ಸರಕಾರಿ ವೈದ್ಯಕೀಯ ಕಾಲೇಜು ಹೋರಾಟದ ಪತ್ರ ಚಳುವಳಿ
Government Medical College Struggle Letter Movement
ವಿಜಯಪುರ 04: 48 ನೇ ದಿನಕ್ಕೆ ಕಾಲಿಟ್ಟ ಸರಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿಯಿಂದ ವಿಜಯಪುರ ಜಿಲ್ಲೆಯ ವಿವಿಧ ರೀತಿಯ ಚಳುವಳಿಯಂತೆ ಪತ್ರ ಚಳುವಳಿಯನ್ನು ಕೂಡ ಹಮ್ಮಿಕೊಳ್ಳಲಾಗಿದೆ. ಅದರಂತೆ ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಮಿರಗಿ ಗ್ರಾಮದಲ್ಲಿ ಸಿದ್ರಾಮ ಹಳ್ಳೂರ ರವರ ನೇತೃತ್ವದಲ್ಲಿ, ಬಬಲೇಶ್ವರ ತಾಲ್ಲೂಕಿನ ಸಾರವಾಡ ಗ್ರಾಮದಲ್ಲಿ ಮಲ್ಲಿಕಾರ್ಜುನ ಬಟಗಿ ಯವರ ನೇತೃತ್ವದಲ್ಲಿ, ದೇವರ ಹಿಪ್ಪರಗಿ ತಾಲ್ಲೂಕಿನ ಜಾಲವಾದಿ ಗ್ರಾಮಗಳಲ್ಲಿ ಮಹದೇವಿ ಧರ್ಮಶೆಟ್ಟಿಯವರ ನೇತೃತ್ವದಲ್ಲಿ ಪತ್ರ ಚಳುವಳಿಯನ್ನ ಹಮ್ಮಿಕೊಂಡು ಗ್ರಾಮದ ಜನರಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಏಕೆ ಅವಶ್ಯಕತೆ ಎಂಬುದರ ಕುರಿತು ಜಾಗೃತಿ ಮೂಡಿಸಿ ಪತ್ರ ಬರೆಯಿಸಿ ಮಾನ್ಯ ಮುಖ್ಯಮಂತ್ರಿಗಳಿಗೆ ಸ್ಥಳೀಯವಾಗಿ ಪೋಸ್ಟ್ ಮಾಡುವ ಮುಖಾಂತರ ಮಾನ್ಯ ಮುಖ್ಯಮಂತ್ರಿಯವರಿಗೆ ರವಾನಿಸುತ್ತಿದ್ದಾರೆ. ಈ ಹೋರಾಟದಲ್ಲಿ ಅಕ್ರಮ ಮಾಷಳಕರ, ಲಲಿತಾ ಬಿಜ್ಜರಗಿ, ಲಕ್ಷ್ಮಣ ಹಂದ್ರಾಳ,ಮಲ್ಲಿಕಾರ್ಜುನ ಹೆಚ್ ಟಿ, ಮಲ್ಲಿಕಾರ್ಜುನ ಬಟಗಿ, ಶ್ರೀನಾಥ್ ಪೂಜಾರಿ, ಅಬ್ದುಲ್ ರೆಹಮಾನ್ ನಾಸಿರ್, ಬೋಗೇಶ್ ಸೋಲಾಪುರ ವಿಶ್ವನಾಥ್ ಪಟ್ಟಣಶೆಟ್ಟಿ, ಗೀತಾ ಹೆಚ್, ಭರತಕುಮಾರ ಹೆಚ್ ಟಿ, ಗೀರೀಶ್ ಕಲಘಟಗಿ, ಜಗದೇವ ಸೂರ್ಯವಂಶಿ, ಸಲೀಮ್, ಎಮ್ ಎಸ್ ಗುರಿಕಾರ, ಸಿ ಬಿ ಪಾಟೀಲ ಜ್ಯೋತಿ ಮಿಣಜಗಿ, ಸುಶೀಲ ಮಿಣಜಗಿ ಮುಂತಾದವರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 