ಗ್ರಾಮೀಣ ಅಭಿವೃದ್ಧಿಗೆ ಸರ್ಕಾರದ ಸಹಕಾರ ಮುಖ್ಯ: ಶಾಸಕರು
Government cooperation important for rural development: MLAs
ಲೋಕದರ್ಶನ ವರದಿ
ಯರಗಟ್ಟಿ 19: ಶ್ರೀ ರಾಮನ ಆದರ್ಶ ತತ್ವ ಸಿದ್ಧಾಂತಗಳನ್ನು ಇಂದಿನ ಯುವಕರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು. ಸಮೀಪದ ಆಲದಕಟ್ಟಿ ಕೆ.ಎಂ ಗ್ರಾಮದ ಶ್ರೀ ರಾಮ ಮಂದಿರಕ್ಕೆ ಈಚಗೆ ಬೇಟಿ ನೀಡಿ ದರ್ಶನಾಶೀರ್ವಾದ ಪಡೆದು ಸನ್ಮಾನ ಸ್ವೀಕರಿಸಿ ಮಾತನಾಡಿ, ಗ್ರಾಮೀಣ ಜನರ ಬೇಡಿಕೆಗಳಿಗೆ ಸ್ಪಂದಿಸಿ ಅವರಿಗೆ ಅವಶ್ಯವಾಗಿರುವ ಕಾಮಗಾರಿಯನ್ನು ತುರ್ತಾಗಿ ಕೈಗೊಳ್ಳುವ ಮುಖಾಂತರ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧನಾಗಿದ್ದೇನ.ೆ ದೇವಸ್ಥಾನ ಜಿರ್ಣೋದ್ಧಾರಕ್ಕೆ ಅಗತ್ಯ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು.
ಯರಗಟ್ಟಿ ಎಪಿಎಂಸಿ ಅಧ್ಯಕ್ಷ ನೀಲಕಂಠ ಶೀದಬಸನ್ನವರ ಮಾತನಾಡಿ, ಗ್ರಾಮೀಣ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಶಾಸಕ ವಿಸ್ವಾಸ ವ್ಯದ್ಯ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ ಗ್ರಾಮಸ್ಥರ ಸಹಕಾರ ಬಹಳ ಮುಖ್ಯ ಎಂದರು. ಸವದತ್ತಿ ಎಪಿಎಂಸಿ ಅಧ್ಯಕ್ಷ ಚಂದ್ರು ಜಂಬ್ರಿ, ಗ್ರಾಪಂ ಮಾಜಿ ಸದಸ್ಯ ಅಶೋಕ ಚಿಕ್ಕೊಪ್ಪ, ಪಿಕೆಪಿಎಸ್ ಅಧ್ಯಕ್ಷ ಮಲ್ಲಿಕಾರ್ಜುನ ಹೊನ್ಯಾಳ, ಮುಖಂಡ ಬಾಬನಾಯ್ಕ ದಾಗನಾಯ್ಕರ, ಸನ್ನಗೌಡ ಸನ್ನಗೌಡ್ರ, ಶಿವನಾಯ್ಕ ಸತ್ಯನಾಯ್ಕರ, ಬಸವರಾಜ ಕುರಗುಂದ, ಪರಸು ಪುಜೇರ, ವಿಠ್ಠಲ ಹಲಗಲಿ, ಪ್ರಕಾಶ ತಳವಾರ, ಮುದಕಪ್ಪ ಚೌಡಪ್ಪನವರ, ಯಲ್ಲನಾಯ್ಕ ಸತ್ಯನಾಯ್ಕರ, ಅಜ್ಜಪ್ಪ ದಾಗನಾಯ್ಕರ ಮತ್ತಿತರಿದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 