ನಾಗರಮುನ್ನೊಳ್ಳಿಯಲ್ಲಿ ಸರಕಾರಿ ಪಿಯು ಕಾಲೇಜು ಆರಂಭ
Government PU College opens in Nagaramunnolli
ಗ್ರಾಮೀಣ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ: ಸಚಿವ ಸತೀಶ ಜಾರಕಿಹೊಳಿ
ಪ್ರಕಾಶ ಹುಕ್ಕೇರಿ ಪ್ರಯತ್ನದಿಂದ ಕಾಲೇಜು ಮಂಜೂರು: ಮರ್ಯಾಯಿ
ಚಿಕ್ಕೋಡಿ 04: ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದ್ದು, ನಾಗರಮುನ್ನೊಳ್ಳಿ ಗ್ರಾಮಕ್ಕೆ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಮಂಜೂರಾಗಿ ಪ್ರಥಮ ವರ್ಷದ ವಾಣಿಜ್ಯ ವಿಭಾಗಕ್ಕೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ ಎಂದು ಮುಖಂಡ ಸಿದ್ದಪ್ಪ ಮರ್ಯಾಯಿ ಹೇಳಿದರು.
ತಾಲೂಕಿನ ನಾಗರಮುನ್ನೊಳ್ಳಿ ಗ್ರಾಮದಲ್ಲಿ ನೂತನವಾಗಿ ಆರಂಭವಾದ ಪಿಯು ಕಾಲೇಜಿನಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ವಿತರಣೆ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಗ್ರಾಮಕ್ಕೆ ಪಿಯು ಕಾಲೇಜು ಮಂಜೂರು ಆಗಲು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹಾಗೂ ವಿಪ ಸದಸ್ಯ ಪ್ರಕಾಶ ಹುಕ್ಕೇರಿ ಅವರ ವಿಶೇಷ ಪ್ರಯತ್ನ ಕಾರಣವಾಗಿದೆ. ಕಾಲೇಜು ಬೆಳವಣಿಗೆಗೆ ಗ್ರಾಮಸ್ಥರ ಸಹಕಾರ ಅಗತ್ಯ ಎಂದು ಅವರು ತಿಳಿಸಿದರು.ಯುವ ಮುಖಂಡ ಶಿವಾನಂದ ಮರ್ಯಾಯಿ ಮಾತನಾಡಿ, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲೇ ಕಾಲೇಜು ಆರಂಭವಾಗಿರುವುದು ಸಂತಸದ ವಿಷಯ. ಸಚಿವ ಸತೀಶ ಜಾರಕಿಹೊಳಿ ಅವರೊಂದಿಗೆ ಸಂಪರ್ಕಿಸಿ, ಪಪೂ ಇಲಾಖೆಯ ನಿರ್ದೇಶಕಿ ರಶ್ಮೀ ಮಹೇಶ್ ಅವರೊಂದಿಗೆ ಮಾತುಕತೆ ನಡೆಸಿದ ಪರಿಣಾಮ ತಕ್ಷಣ ಕ್ರಮ ಕೈಗೊಂಡು ಈ ವರ್ಷವೇ ಪ್ರವೇಶ ಪ್ರಕ್ರಿಯೆ ಆರಂಭಿಸಲಾಗಿದೆ ಎಂದರು. ಮುಂದಿನ ವರ್ಷದಿಂದ ಕಲಾ ಮತ್ತು ವಿಜ್ಞಾನ ವಿಭಾಗಗಳನ್ನು ಪ್ರಾರಂಭಿಸುವ ಯೋಜನೆ ಇದೆ ಎಂದು ತಿಳಿಸಿದರು.ಬಿಜೆಪಿ ಯುವ ಮುಖಂಡ ರಮೇಶ್ ಕಾಳನ್ನವರ ಮಾತನಾಡಿ, ಗ್ರಾಮದಲ್ಲಿ ಪಿಯು ಕಾಲೇಜು ಆರಂಭವಾಗಿರುವುದು ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷೆ ರಾಜಮಾತಾ ಮುಲ್ತಾನಿ, ಗುಲಾಬ ಜಮಾದಾರ, ಎಂ.ಕೆ. ಖೋತ, ಮಾರುತಿ ಮರ್ಯಾಯಿ, ಶಿವಪುತ್ರ ಮನಗೂಳಿ, ಸದಾಶಿವ ಮಠದ, ಸಂಜು ಧನವಾಡೆ, ದಸ್ತಗೀರ ಮುಲ್ತಾನಿ, ಎಂ.ಬಿ. ಆಲೂರೆ, ರಾಜು ಕುಂಬಾರ, ಪ್ರಭಾರಿ ಪ್ರಾಚಾರ್ಯ ಎಸ್.ಕೆ. ಕುರಬರ, ಲಕ್ಷ್ಮೀಸಾಗರ ಈಟಿ. ಬಾಬು ಕಾಳನ್ನವರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 