ಸರ್ಕಾರಿ ಬಸ್ಸು ಡಿಕ್ಕಿ; ಇಬ್ಬರು ದುರ್ಮರಣ

ಬೆಂಗಳೂರು, ಜ 6, ನಗರದ ಕೊಟ್ಟಿಗೆ ಪಾಳ್ಯದ ಸಿಗ್ನಲ್ ಬಳಿ ಬಿಎಂಟಿಸಿ ಬಸ್ ಬ್ರೇಕ್ ಫೇಲ್ ಆಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ಬ್ರೇಕ್ ಫೇಲ್ ಆದ ಬಳಿಕ ಬಿಎಂಟಿಸಿ ಬಸ್ಸು ಕಾರು, ಆಟೋ, ದ್ವಿ ಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯಿತು. ಬಳಿಕ ಚಾಲಕ ಬಸ್ಸನ್ನು ರಸ್ತೆ ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ತಿರಿಗಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾನೆ.  ಪರಿಣಾಮ ಓರ್ವ ಮೃತಪಟ್ಟಿರುವ ಘಟನೆ ನಗರದ ಕೊಟ್ಟಿಗೆ ಪಾಳ್ಯ ಸಿಗ್ನಲ್ ಬಳಿ ಸಂಭವಿಸಿದೆ. ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಭೈರಪ್ಪ ಎಂಬುವವರು ಮೃತಪಟ್ಟಿದ್ದಾರೆ. ಮತ್ತೋರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಅಸುನೀಗಿದ್ದಾನೆ. ಈ ದುರ್ಘಟನೆಯಲ್ಲಿ ನಾಗರಾಜು, ಅಭಿಷೇಕ್ ಸೇರಿ ನಾಲ್ವರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಕಾಮಾಕ್ಷಿ ಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.