ಮಕ್ಕಳ ಕಾನೂನಾತ್ಮಕ ಹಕ್ಕುಗಳ ರಕ್ಷಕ ಸರ್ಕಾರ: ಜಿಪಂ ಸಿಇಒ ಹಾರೀಸ್
Government protector of children's legal rights: ZP CEO Harris
ಬಳ್ಳಾರಿ,ಸೆ.22: ದೇಶದ ಪ್ರತಿಯೊಂದು ಮಗು/ಮಕ್ಕಳ ಕಾನೂನಾತ್ಮಕ ಹಕ್ಕುಗಳ ರಕ್ಷಣೆಯ ಹೊಣೆ ಸರ್ಕಾರದ್ದಾಗಿದ್ದು, ಅಧೀನದ ಅಧಿಕಾರಿಗಳು ಗ್ರಾಪಂ, ತಾಪಂ ಮಟ್ಟದ ಅಧ್ಯಕ್ಷರು ಸೇರಿದಂತೆ ಪ್ರತಿಯೊಬ್ಬರೂ ಮಕ್ಕಳ ಹಕ್ಕುಗಳ ರಕ್ಷಣೆಯ ಜವಾಬ್ದಾರಿ ಹೊಂದಬೇಕಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೈರ್ ಅವರು ಹೇಳಿದರು.
ಸೋಮವಾರ ನಗರದ ಜಿಲ್ಲಾ ಪಂಚಾಯತ್‌ನ ಹೊಸ ನಜೀರ್ ಸಾಬ್ ಸಭಾಂಗಣದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಹಯೋಗದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಮಹಿಳಾ ಅಧ್ಯಕ್ಷರು ಮತ್ತು ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ “ಮಹಿಳೆಯರ ಮತ್ತು ಮಕ್ಕಳ ರಕ್ಷಣೆಯ ಕಾವಲು ಸಮಿತಿ” ಕುರಿತು ಏರಿ್ಡಸಿದ್ದ ಒಂದು ದಿನ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಅಧಿಕಾರಿಗಳು ಹೆಣ್ಣು ಮಕ್ಕಳನ್ನು ರಕ್ಷಿಸುವ ನಿಟ್ಟಿನಲ್ಲಿ ಪೋಕ್ಸೋ, ಬಾಲ್ಯವಿವಾಹ, ಬಾಲ ಗರ್ಭಿಣಿಯಂತಹ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಪಂಚಾಯಿತಿ ಮಟ್ಟದ ಕಾವಲು ಸಮಿತಿ ಮೂಲಕ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.
ಕಾವಲು ಸಮಿತಿಯನ್ನು ಉತ್ತೇಜಿಸಿದರೆ ಬಾಲ್ಯ ವಿವಾಹ, ಪೋಕ್ಸೋ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು. ಒಂದು ಹೆಣ್ಣಿಗೆ ಮದುವೆ 18 ವರ್ಷದ ಬಳಿಕವೇ ಎಂದು ಕಾನೂನಿದೆ. ಕೆಲವೊಂದು ಕಾರಣಗಳಿಂದ ಬಾಲ್ಯ ವಿವಾಹವಾಗಿ ಮುಂದೆ ಕಷ್ಟಪಡುತ್ತಿರುವ ಘಟನೆಗಳು ನಮ್ಮ ಕಣ್ಣ ಮುಂದಿವೆ. ಇಂತಹ ಸಮಸ್ಯೆಗಳಿಗೆ ಹೆಣ್ಣು ಮಕ್ಕಳು ಒಳಗಾಗದಂತೆ ನಾವು ನೋಡಿಕೊಳ್ಳಬೇಕು ಎಂದರು.
ಪ್ರತೀ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಕ್ಕಳ ಹಕ್ಕು ಕಾವಲು ಸಮಿತಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದರೆ ಮಾತ್ರ ಮಕ್ಕಳ ಮೇಲಿನ ದೌರ್ಜನ್ಯಗಳಿಗೆ ಕಡಿವಾಣ ಬೀಳಲಿದೆ ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಮಾತನಾಡಿ, ಬೆಳೆಯುವ ಮಗುವಿಗೆ ಸುರಕ್ಷಿತ ವಾತಾವರಣ ಕಲ್ಪಿಸಿ ಕೊಡುವುದು ನಮ್ಮೆಲ್ಲರ ಕರ್ತವ್ಯ. ನಿಮ್ಮ ಸುತ್ತ-ಮುತ್ತಲಿನಲ್ಲಿ ಬಾಲ್ಯವಿವಾಹ ನಡೆಯುವುದು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098, ಪೊಲೀಸ್ ಸಹಾಯವಾಣಿ ಸಂಖ್ಯೆ 112 ಅಥವಾ ಉಚಿತ ಕಾನೂನು ಸೇವಾ ಸಹಾಯವಾಣಿ ಸಂಖ್ಯೆ 15100 ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ತಿಳಿಸಿದರು.
ಚಿಕ್ಕ ವಯಸ್ಸಿನಲ್ಲಿ ಹೆಣ್ಣು ಮಕ್ಕಳು ಗರ್ಭಿಣಿಯಾದಲ್ಲಿ, ಮಾನಸಿಕವಾಗಿ, ದೈಹಿಕವಾಗಿ ಸಾಮರ್ಥ್ಯವಿಲ್ಲದಿರುವ ಸಂದರ್ಭದಲ್ಲಿ ಗರ್ಭಿಣಿಯಾಗಿ ತಾಯ್ತನಕ್ಕೆ ಒಳಗಾಗುವುದರಿಂದ ಹುಟ್ಟಿದ ಮಗುವೂ ಸಮರ್ಥವಾಗಿರುವುದಿಲ್ಲ. ಹಾಗಾಗಿ ಹೆಣ್ಣು ಮಕ್ಕಳು ಅಕಾಲಿಕ ಗರ್ಭಧಾರಣೆಗೆ ಒಳಗಾಗುವಂತಹ ಪರಿಸ್ಥಿತಿ ನಿರ್ಮಾಣವಾಗದಂತೆ, ಶೋಷಣೆಗೆ ಒಳಗಾಗದಂತೆ ಮುಂಜಾಗ್ರತೆ ವಹಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುಭದ್ರಾ ದೇವಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳ ಹಕ್ಕುಗಳು ಮತ್ತು ಬಾದ್ಯತೆಗಳನ್ನು ರಕ್ಷಿಸುವ ಕೆಲಸವಾಗಬೇಕಿದೆ. ಈ ಕುರಿತು ಜನರಿಗೆ ಅರಿವು ಮೂಡಿಸಬೇಕು. ಜಿಲ್ಲೆಯಲ್ಲಿ (ಏಪ್ರಿಲ್ ನಿಂದ ಇಲ್ಲಿಯವರೆಗೆ) 83 ಬಾಲ್ಯವಿವಾಹ ನಡೆದಿವೆ. ಅದರಲ್ಲಿ 64 ಬಾಲ್ಯವಿವಾಹಗಳನ್ನು ತಡೆಯಲಾಗಿದೆ. 19 ಪ್ರಕರಣ ಬಾಲ್ಯವಿವಾಹ ಮತ್ತು ಪೋಕ್ಸೋ ಒಳಗೊಂಡಿದ್ದು, 9 ಪ್ರಕರಣಗಳಿಗೆ ಎಫ್‌ಐಆರ್ ದಾಖಲಿಸಲಾಗಿದೆ. 10 ಪ್ರಕರಣ ಎಫ್‌ಐಆರ್ ದಾಖಲಿಸಲು ಬಾಕಿ ಇವೆ ಎಂದು ತಿಳಿಸಿದರು.
ಕಾರ್ಯಾಗಾರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಉಚಿತ ಕಾನೂನು ಸೇವೆಯ ಸಹಾಯವಾಣಿ ಸಂಖ್ಯೆ 15100 ಕುರಿತ ಭಿತ್ತಿಪತ್ರ ಬಿಡುಗಡೆ ಮಾಡಲಾಯಿತು.
ಕೊಪ್ಪಳದ ಮಕ್ಕಳ ಸಂರಕ್ಷಣಾ ಯೋಜನೆಯ ಯುನಿಸೆಫ್ ಪ್ರಾದೇಶಿಕ ಸಂಯೋಜಕ ಡಾ.ರಾಘವೇಂದ್ರ ಭಟ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ‘ಮಹಿಳೆಯರ ಮತ್ತು ಮಕ್ಕಳ ರಕ್ಷಣೆಯ ಕಾವಲು ಸಮಿತಿ ಹಾಗೂ ಬಾಲನ್ಯಾಯ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ’ ಕುರಿತು ಸವಿವರವಾಗಿ ತಿಳಿಸಿಕೊಟ್ಟರು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿ ಶಶಿಕಾಂತ ಶಿವಪೂರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ, ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾದ ಕಲಾವತಿ ಸೇರಿದಂತೆ ವಿವಿಧ ಗ್ರಾಪಂ ಮಹಿಳಾ ಅಧ್ಯಕ್ಷರು, ತಾಪಂ ಇಓ, ಗ್ರಾಪಂ ಪಿಡಿಓ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾಧಿಕಾರಿ (ಸಾಂಸ್ಥಿಕ ಸೇವೆ) ದೊಡ್ಡನಗೌಡ್ರು ಮಂಜುನಾಥ ಕಾರ್ಯಾಗಾರ ನಿರೂಪಿಸಿದರು. ಮಕ್ಕಳ ರಕ್ಷಣಾಧಿಕಾರಿ (ಅಸಾಂಸ್ಥಿಕ ಸೇವೆ) ಚನ್ನಬಸಪ್ಪ ಪಾಟೀಲ್ ಸ್ವಾಗತಿಸಿದರು. ಕಾನೂನು ಪರೀವೀಕ್ಷಣಾಧಿಕಾರಿ ಈಶ್ವರ್ ರಾವ್.ಸಿ ವಂದಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 