ಚಿಕ್ಕಮಗಳೂರು, ಜ.28 : ಪರಿಶಿಷ್ಟ ರ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದ್ದು, ಅವರನ್ನು ಸ್ವಾವಲಂಬಿಗಳಾಗಿ ಮಾಡುವ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಇಂದು ಜಿಲ್ಲಾ ಮಾದಿಗ ಸಮಾಜ ವತಿಯಿಂದ ಏರ್ಪಡಿಸಿದ್ದ ಜಿಲ್ಲಾ ಸಮಾವೇಶ ಮತ್ತು ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪರಿಶಿಷ್ಟರ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ ಎಂದರು.
ಕಾಂಗ್ರೆಸ್ ನಿಂದ ದಲಿತರಿಗೆ ಅನ್ಯಾಯವಾಗಿದೆ. ಈವರೆಗೆ ಯಾರನ್ನೂ ಮುಖ್ಯಮಂತ್ರಿಯನ್ನಾಗಿಸಿಲ್ಲ. ಡಾ. ಬಾಬು ಜಗಜೀವನ ರಾಮ್ ಅವರ ಪ್ರಧಾನ ಮಂತ್ರಿ ಯಾಗಬೇಕಿತ್ತು. ಬಿಜೆಪಿ ಪರಿಶಿಷ್ಟರಿಗೆ ಅನ್ಯಾಯ ಮಾಡುವುದಿಲ್ಲ. ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರ ಆಶಯದಂತೆ ದಲಿತರು ಶಿಕ್ಷಣ, ಸಂಘಟನೆ ಮತ್ತು ಹೋರಾಟ ಅನ್ನು ಅನುಸರಿಸಬೇಕು. ಎಲ್ಲಾ ಉಪಜಾತಿಗಳು ಸಂಘಟಿತರಾಗಬೇಕು. ದಲಿತ ಸಮುದಾಯದ ಒಳ ಜಾತಿಗಳು ವೈವಾಹಿಕ ಸಂಬಂಧಗಳನ್ನು ಬೆಳೆಸಬೇಕು. ಒಳ ಜಗಳವನ್ನು ಕೈಬಿಡಬೇಕು ಎಂದು ಮನವಿ ಮಾಡಿದರು.