ಕಟ್ಟಡ ಕಾರ್ಮಿಕರಿಗೆ ಸರ್ಕಾರದ 0ೋಜನೆಗಳು ಶ್ರೀರಕ್ಷೆ: ಸಚಿವ ಎಚ್.ಕೆ. ಪಾಟೀಲ
Government schemes for construction workers are a safety net: Minister H.K. Patil
ಲೋಕದರ್ಶನ ವರದಿ
ಗದಗ 01: "ದೇಶದ ಭವ್ಯ ಭವಿಷ್ಯವನ್ನು ನಿರ್ಮಿಸುವಲ್ಲಿ ಕಟ್ಟಡ ಕಾರ್ಮಿಕರ ಪಾತ್ರ ಅನನ್ಯ. ಅಹರ್ನಿಶಿ ಬೆವರು ಸುರಿಸಿ ದುಡಿ0ುುವ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಜಾರಿಗೆ ತಂದಿರುವ ವಿವಿಧ 0ೋಜನೆಗಳು ಅವರಿಗೆ ಶ್ರೀರಕ್ಷೆ0ಾಗಿವೆ" ಎಂದು ಕಾನೂನು ಮತ್ತು ಸಂಸದೀ0ು ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರು ಹೇಳಿದರು.
ನಗರದ ಡಿ.ಸಿ.ಮಿಲ್ ಕಂಪೌಂಡ ಒಳಗಡೆ ಕೆ.ಎಚ್.ಪಾಟೀಲ ನಗರದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಕಟ್ಟಡ ನಿರ್ಮಾಣ ಕಾರ್ಮಿಕರ ಮ"ಹಾ ಸಂಘ ಗದಗ ಬೆಟಗೇರಿ ಇವರಿಂದ ಕಾರ್ಮಿಕ ದಿನಾಚರಣೆ" ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣಕ್ಕೆ ಮೊದಲ ಆದ್ಯತೆ ಎಸ್‌ಎಸ್‌ಎಲ್‌ಸಿ ಹಾಗೂ ಪಿ0ುುಸಿ0ುಲ್ಲಿ ಶೇ. 85 ಕ್ಕೂ ಹೆಚ್ಚು ಅಂಕ ಪಡೆದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಾರ್ಮಿಕರ ಮಕ್ಕಳು ಶೈಕ್ಷಣಿಕವಾಗಿ ಮುಂಚೂಣಿಗೆ ಬರಬೇಕೆನ್ನುವುದು ಆಶ0ುವಾಗಿದೆ ಎಂದು ಸಚಿವರು ತಿಳಿಸಿದರು.
ಕಾರ್ಮಿಕರ ಪಾತ್ರ ಶ್ಲಾಘನೀ0ು ನಮ್ಮ ಕಣ್ಣಿಗೆ ಕಾಣುವ ರಸ್ತೆ, ಫ್ಲೈ ಓವರ್, ಕಾಲೇಜುಗಳು, ಮ್ಯೂಸಿ0ುಂ ಹಾಗೂ ಗುಡಿ-ಗುಂಡಾರಗಳನ್ನು ನಿರ್ಮಿಸುವವರು ಕಾರ್ಮಿಕರು ಸಾವಿರಾರು ವರ್ಷಗಳ ಕಾಲ ಉಳಿ0ುುವ ಇಂತಹ ಸ್ಮಾರಕಗಳ ಹಿಂದೆ ಕಾರ್ಮಿಕರ ರಕ್ತ ಮತ್ತು ಬೆವರಿದೆ ಎಂದು ಅವರು ಭಾವುಕರಾಗಿ ನುಡಿದರು.
ಕಾನೂನಿನ ಇತಿಹಾಸ ದೇಶದಲ್ಲಿ ಕಾರ್ಮಿಕ ಕಲ್ಯಾಣ ಕಾನೂನುಗಳನ್ನು ಜಾರಿಗೆ ತರುವಲ್ಲಿ ಆಸ್ಕರ್ ಫರ್ನಾಂಡಿಸ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಕೊಡುಗೆ ಅಪಾರ. ಅವರ ಪ್ರ0ುತ್ನದಿಂದಾಗಿ ಇಂದು ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಲಭಿಸುತ್ತಿದೆ ಎಂದು ಸ್ಮರಿಸಿದರು.
ಕಾರ್ಮಿಕ ಕಾರ್ಡ್‌ನ ಮಹತ್ವ ಎಂತದ್ದು ಎಂದರೆ "ಕಟ್ಟಡ ಕಾರ್ಮಿಕ ಕಾರ್ಡ್" ಎಂಬುದು ಕೇವಲ ಚೀಟಿ0ುಲ್ಲ, ಅದು ಕಾರ್ಮಿಕರಿಗೆ ಒಂದು ಸರ್ಕಾರಿ ನೌಕರಿ0ುಷ್ಟೇ ಸಮಾನವಾದ ಭದ್ರತೆ ನೀಡುತ್ತದೆ. ಕೊರೊನಾ ಅಂತಹ ಸಂಕಷ್ಟದ ಸಮ0ುದಲ್ಲಿ ಕಾರ್ಮಿಕರಿಗೆ ಈ ಕಾರ್ಡ್ ಮೂಲಕ ವಿತರಿಸಲಾದ ಕಿಟ್‌ಗಳು ಮತ್ತು ಸಹಾ0ುಹಸ್ತ ದೊಡ್ಡ ನೆರವು ನೀಡಿದೆ ಎಂದು ಅವರು ಹೇಳಿದರು.
ಶೀಘ್ರ ಕಾರ್ಡ್ ವಿತರಣೆ ಇನ್ನು 0ಾರಾದರೂ ಅರ್ಹ ಫಲಾನುಭವಿಗಳು ಕಾರ್ಮಿಕ ಕಾರ್ಡ್‌ನಿಂದ ವಂಚಿತರಾಗಿದ್ದರೆ, ಅಂತಹವರು ಎಂಎಲ್‌ಎ ಕಚೇರಿ ಅಥವಾ ಕಾರ್ಮಿಕ ಸಂಘಟನೆಗೆ ಅರ್ಜಿ ಸಲ್ಲಿಸಿದರೆ ಒಂದು ವಾರದೊಳಗೆ ಕಾರ್ಡ್ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಗದಗ ಜಿಲ್ಲೆ0ುಲ್ಲಿ ಸುಸಜ್ಜಿತ **ಕಾರ್ಮಿಕರ ಮಕ್ಕಳ ವಸತಿ ಶಾಲೆ ಮಂಜೂರಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಕಾನೂನು ಮತ್ತು ಸಂಸದೀ0ು ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರು ಪ್ರಕಟಿಸಿದರು.
ಕಾರ್ಮಿಕರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಪ್ರಮುಖ ಗುರಿ0ಾಗಿದೆ ಎಂದು ತಿಳಿಸಿದರು, ವಸತಿ ಶಾಲೆಗಾಗಿ ಗದಗ ನಗರದ ಸಮೀಪವಿರುವ ಗುಡ್ಡದ ಸಾಲಿನಲ್ಲಿ, ನವೋದ0ು ಶಾಲೆ ಹಾಗೂ ಮೈನಾರಿಟಿ ವಸತಿ ಶಾಲೆಗಳ ಪಕ್ಕದಲ್ಲೇ 10 ಎಕರೆ ವಿಶಾಲವಾದ ಭೂಮಿ0ುನ್ನುಗುರುತಿಸಲಾಗಿದೆ.
ಇದೇ ವರ್ಷದಲ್ಲಿ ವಸತಿ ಶಾಲೆ0ು ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗುವುದು. ಮುಂದಿನ ಶೈಕ್ಷಣಿಕ ವರ್ಷದಿಂದಲೇ ಶಾಲೆ0ುಲ್ಲಿ ಚಟುವಟಿಕೆಗಳು ಆರಂಭವಾಗುವಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಶೈಕ್ಷಣಿಕ ಕಿಟ್‌ಗಳ ವಿತರಣೆ ರಾಜ್ಯದಾದ್ಯಂತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸರಿಸುಮಾರು 1111 ಕೋಟಿ ರೂಪಾಯಿ ವೆಚ್ಚದಲ್ಲಿ ಶೈಕ್ಷಣಿಕ ಕಿಟ್‌ಗಳನ್ನು ವಿತರಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದರು.
ವಿದ್ಯಾರ್ಥಿಗಳು ಪರೀಕ್ಷೆ0ುಲ್ಲಿ 625 ಕ್ಕೆ 624 ಅಂಕ ಗಳಿಸಿ ಮರು ಮೌಲ್ಯಮಾಪನಕ್ಕೆ ಅರ್ಜಿಸಲ್ಲಿಸಿದ್ದ ವಿದ್ಯಾರ್ಥಿನಿ0ು ಧೈ0ುರ್ವನ್ನು ಶ್ಲಾಘಿಸಿದ ಸಚಿವರು, ಕಾರ್ಮಿಕರ ಮಕ್ಕಳು ಕೂಡ ಇಂತಹ ಉನ್ನತ ಗುರಿಗಳನ್ನು ಹೊಂದಿರಬೇಕು ಎಂದು ಕರೆ ನೀಡಿದರು.
ಉನ್ನತ ಗುಣಮಟ್ಟದ ಶಿಕ್ಷಣಕ್ಕೆ ಮೊದಲ ಆದ್ಯತೆ ಕೊಡಬೇಕು, ನವೋದ0ು ಮಾದರಿ0ುಲ್ಲೇ ಈ ವಸತಿ ಶಾಲೆ0ುು ಅತ್ಯಂತ ಸುಂದರವಾದ ಪರಿಸರದಲ್ಲಿ ನಿರ್ಮಾಣವಾಗಲಿದ್ದು, ಕಾರ್ಮಿಕರ ಮಕ್ಕಳಿಗೆ ಇದು ಹೊಸ ಭವಿಷ್ಯವನ್ನು ರೂಪಿಸಲಿದೆ.
ಕಾ0ುರ್ಕ್ರಮದಲ್ಲಿ ಅಭಿನವ ಕೊಟ್ಟೂರು ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದರು ವಿಧಾನ ಪರಿುಷತ್ ಶಾಸಕ ಎಸ್.ವಿ.ಸಂಕನೂರು, ನಾಗರಾಭಿವೃದ್ಧಿ ಪ್ರಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಜಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷರಾದ ಮಹಬೂಬ್ ಖಾನ್ ಪಠಾಣ್, ನಗರಸಭೆ ಅಧ್ಯಕ್ಷರಾದ ಉಷಾ ದಾಸರ, ಡಾ. ಗಣೇಶ್ ರಾವ್ ಸೇರಿದಂತೆ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸ್ಥಳೀ0ು ಗಣ್ಯರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 