ಸರ್ಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಲಿ: ಸಿ.ಕೆ. ಮಲ್ಲಪ್ಪ
Government schemes should reach even the most marginalized person in society: C.K. Mallappa
ಲೋಕದರ್ಶನ ವರದಿ
ಕಾರವಾರ, ಮೇ.27 :- ಸರ್ಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು. ಆ ನಿಟ್ಟಿನಲ್ಲಿ ಸಾಮಾಜಿಕ ಪರಿಶೋಧನಾ ತಂಡದ ಕಾರ್ಯ ಅತ್ಯಂತ ಅವಶ್ಯಕ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದ ನಿರ್ದೇಶಕ ಸಿ.ಕೆ. ಮಲ್ಲಪ್ಪ ಹೇಳಿದರು.
ಅವರು ಬುಧವಾರ ಮುಂಡಗೋಡ ತಾಲೂಕಿನ ಕಾತೂರು ಗ್ರಾಮ ಪಂಚಾಯತಿಯಲ್ಲಿ ಸಾಮಾಜಿಕ ಪರಿಶೋಧನಾ ಕಾರ್ಯದ ಪರೀಶೀಲನೆ ಹಾಗೂ ಜಿಲ್ಲೆಯ ಎಲ್ಲ ತಾಲೂಕುಗಳ ಸಂಪನ್ಮೂಲ ವ್ಯಕ್ತಿಗಳು ಮತ್ತು ಗ್ರಾಮ ಸಂಪನ್ಮೂಲ ವ್ಯಕ್ತಿಗಳ ಸಾಮಾಜಿಕ ಪರಿಶೋಧನಾ ಕಾರ್ಯದ ಪ್ರಗತಿ ಪರೀಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಭೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, 15ನೇ ಹಣಕಾಸು ಸೇರಿದಂತೆ ಕೇಂದ್ರ ಪುರಸ್ಕೃತ ವಿವಿಧ ಯೋಜನೆಗಳ ಪ್ರಮುಖ ಕಡತಗಳು ಹಾಗೂ ದಾಖಲೆಗಳನ್ನು ಪರೀಶೀಲಿಸಿದರು. ಇದೇ ವೇಳೆ ಜಿಲ್ಲೆಯ ಎಲ್ಲ ತಾಲೂಕುಗಳ ಸಂಪನ್ಮೂಲ ವ್ಯಕ್ತಿಗಳು ಹಾಗೂ ಗ್ರಾಮ ಸಂಪನ್ಮೂಲ ವ್ಯಕ್ತಿಗಳ ಸಾಮಾಜಿಕ ಪರಿಶೋಧನಾ ಕಾರ್ಯದ ಪ್ರಗತಿ ಪರೀಶೀಲಿಸಿ, ಸರ್ಕಾರ ಯೋಜನೆಗಳ ಅನುಷ್ಠಾನದಲ್ಲಿ ಪಾರದರ್ಶಕತೆ, ಕಾಮಗಾರಿಗಳ ಗುಣಮಟ್ಟ ಪರೀಶೀಲನೆ, ದಾಖಲೆಗಳ ಪರೀಶೀಲನೆ, ವಿಶೇಷ ಗ್ರಾಮ ಸಭೆ ಆಯೋಜನೆ, ಜನರ ಸಹಭಾಗಿತ್ವ, ಕ್ರಮ ಮತ್ತು ವಸೂಲಾತಿ ಸೇರಿದಂತೆ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವಲ್ಲಿ ಮತ್ತು ಯೋಜನೆಗಳ ಬಗ್ಗೆ ಅರಿವು ಮೂಡಿಸುವಲ್ಲಿ ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿಗಳು ಮೈಗೂಡಿಸಿಕೊಳ್ಳಬೇಕಾದ ಮತ್ತು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾರ್ಗದರ್ಶನ ಹಾಗೂ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನವಾಗುತ್ತಿರುವ ಬಸನಕಟ್ಟೆ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ತಾಂತ್ರಿಕ ಸಂಯೋಜಕರು ಮತ್ತು ತಾಂತ್ರಿಕ ಸಹಾಯಕರೊಂದಿಗೆ ಕಾಮಗಾರಿ ನಿರ್ವಹಣೆ ಕುರಿತು ಸಮಾಲೋಚಿಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಇದೇ ವೇಳೆ ಕೂಲಿಕಾರರೊಂದಿಗೆ ಸಂವಾದ ನಡೆಸಿ, ಅಭಿಪ್ರಾಯ ಸಂಗ್ರಹಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ವಾಯ್. ದಾಸನಕೊಪ್ಪ, ಸಹಾಯಕ ನಿರ್ದೇಶಕ (ಗ್ರಾಉ) ಸೋಮಲಿಂಗಪ್ಪ ಛಬ್ಬಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಅಭಿಯಂತರರು ದೀಪಾ ಎಸ್ ಶೆಡಗೇರಿ, ಅನುಷ್ಠಾನ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತ್ ಆಡಳಿತಾಧಿಕಾರಿಗಳು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಸಾಮಾಜಿಕ ಪರಿಶೋಧನೆ ಜಿಲ್ಲಾ ಸಮಾಲೋಚಕರು, ತಾಲೂಕು ಮತ್ತು ಗ್ರಾಮ ಪಂಚಾಯತಿ ಮಟ್ಟದ ಸಂಪನ್ಮೂಲ ವ್ಯಕ್ತಿಗಳು, ಮನರೇಗಾ ತಾಂತ್ರಿಕ ಸಿಬ್ಬಂದಿ ಹಾಗೂ ಕೂಲಿಕಾರರು ಉಪಸ್ಥಿತರಿದ್ದರು.
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ? 