ಏತ ನೀರಾವರಿಯಿಂದ 137 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸರ್ಕಾರ ಅಸ್ತು
Government approves project to fill 137 lakes with water through lift irrigation
ಏತ ನೀರಾವರಿಯಿಂದ 137 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸರ್ಕಾರ ಅಸ್ತು
ಬ್ಯಾಡಗಿ 06: ತಾಲೂಕ ಹಾಗೂ ಹಾನಗಲ್ ತಾಲೂಕಿನ 137 ಕೆರೆಗಳಿಗೆ ಗುಡ್ಡದ ಮಲ್ಲಾಪುರ ಏತ ನೀರಾವರಿ ಯೋಜನೆಯಿಂದ ಪೈಪ್ ಲೈನ್ ಮೂಲಕ ನೀರು ತುಂಬಿಸುವ ಯೋಜನೆಗೆ ರಾಜ್ಯ ಸರ್ಕಾರ 150 ಕೋಟಿ ರೂ.ಗಳ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಮೊದಲ ಹಂತದಲ್ಲಿ 50 ಕೋಟಿ ರೂ.ಗಳ ಮೊತ್ತದ ಕಾಮಗಾರಿ ಕೈಕೊಳ್ಳಲು ರಾಜ್ಯ ಸಚಿವ ಸಂಪುಟದಿಂದ ಅನುಮತಿ ದೊರೆತಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ತಿಳಿಸಿದ್ದಾರೆ.
ಅವರು ಶುಕ್ರವಾರ ಸುದ್ದಿಗಾರರೊಂದಿಗೆ ವಿಷಯ ಹಂಚಿಕೊಂಡಿದ್ದು, ಈ ಭಾಗದ ಜನರ ಜೀವನಾಡಿಯಾದ ಈ ಗುಡ್ಡದ ಮಲ್ಲಾಪುರ ಏತ ನೀರಾವರಿ ಯೋಜನೆಯು ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿತ್ತು, ತಾಲ್ಲೂಕಿನ ಅನೇಕ ಹಳ್ಳಿಗಳ ನೂರಾರು ಕೆರೆಗಳು ನೀರಿನಿಂದ ತುಂಬಿಕೊಂಡು ಸಮೃದ್ಧಗೊಳ್ಳಲಿವೆ. ಇದರಿಂದಾಗಿ ಯೋಜನೆಯ ವ್ಯಾಪ್ತಿಗೆ ಸೇರಲಿರುವ ಗ್ರಾಮೀಣ ಪ್ರದೇಶದ ನೀರಾವರಿ ವ್ಯಾಪ್ತಿಗೆ ಒಳ ಪಟ್ಟ ಭೂಮಿಯಲ್ಲಿ ಅಂತರ್ ಜಲ ಮಟ್ಟ ಹೆಚ್ಚಲಿದ್ದು, ಸಾವಿರಾರು ಎಕರೆ ಜಮೀನಿಗೆ ನೀರಾವರಿ ಸೌಲಭ್ಯ ಸಿಗುವ ಉದ್ದೇಶದಿಂದತಾಲ್ಲೂಕಿನ ಗುಡ್ಡದ ಮಲ್ಲಾಪುರ ಏತ ನೀರಾವರಿ ಯೋಜಏನೆಏಯನ್ನು ರೂಪಿಸಲಾಗಿದೆ. ಪ್ರತಿ ವರ್ಷ ಜೂನ್ ಜುಲೈ ತಿಂಗಳ ಆರಂಭದಿಂದ ಸತತ ನಾಲ್ಕು ತಿಂಗಳ ಅವಧಿ ವರೆಗೆ ನದಿ ಪ್ರವಾಹ ಬರುವ ಸಮಯದಲ್ಲಿ ನದಿಯಿಂದ ನೀರು ಎತ್ತಿ ಕೆರೆಗಳಿಗೆ ನೀರಿನ ಸೌಲಭ್ಯ ಒದಗಿಸಲಾಗುವುದು.ಪೈಪ್ ಲೈನ್ ಮೂಲಕ ಕೆರೆ ತುಂಬಿಸುವ ಈ ಯೋಜನೆಯು, ಬರಲಿರುವ ಒಂದೇ ವರ್ಷದಲ್ಲಿ ಯೋಜನೆಯ ಕಾಮಗಾರಿಯನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.
ಮಲೆನಾಡ ಭಾಗದ ಕೆರೆಗಳು ಗುಡ್ಡದ ಮಲ್ಲಾಪುರ ಏತ ನೀರಾವರಿ ಯೋಜನೆಯಿಂದ ನೀರು ತುಂಬಿ ನೂರಾರು ರೈತರ ದಶಕದ ಕನಸು ನನಸಾಗಲಿದೆ. ನಾನು ಈ ಭಾಗದ ಜನರಿಗೆ ಶಾಶ್ವತ ಯೋಜನೆ ಮಾಡಬೇಕೆನ್ನುವ ಉದ್ದೇಶದಿಂದ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಮುಂದಿನ ಹಂಗಾಮಿನಿಂದಲೇ ಈ ಭಾಗದಲ್ಲಿರುವ ಗ್ರಾಮದ ಕೆರೆಗಳಿಗೆ ಈ ಯೋಜನೆಯ ಮೂಲಕ ನೀರು ಹರಿಸಲಾಗುತ್ತಿದೆ. ಈ ಗುಡ್ಡದ ಮಲ್ಲಾಪುರ ಏತ ನೀರಾವರಿ ಯೋಜನೆಯ ಅನುಷ್ಠಾನಕ್ಕೆ ಸಹಕಾರ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವ ಸಂಪುಟದ ಎಲ್ಲ ಸಚಿವರಿಗೆ ಹಾಗೂ ಈ ಯೋಜನೆಯ ಫಲಾನುಭವಿಗಳಾದ ರೈತರಿಗೆ ಸೇರಿದಂತೆ ಎಲರಿಗೂ ಶಾಸಕರು ಧನ್ಯವಾದಗಳನ್ನು ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 