ಪಿಯುಸಿ ಮಕ್ಕಳಿಗೆ ಮಧ್ಯಾಹ್ನದ ಊಟ ನೀಡಲು ಸರ್ಕಾರ ಚಿಂತನೆ

ಬೆಂಗಳೂರು 12:     ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಿತರಿಸುವ ಮಧ್ಯಾಹ್ನದ ಬಿಸಿಯೂಟ ಯೋಜನೆ ಇನ್ನುಮುಂದೆದೆ ಪಿಯುಸಿ ವಿದ್ಯಾರ್ಥಿಗಳಿಗೂ ವಿಸ್ತರಣೆಯಾಗಲಿದೆ ಯೋಜನೆಯನ್ನು ವಿಸ್ತರಿಸುವ ಬಗ್ಗೆ ಸರ್ಕಾರ ಸಕಾರಾತ್ಮಕ ಚಿಂತನೆ ನಡೆಸಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಯೋಜನೆಯನ್ನು ವಿಸ್ತರಿಸಲು ಆರ್ಥಿಕ ಇಲಾಖೆ ಜೊತೆ ಚರ್ಚೆ ನಡೆಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. 

   ಅದಮ್ಯ ಚೇತನ ಹಾಗೂ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ಪೌಷ್ಟಿಕಾಂಶಯುಕ್ತ ಹಾಲಿನ ಯೋಜನೆ ಪ್ರಯುಕ್ತ ಇಲ್ಲಿನ ವಿದ್ಯಾರ್ಥಿಗಳಿಗೆ ಹಾಲು ವಿತರಿಸಿ ಮಾತನಾಡಿದ ಅವರು,  ಕರ್ನಾಟಕದ ನಿಜವಾದ ಸಾಧಕಿ ಎಂದರೆ ಅದು ತೇಜಸ್ವಿನಿ ಅನಂತ ಕುಮಾರ್. ಟ್ರಸ್ಟ್ ವತಿಯಿಂದ ಮಕ್ಕಳಿಗೆ ಪೌಷ್ಠಿಕಾಂಶವುಳ್ಳ ಆಹಾರ ವಿತರಿಸಲು ಹೊರಟಿರುವ ಅವರ ಕಾರ್ಯ ಶ್ಲಾ ಘನೀಯ ಎಂದರು. ಶಾಲಾಮಕ್ಕಳಿಗೆ ಮಧ್ಯಾಹ್ನ ಊಟದ ಬಗ್ಗೆ ಚಿಂತನೆ ರೂಪಿಸಿದ್ದು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕಾಮ್ ರಾಜ್ ನಾಡರ್.  ಆದರೂ ರಾಜ್ಯದಲ್ಲಿ ಅದಕ್ಕೊಂದು ಸ್ವರೂಪ ನೀಡಿದ್ದು ಅದ್ಯಮ ಚೇತನ ಟ್ರಸ್ಟ್ ಎಂದರು. ರಾಜ್ಯದ ಎಲ್ಲಾ ಶಾಲಾ ಮಕ್ಕಳಿಗೂ ಈ ಪೌಷ್ಟಿಕಾಂಶಯುಕ್ತ ಹಾಲು ನೀಡುವ ಕಾರ್ಯಕ್ರಮ ವಿಸ್ತರಿಸಲು ಚಿಂತನೆ ನಡೆಸಲಾಗಿದೆ. 1,17,182 ಮಕ್ಕಳಿಗೆ ಮಕ್ಕಳಿಗೆ ಊಟ ನೀಡಲಾಗುತ್ತಿದ್ದು, 2.25 ಲಕ್ಷ ಮಕ್ಕಳಿಗೆ ಮಧ್ಯಾಹ್ನದ ಊಟ ಕೊಡುವ ಗುರಿ ಹೊಂದಲಾಗಿದೆ. ಕಲಬುರ್ಗಿ ಯಲ್ಲಿಯೂ ಅದಮ್ಯ ಚೇತನ ಮಧ್ಯಾಹ್ನ ಕಾರ್ಯಕ್ರಮ ಸಧ್ಯದಲ್ಲೇ ಪ್ರಾರಂಭವಾಗಲಿದೆ ಎಂದು ಸುರೇಶ್ ಕುಮಾರ್ ಹೇಳಿದರು. ಕೆಲವು ದಿನಗಳ ಹಿಂದೆ ಪಿಯು ಮತ್ತು ಪದವಿ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ಒದಗಿಸಲು ಕ್ರಮಕೈಗೊಳ್ಳುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಗಮನಕ್ಕೆ ತರಲಾಗಿದೆ ಎಂದು ಅರಕಲಗೂಡು ಶಾಸಕ ಎ.ಟಿ.ರಾಮಸ್ವಾಮಿ ಹೇಳಿದ್ದರು.