ಕೊಂಡಗೂಳಿಗೆ ಸರ್ಕಾರಿ ಪ್ರೌಢಶಾಲೆ ಮಂಜೂರು: ಸಂಗಮೇಶ ಹರ್ಷ
Government high school sanctioned for Kondagooli
ದೇವರಹಿಪ್ಪರಗಿ 18: ತಾಲೂಕಿನ ಕೊಂಡಗೂಳಿ ಗ್ರಾಮಕ್ಕೆ ರಾಜ್ಯ ಸರ್ಕಾರದಿಂದ ಉನ್ನತಿಕರಣ ಸರ್ಕಾರಿ ಪ್ರೌಢಶಾಲೆ ಮಂಜೂರು. ಪ್ರಯತ್ನಕ್ಕೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಬೆಂಬಲಿಸಿದ ಎಲ್ಲಾ ಮಹನೀಯರಿಗೆ ಕಾಂಗ್ರೆಸ್ ಮುಖಂಡರು ಹಾಗೂ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸಂಗಮೇಶ ದಂಡೋತಿ ಅವರು ಧನ್ಯವಾದಗಳು ತಿಳಿಸುವ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಕೊಂಡಗೂಳಿ ಗ್ರಾಮದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಗ್ರಾಮದಲ್ಲಿರುವ ಪ್ರೌಢಶಾಲೆ ಅನಿವಾರ್ಯ ಕಾರಣದಿಂದ ಬಂದ್ ಆದ ಕಾರಣ, ವಿದ್ಯಾರ್ಥಿಗಳ ಶೈಕ್ಷಣಿಕ ದೃಷ್ಟಿಯಿಂದ ಸರ್ಕಾರ ಪ್ರೌಢಶಾಲೆ ಉನ್ನತಿಕರಣ ಮಾಡುವ ಮೂಲಕ ಕಲಿಕೆಗೆ ಅವಕಾಶ ಕಲ್ಪಿಸು ಕೊಡಲಾಗಿದೆ. ಈ ಕುರಿತು ಗ್ರಾಮದ ಯುವಕರು ಮುಖಂಡರು ಸಾಕಷ್ಟು ಹೋರಾಟಗಳನ್ನು ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯಲು ಸಹಕರಿಸದ ಎಲ್ಲಾ ಮಹನೀಯರಿಗೆ ಧನ್ಯವಾದಗಳು ತಿಳಿಸಿರುತ್ತಾರೆ. ಹಲವು ತಿಂಗಳಿಂದ ಗ್ರಾಮದಲ್ಲಿ ಇದ್ದ ಪ್ರೌಢಶಾಲೆ ಬಂದಾಗ ದೇವರ ಹಿಪ್ಪರಗಿ,ಕಲಕೇರಿ ಹಾಗೂ ಬಿ.ಬಿ.ಇಂಗಳಗಿ ಗ್ರಾಮಕ್ಕೆ ಹೋಗಿ ಬರಲು ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿತ್ತು.
ಈ ಕುರಿತು ಪೋಷಕರು ಕರ್ನಾಟಕ ಸರ್ಕಾರದ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಶಿಕ್ಷಣ ಸಚಿವರಾದ ಮಧು ಬಂಗಾರ್ಪ, ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ, ಶಾಸಕರಾದ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಅವರ ಗಮನಸೆಳೆದಾಗ ಸಂಬಂಧಪಟ್ಟ ಸಚಿವರಿಗೆ ಮನವಿ ಸಲ್ಲಿಸಿ ಒತ್ತಾಯಿಸುವ ಮೂಲಕ ಗ್ರಾಮಕ್ಕೆ ವಿದ್ಯಾರ್ಥಿಗಳ ಶೈಕ್ಷಣಿಕ ದೃಷ್ಟಿಯಿಂದ ಪ್ರೌಢಶಾಲೆ ಮಂಜೂರು ಮಾಡಿದ್ದಕ್ಕೆ ಗ್ರಾಮಸ್ಥರ ಪರವಾಗಿ ಸರ್ಕಾರಕ್ಕೆ ಧನ್ಯವಾದಗಳು ತಿಳಿಸುವ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ.ಫೋಟೋ 18ಡಿಎಚಪಿ1
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 