶಾಲೆಯಲ್ಲಿ ಓದಿದ ನಾನು ಆಸ್ಟ್ರೇಲಿಯಾದಲ್ಲಿ ಡಾಕ್ಟರೇಟ್ ಮಾಡಿದ್ದೇನೆ. ಸರಕಾರಿ ಶಾಲೆ ಎಂದೂ ನಿರ್ಲಕ್ಷ್ಯ ಆಗಬಾರದು ಎಂದರು. ಇಡೀ ದೇಶದಲ್ಲಿ ಕರ್ನಾಟಕ ಶಿಕ್ಷಣದಲ್ಲಿ ಮಾದರಿ ರಾಜ್ಯ ಆಗಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರಕಾರ 1200 ಕೋಟಿ ರೂ.ಗಳನ್ನು ಸರಕಾರಿ ಶಾಲೆಗಳ ಆಧುನೀಕರಣಕ್ಕೆ ಮೀಸಲಿಟ್ಟಿದೆ. ನಮ್ಮಸರಕಾರದ ಆದ್ಯತೆ ಶಿಕ್ಷಣ ಕ್ಷೇತ್ರ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಶಾಸಕ ರೋಷನ್ ಬೇಗ್ ಇತರರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 