ಪಟ್ಟಣಕ್ಕೆ ಸರ್ಕಾರಿ ಮೌಲಾನಾ ಆಜಾದ್ ಮಾದರಿ ಶಾಲೆ ಮಂಜೂರಾತಿ
Government Maulana Azad Model School sanctioned for the town
ದೇವರಹಿಪ್ಪರಗಿ 08: ಪಟ್ಟಣಕ್ಕೆ ಸರ್ಕಾರಿ ಮೌಲಾನಾ ಆಜಾದ್ ಮಾದರಿ ಶಾಲೆ ಮಂಜೂರಾತಿ ನೀಡಲಾಗಿದೆ ಎಂದು ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಲೂಕಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಇರುವುದನ್ನು ಪರಿಗಣಿಸಿ ಕಳೆದ ವರ್ಷ ಮಂಜೂರಾತಿ ಸರ್ಕಾರ ನೀಡಲಾಗಿತ್ತು. ಅನಿವಾರ್ಯ ಕಾರಣದಿಂದ ಬೇರೆ ತಾಲೂಕಿಗೆ ವರ್ಗಾವಣೆ ಮಾಡಲಾಗಿತ್ತು. ಇದನ್ನು ಪರಿಗಣಿಸಿ ವಿದ್ಯಾರ್ಥಿಗಳ ಉನ್ನತಿಕರಣಕ್ಕೆ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆ ಬೇಡಿಕೆಯನ್ನು ಮತ್ತೊಮ್ಮೆ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಒತ್ತಾಯಿಸಲಾಗಿತ್ತು.
ಅದರ ಫಲವಾಗಿ ಇಂದು ಈ ಶಾಲೆ ಮಂಜೂರಾತಿ ಆಗಿದೆ ಮತಕ್ಷೇತ್ರದ ಜನರ ಪರವಾಗಿ ಸಚಿವರಿಗೆ ಕೃತಜ್ಞತೆಗಳನ್ನು ತಿಳಿಸುತ್ತೇನೆ. ಈಗಾಗಲೇ ರಾಜ್ಯದಲ್ಲಿ ಸನ್ 2024-25ನೇ ಆಯವ್ಯಯ ಭಾಷಣದ ಕಂಡಿಕೆ-184(3)ರಲ್ಲಿ ಘೋಷಿಸಿರುವಂತೆ 2025-26ನೇ "50 ಹೊಸ ಮೌಲಾನಾ ಅಜಾದ್ ಮಾದರಿ ಶಾಲೆಗಳನ್ನು ಪ್ರಾರಂಭಿಸಲು ಸರ್ಕಾರ ಮಂಜೂರಾತಿ ನೀಡಲಾಗಿದೆ ಎಂದು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 