ರಾಜ್ಯದ 17 ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಕ್ಕೆ ಸರ್ಕಾರದ ಸಜ್ಜು

ಬೆಂಗಳೂರು,  ಮೇ  24,  ರಾಜ್ಯದ 17 ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಕ್ಕೆ ಸರ್ಕಾರ ಸಿದ್ಧತೆ ನಡೆಸಿದ್ದು ಇದರಿಂದ ವಾರ್ಷಿಕ 68 ರಿಂದ 70 ಕೋಟಿ ರೂ. ಆದಾಯ ಸಂಗ್ರಹ ಮಾಡುವ ಗುರಿ ಹೊಂದಲಾಗಿದೆ. ಕೊರೊನಾ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ವಾಹನ ಮಾಲೀಕರಿಗೆ  ಈ ಮೂಲಕ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದೆ ಎಂದು ಹೇಳಲಾಗಿದೆ.  ದೇಶಾದ್ಯಂತ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದೆ.
ಈ ಹಿನ್ನೆಲೆಯಲ್ಲಿ ವ್ಯಾಪಾರ ವಹಿವಾಟಿಲ್ಲದೆ ಅನೇಕ ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ನಾಲ್ಕನೇ ಹಂತದ ಲಾಕ್ ಡೌನ್ ಜಾರಿ ಸಂದರ್ಭದಲ್ಲಿ ಕೆಲವೊಂದು ಸಡಿಲಿಕೆ ನೀಡಲಾಗಿದ್ದು, ವಾಹನ ಸಂಚಾರಕ್ಕೂ ಅವಕಾಶ ಮಾಡಿಕೊಡಲಾಗಿದೆ. ರಾಜ್ಯದಲ್ಲಿ ಖಾಸಗಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದ್ದು, 17 ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ಮಾಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಇದರಿಂದ ವಾರ್ಷಿಕ 68 ರಿಂದ 70 ಕೋಟಿ ರೂ. ಆದಾಯ ಬರುವ ನಿರೀಕ್ಷೆ ಎಂದು ಹೇಳಲಾಗಿದೆ.