ರಾಜ್ಯದಲ್ಲಿ ಮುಚ್ಚುತ್ತಿರುವ ಸರ್ಕಾರಿ ಶಾಲೆಗಳು: ಎಐಡಿಎಸ್‌ಒ ಕಳವಳ
Government schools closing in the state: AIDSSO concerned
ಕಾರವಾರ 27: ಸರ್ಕಾರದ ದಾಖಲೆಗಳ ಆಧಾರದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ 1655 ಸರ್ಕಾರಿ ಶಾಲೆಗಳು ಮುಚ್ಚುತ್ತಿವೆ ಎಂದು ಎಐಡಿಎಸ್‌ಓ ರಾಜ್ಯ ಸೆಕ್ರೆಟರಿಯೇಟ್ ಸದಸ್ಯ ವಿನಯ ಚಂದ್ರ ಹೇಳಿದರು. ಕಾರವಾರದ ಪತ್ರಿಕ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಒಂದೇ ಒಂದು ಶಾಲೆಯನ್ನು ಮುಚ್ಚುವುದಿಲ್ಲ ಎಂದು ಸರ್ಕಾರವು ಸ್ಪಷ್ಟನೆ ನೀಡುತ್ತಿದೆ. ಶಿಕ್ಷಣ ಹಾಗೂ ಸಾಕ್ಷರತಾ ಸಚಿವರು ಸಹ ’ರಾಜ್ಯದಲ್ಲಿ ಒಂದೇ ಒಂದು ಶಾಲೆಯನ್ನು ಮುಚ್ಚುವುದಿಲ್ಲ’ ಎಂಬ ಮಾತನ್ನೇ ಹೇಳುತ್ತಾರೆ. ಆದರೆ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ಕರ್ನಾಟಕ ರಾಜ್ಯ ಸರ್ಕಾರವು 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ. ಗ್ರಾಮ ಪಂಚಾಯಿತಿಗೆ ಒಂದರಂತೆ ರಾಜ್ಯದಲ್ಲಿ 6,000 ಕೆಪಿಎಸ್ ಮ್ಯಾಗ್ನೆಟ್ ಶಾಲೆಯನ್ನು ಸ್ಥಾಪಿಸುವ ಗುರಿಯನ್ನು ಸರ್ಕಾರವು ಹೊಂದಿದೆ. ಮೊದಲ ಹಂತದಲ್ಲಿ ರಾಜ್ಯದ 800 ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳೆಂದು ಗುರುತಿಸಲಾಗಿದೆ. ಗಣಿಬಾಧಿತ ಬಳ್ಳಾರಿ ಜಿಲ್ಲೆ ಸೇರಿದಂತೆ 100, ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ 200 ಹಾಗೂ ಇತರೆ ಭಾಗದಲ್ಲಿ 500 ಶಾಲೆ ಸ್ಥಾಪಿಸುವುದಾಗಿ 15 ಅಕ್ಟೋಬರ್ 2025 ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ಹೇಳಲಾಗಿದೆ. ಕೇವಲ ಉತ್ತರ ಕನ್ನಡ ಜಿಲ್ಲೆಯೊಂದರಲ್ಲೇ 1655 ಶಾಲೆಗಳನ್ನು ಮುಚ್ಚಲು ಪಟ್ಟಿ ಮಾಡಲಾಗಿದೆ.
ಜಿಲ್ಲೆಯ ಕಾರವಾರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಆರ್ಗ, ಕಿರಿಯ ಪ್ರಾಥಮಿಕ ಶಾಲೆ, ಈಡೂರು, ಹಿರಿಯ ಪ್ರಾಥಮಿಕ ಶಾಲೆ, ಚೆಂಡಿಯ ನಂಬರ್ 1 ಈ ಮೂರು ಶಾಲೆಗಳು ಸರ್ಕಾರಿ ಹಿರಿಯ ಪ್ರಾಥಮಿಕ ಚಂದಿಯ ನಂಬರ್2 ಶಾಲೆಗೆ ವೀಲೀನ. ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಂಬಾರಕೇರಿಯ ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ಅಂಗಡಿಬೈಲ್ ಹಿರಿಯ ಪ್ರಾಥಮಿಕ ಶಾಲೆ, ಮಬಗೆ ಪೂರ್ವ ಶಾಲೆಗಳನ್ನು ವೀಲೀನಗೊಳಿಸುತ್ತಿದ್ದಾರೆ. ಇದೇ ರೀತಿ ಜಿಲ್ಲೆಯಾದ್ಯಂತ ಉತ್ತರ ಕನ್ನಡ ಶಿರಸಿ ಭಾಗದ 828, ಉತ್ತರ ಕನ್ನಡದ 827 ಸೇರಿದಂತೆ ಒಟ್ಟು 1655 ಶಾಲೆಗಳನ್ನು ಮುಚ್ಚಲು ಮುಂದಾಗಿದೆ ಎಂದು ವಿನಯ ಚಂದ್ರ ವಿವರಿಸಿದರು. ಈ ಯೋಜನೆಯನ್ನು ಪೈಲೆಟ್ ಪ್ರೊಜೆಕ್ಟ್ ಅಡಿ ಜಾರಿಗೊಳಿಸಲು ರಾಮನಗರದ ಚನ್ನಪಟ್ಟಣ ತಾಲೂಕಿನ ಹೊಂಗನೂರಿನ ಶಾಲೆಯನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಯೆಂದು ಗುರುತಿಸಲಾಗಿದೆ ಎಂದರು. ಇದೇ ರೀತಿ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಡಿ ರಾಜ್ಯದ 40,000ಕ್ಕೂ ಅಧಿಕ ಶಾಲೆಗಳು ವೀಲೀನಗೊಳ್ಳುತ್ತವೆ. ಸಮುದಾಯ, ಹಳ್ಳಿಗಳ ನಡುವಿನ ಶಾಲೆ ಊರು ದಾಟಿ ಪಕ್ಕದೂರಿಗೆ ಹೋಗುತ್ತದೆ ಎಂದರು. ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಪನ್ಯಾಸಕರುಗಳು, ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪಾಠ ಮಾಡುವಂತೆ, ಸೇವಾ ನಿಯಮಗಳನ್ನು ತಿದ್ದುಪಡಿ ಮಾಡಲಾಗುತ್ತಿದೆ.
ಕೇವಲ ಶಾಲೆಗಳಷ್ಟೇ ಅಲ್ಲದೆ ರಾಜ್ಯದ ಸಾವಿರಾರು ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಕೂಡ ಮುಚ್ಚುವ ಅಪಾಯಕ್ಕೆ ಸಿಲುಕಿವೆ ಎಂದರು. ಶಾಲೆಗಳ ಅಭಿವೃದ್ಧಿಯ ಹೆಸರಲ್ಲಿ ರಾಜ್ಯದ ಜನತೆಯನ್ನು ವಂಚಿಸಿ ಬಡ ಮಕ್ಕಳಿಂದ ಶಾಶ್ವತವಾಗಿ ಶಿಕ್ಷಣವನ್ನು ಕಸಿದುಕೊಳ್ಳುವ ಸರ್ಕಾರದ ಘೋರ ಹುನ್ನಾರ ಇದಾಗಿದೆ ಎಂದರು. ಪತ್ರಿಕಾ ಗೋಷ್ಠಿಯಲ್ಲಿ ಎಐಡಿಎಸ್‌ಓ ಉತ್ತರ ಕನ್ನಡ ಜಿಲ್ಲಾ ಸಂಚಾಲಕರಾದ ಶಶಿಕಲಾ ಮೇಟಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 