ರೈತರ ಹಿತ ಕಾಪಾಡುವಲ್ಲಿ ಸರ್ಕಾರ ವಿಫಲ: ಗೋಡಕೆ

ರೈತರ ಹಿತ ಕಾಪಾಡುವಲ್ಲಿ ಸರ್ಕಾರ ವಿಫಲ: ಗೋಡಕೆ  Government failed to protect farmers' interests: Godake


ಇಂಡಿ 28: ವಿಜಯಪುರ ಜಿಲ್ಲೆಯ ಎಲ್ಲಾ 13 ತಾಲೂಕುಗಳಲ್ಲೂ ಭೀಕರ ಬರ ಪರಿಸ್ಥಿತಿ ಇದ್ದರೂ ಸರ್ಕಾರ ಕೇವಲ ಮೂರು ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿರುವುದು ರೈತರಿಗೆ ಅನ್ಯಾಯ ಎಂದು ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ರೇವಣಸಿದ್ದಗೌಡ ಆರ್‌. ಗೋಡಕೆ ಆರೋಪಿಸಿದರು. ಜಿಲ್ಲೆಯ ಎಲ್ಲ ತಾಲೂಕುಗಳನ್ನು ತಕ್ಷಣ ಬರಪೀಡಿತವೆಂದು ಘೋಷಿಸಿ ಸೂಕ್ತ ಪರಿಹಾರ ನೀಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಅವರು ಎಚ್ಚರಿಸಿದರು.