ಸರ್ಕಾರ ರೈತರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು: ಹಿಂಗಾರು ಬಿತ್ತನೆ ಬೀಜ ಕೊರತೆಯಾಗದಿರಲಿ ಹಿಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆಗೆ ಚಾಲನೆ

ಸರ್ಕಾರ ರೈತರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು: ಹಿಂಗಾರು ಬಿತ್ತನೆ ಬೀಜ ಕೊರತೆಯಾಗದಿರಲಿ   ಹಿಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆಗೆ ಚಾಲನೆ Government should take more care of farmers: There should be no shortage of seeds for winter sowing

ಸರ್ಕಾರ ರೈತರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು: ಹಿಂಗಾರು ಬಿತ್ತನೆ ಬೀಜ ಕೊರತೆಯಾಗದಿರಲಿ 

ಹಿಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆಗೆ ಚಾಲನೆ 

ಬೀದರ್ 13: ರೈತರು ದೇಶದ ಬೆನ್ನೆಲುಬು ರೈತರು ಉತ್ತಮ ಬೆಳೆ ಬೆಳೆದರೆ ಮಾತ್ರ ಪ್ರತಿಯೊಬ್ಬರೂ ತಮ್ಮ ಜೀವನ ನಡೆಸಲು ಸಾಧ್ಯ. ಸರ್ಕಾರ ರೈತರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು, ಸರಕಾರಗಳು ರೈತರಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಉತ್ತಮವಾಗಿ ಕಲ್ಪಿಸಿದೆ ಗ್ರಾಮೀಣ ಪ್ರದೇಶದಲ್ಲಿ ರೈತರು, ಯುವಕರು ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಬಹುದು ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು. 

ಬೀದರ್ ದಕ್ಷಿಣ ಕ್ಷೇತ್ರದ ಕಮಠಾಣಾ ಗ್ರಾಮದಲ್ಲಿನ ಕೃಷಿ ಇಲಾಖೆ ರೈತ ಸಂಪರ್ಕ ಕೇಂದ್ರದಲ್ಲಿ 2025-26ನೇ ಸಾಲಿನ ಹಿಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.ಜಿಲ್ಲೆಯಾದ್ಯಂತ ಅತಿವೃಷ್ಟಿಯಿಂದ ರೈತರ ಮುಂಗಾರು ಬೆಳೆ ಸಂಪೂರ್ಣ ಹಾನಿಯಾಗಿದೆ ಇದೀಗ ಹಿಂಗಾರು ಬೆಳೆ ಬಿತ್ತನೆ ಪ್ರಾರಂಭ ವಾಗಲಿದ್ದು ಸರ್ಕಾರ ಕೂಡಲೇ ಮುಂಗಾರು ಬೆಳೆ ಹಾನಿ ಪರಿಹಾರ ವಿತರಣೆ ಮಾಡಿದರೆ ಸರ್ಕಾರ ರೈತರಿಗೆ ಅನುಕೂಲ ಕಲ್ಪಿಸಿದಂತಾಗುತ್ತದೆ ಈಗಾಗಲೇ ನಮ್ಮ ಪಕ್ಷದ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಬೆಳೆ ಹಾನಿ ಕುರಿತು ವಿಕ್ಷಣೆ ಮಾಡಿ ಸರ್ಕಾರಕ್ಕೆ ಶೀಘ್ರ ಪರಿಹಾರ ಒದಗಿಸಲು ಒಂತಾಯಿಸಲಾಗಿದೆ ಸರ್ಕಾರ ಕಾಲಹರಣ ಮಾಡದೆ ಪರಿಹಾರ ಬಿಡುಗಡೆ ಮಾಡಬೇಕು ಎಂದು ತಿಳಿಸಿದರು.ವಿಧಾನಸಭೆಯ ಅಧಿವೇಶನದಲ್ಲಿ ಬೀದರ್ ಜಿಲ್ಲೆಯ ವಿಷಯ ಪ್ರಸ್ತಾಪಿಸಿ , ಹೇಕ್ಟರ್ ಗೆ 50,000 ಪರಿಹಾರಕ್ಕೆ ಆಗ್ರಹಿಸಲಾಗಿದೆ ಸರ್ಕಾರ ಕೂಡಲೇ ಮುಂಗಾರು ಬೆಳೆ ಹಾನಿ ಪರಿಹಾರ ವಿತರಣೆ ಮಾಡಬೇಕು.ಜಿಲ್ಲೆಯಾದ್ಯಂತ ಸುಮಾರು ಕೃಷಿ ಬೆಳೆಯಲ್ಲಿ 1.65 ಲಕ್ಷ ಹೇಕ್ಟರ್ ಹಾನಿಯಾಗಿದೆ, ತೋಟಗಾರಿಕೆಯಲ್ಲಿ ಸುಮಾರು 1 ಸಾವಿರದ 300 ಹೇಕ್ಟರ್ ಬೆಳೆ ಹಾನಿಯಾಗಿದೆ.ಅದರಲ್ಲಿ ಕೃಷಿ ಬೆಳೆಯಲ್ಲಿ ಪ್ರಮುಖವಾಗಿ ಉದ್ದು, ಹೆಸರು, ಸೋಯಾಬೀನ್, ತೊಗರಿ ಸೇರಿದಂತೆ ವಿವಿಧ ಬೆಳೆಗಳು ನೀರುಪಾಲಾಗಿದ್ದು, ತೋಟಗಾರಿಕೆ ಬೆಳೆಯಲ್ಲಿ ಶುಂಠಿ, ಪಪ್ಪಾಯಿ, ಬಾಳೆಹಣ್ಣು ಸೇರಿದಂತೆ ವಿವಿಧ ತರಕಾರಿ ಬೆಳೆ ಹಾನಿಯಾಗಿ ರೈತರು ಕಂಗಾಲಾಗಿದ್ದಾರೆ.ಸರ್ಕಾರ ಕೂಡಲೇ ಪ್ರತಿ ಹೆಕ್ಟೇರ್‌ಗೆ ?50 ಸಾವಿರ ಪರಿಹಾರ ನೀಡಬೆಕು. ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ಸರ್ಕಾರ ಧಾವಿಸಬೇಕುಎಂದು ಆಗ್ರಹಿಸಿದರು. ರೈತರು ಕೃಷಿ ಚಟುವಟಿಕೆ ಕುರಿತು ಹೆಚ್ಚಿನ ಮಾಹಿತಿಗಾಗಿನಿಮ್ಮ ಸ್ಥಳೀಯ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಿ. ಕೃಷಿ ಅಧಿಕಾರಿಗಳು ನಿಮ್ಮ ಕೃಷಿ ಇಲಾಖೆಯ ಅಧಿಕೃತ ವೆಬ್‌ಸೈಟ್ ಅಥವಾ ಸಾಮಾಜಿಕ ಮಾಧ್ಯಮ ಪುಟಗಳನ್ನು ತೆರೆದು ರೈತರಿಗೆ ಕೃಷಿ ಇಲಾಖೆಯ ಸೌಲಭ್ಯ ಕುರಿತು ಮಾಹಿತಿ ನೀಡಬೇಕು.ಹಿಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆಯನ್ನು ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಾರಂಭಿಸಲಾಗಿದೆ. ರೈತರು ತಮ್ಮ ಆಧಾರ್ ಕಾರ್ಡ್‌ ಮತ್ತು ಇತರ ಅಗತ್ಯ ದಾಖಲೆಗಳೊಂದಿಗೆ ಕೇಂದ್ರಗಳಿಗೆ ಭೇಟಿ ನೀಡಿ, ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಗೋಧಿ, ಕುಸುಬೆ ಪಡೆಯಬಹುದು. ರೈತರು ಇದರ ಸದುಪಯೋಗ ಪಡೆದುಕೊಳ್ಳಲು ಮನವಿ ಮಾಡಿದರು. 

ಈ ಸಂದರ್ಭದಲ್ಲಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕರಾದ ಆರತಿ ಪಾಟೀಲ್, ಕಮಠಾಣಾ ಕೃಷಿ ಅಧಿಕಾರಿ ಶೌಮ್ಯ, ಮುಖಂಡರಾದ ಕುಶಲ ಯಾಬಾ, ನಾಗಭೂಷಣ ಕಮಠಾಣೆ, ಗುರುನಾಥ್ ರಾಜಗೀರ ಬಗದಲ್, ಬಸವರಾಜ ಕ್ಯಾಸಾ, ಉಮೇಶ್ ಯಾಬಾ, ಉದಯ ಮಹಾರಾಜ, ಶಂಕರ, ಖಮೂರೊದ್ದೀನ್, ವಿನೋದ, ಸಂತೋಷ ಶಂಭು ಮತ್ತಿತರರು ಉಪಸ್ಥಿತರಿದ್ದರು.ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರ ಮಾಧ್ಯಮ ಸಂಯೋಜಕ, ಸಹಾಯಕ ನಾಗೇಶ ಸಿದ್ಧಾ,