ಸರ್ಕಾರಿ ಕಾಲೇಜು ಚಡಚಣ ಪಟ್ಟಣದಿಂದ ವರ್ಗಾವಣೆ ಮಾಡಿದರೆ ಹೋರಾಟದ ಎಚ್ಚರಿಕೆ
Government college warns of protest if transferred from Chachana town
ಲೋಕದರ್ಶನ ವರದಿ
ವಿಜಯಪುರ 18: ಸರ್ಕಾರಿ ಕಾಲೇಜ ಚಡಚಣ ಪಟ್ಟಣದಲ್ಲಿಯೇ ಸ್ಥಾಪಿಸುವಂತೆ ಒತ್ತಾಯಿ ಆಲ್ ಕರ್ನಾಟಕ ಸ್ಟೇಟ್ ಸ್ಟುಡೆಂಟ್ಸ್ ಅಸೋಶಿಯೇಶನ್ ವತಿಯಿಂದ ವಿಜಯಪುರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭಲ್ಲಿ 2025-26 ಸಾಲಿನ ಬಜೆಟ್ ನಲ್ಲಿ ಕರ್ನಾಟಕ ಸರ್ಕಾರವು ವಿಜಯಪುರ ಜಿಲ್ಲೆಯ ಚಡಚಣದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಾಪಿಸಲು ಅನುಮತಿಯನ್ನು ನೀಡಿತ್ತು. ಆದರೆ ಚಡಚಣದ ಕೆಲವು ವ್ಯಕ್ತಿಗಳು ಮತ್ತು ಖಾಸಗಿ ಶಿಕ್ಷಣ ಸಂಸ್ಥೆಯವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಸ್ಥಾಪಿಸಲು ವಿರೋಧ ವ್ಯಕ್ತ ಪಡಿಸುತ್ತಿದ್ದಾರೆ. ಮತ್ತು ಸರ್ಕಾರದ ಮೇಲೆ ಹಾಗೂ ಶಾಸಕರ ಮೇಲೆ ಒತ್ತಡ ಹೇರುತ್ತಿದ್ದಾರೆ. ಏಕೆಂದರೆ ಅದು ಅವರ ಸಂಸ್ಥೆಗೆ ತೊಂದರೆ ಆಗುತ್ತಿದೆ ಎಂಬ ನಂಬಿಕೆಯಿಂದ ಸರ್ಕಾರಿ ಕಾಲೇಜನ್ನು ಸ್ಥಾಪಿಸಲು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ ನಮ್ಮ ಸಂಘಟನೆಯ ಪ್ರಮುಖ ಬೇಡಿಕೆಯಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಚಡಚಣದಲ್ಲಿ ಸ್ಥಾಪನೆ ಆಗಬೇಕು ಇದರಿಂದ ಬಡ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಅನುಕೂಲವಾಗುತ್ತದೆ ಎಂದರು.
ಒಂದು ವೇಳೆ ಚಡಚಣ ಪಟ್ಟಣ ಬಿಟ್ಟು ಬೇರೆ ಕಡೆಗೆ ವರ್ಗಾವಣೆ ಮಾಡಿದ್ದೇ ಆದ್ದಲ್ಲಿ ನಮ್ಮ ಸಂಘಟನೆಯಿಂದ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀಶೈಲ ತೇಲಿ, ವಿಜಯಪುರ ತಾಲೂಕಾಧ್ಯಕ್ಷರಾದ ಯಮನಪ್ಪ ಬೂದಿಹಾಳ, ಮುತ್ತುರಾಜ ಕೂಡಗಿ, ಸುಮೀತ ನಿರಾಳೆ, ಹರೀಶ ಇಂಗಳೆ ಚಡಚಣ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 