15 ವರ್ಷ ಮೀರಿದ ವಾಹನಗಳ ಸ್ಕ್ರ್ಯಾಪ್‌ಗೆ ಸರ್ಕಾರದಿಂದ ಅನುಮೋದನೆ: ರಾಮಲಿಂಗಾರೆಡ್ಡಿ
Government approves scrapping of vehicles over 15 years old: Ramalinga Reddy
ಬೆಳಗಾವಿ ಸುವರ್ಣ ವಿಧಾನಸೌಧ ಡಿ.17: ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆ, ನಿಗಮ, ಮಂಡಳಿ, ನಗರಸಭೆ, ಸರ್ಕಾರದ ಇತರೆ ಅಧೀನ ಸಂಸ್ಥೆಗಳಿಗೆ ಸೇರಿದ ನೋಂದಣಿಯಾಗಿ ಹದಿನೈದು (15) ವರ್ಷ ಮೀರಿದ ವಾಹನಗಳನ್ನು ಕಡ್ಡಾಯವಾಗಿ ರಾಜ್ಯದಲ್ಲಿ ಸ್ಥಾಪಿತವಾಗಿರುವ ರಿಜಿಸ್ಟರ್ಡ ವೆಹಿಕಲ್ ಸ್ಕ್ರ್ಯಾಪಿಂಗ್ ಫ್ಯಾಸಿಲಿಟಿ (Registered Vehicle Scrapping Facility) ಗಳಲ್ಲಿಯೇ ಸ್ಕ್ರ್ಯಾಪ್ ಮಾಡಲು ರಾಜ್ಯ ಸರ್ಕಾರವು ಕಳೆದ ಸೆಪ್ಡೆಂಬರ್ 12ರಂದು ಅನುಮೋದನೆ ನೀಡಲಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಮಾಹಿತಿ ನೀಡಿದರು.
ಪರಿಷತ್ತಿನಲ್ಲಿ ಡಿ.17ರಂದು ಸದಸ್ಯರಾದ ಗೋವಿಂದ ರಾಜು ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಎನ್.ಐ.ಸಿ. ಅವರು ಒದಗಿಸಿರುವ ಮಾಹಿತಿಯ ಪ್ರಕಾರ ದಿನಾಂಕ:04-12-2025ರ ಅಂತ್ಯಕ್ಕೆ ಒಟ್ಟು 18,552 ಹದಿನೈದು (15) ವರ್ಷಗಳು ಮೀರಿದ (ಸಾರಿಗೆ ಸಂಸ್ಥೆಗಳ ಬಸ್ಸುಗಳನ್ನು ಹೊರತುಪಡಿಸಿ) ಸರ್ಕಾರಿ ವಾಹನಗಳ ನೋಂದಣಿಯನ್ನು ಕೇಂದ್ರ ಸರ್ಕಾರವು ವಾಹನ್ ಪೊರ್ಟಲಿನಲ್ಲಿ ರದ್ದುಪಡಿಸಲಾಗಿದೆ. ಈ 18,552 ವಾಹನಗಳ ಪೈಕಿ ಆರ್ ವಿಎಸ್ ಎಫ್(Registered Vehicle Scrapping Facility) ನಲ್ಲಿ ಒಟ್ಟು 1,493 ವಾಹನಗಳನ್ನು ಸ್ಕ್ರ್ಯಾಪ್ ಮಾಡಲಾಗಿದೆ ಮತ್ತು 17,059 ವಾಹನಗಳನ್ನು ಸ್ಕ್ರ್ಯಾಪ್ ಮಾಡುವುದು ಬಾಕಿ ಇರುತ್ತದೆ ಎಂದು ಸಚಿವರು ತಿಳಿಸಿದರು.
2023ರಿಂದ ಇಲ್ಲಿವರೆಗೆ ರಾಜ್ಯದ ನಾಲ್ಕು ನಿಗಮ ಸಂಸ್ಥೆಗಳಲ್ಲಿ 3212 ವಾಹನಗಳು ನಿಷ್ಕ್ರೀಯಗೊಂಡಿವೆ. 579 ವಾಹನಗಳನ್ನು ನಿಷ್ಕ್ರೀಯಗೊಳಿಸಲು ಬಾಕಿ ಇದೆ ಎಂದು ಸಚಿವರು ಮಾಹಿತಿ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 