ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಅಸ್ತು: ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ!

ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಅಸ್ತು: ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ! Government to appoint guest lecturers

ಧಾರವಾಡ 30 : ರಾಜ್ಯದಲ್ಲಿ ಪದವಿ ಕಾಲೇಜುಗಳು ಆರಂಭವಾಗಿ 2 ತಿಂಗಳಾದರೂ, ಅತಿಥಿ ಉಪನ್ಯಾಸಕರಿಲ್ಲದೆ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ತರಗತಿಗಳನ್ನೇ ನಡೆಸದೆ ರಾಜ್ಯದ ಹಲವು ವಿಶ್ವವಿದ್ಯಾಲಯಗಳು ಪರೀಕ್ಷೆಗಳನ್ನು ಕೂಡ ಘೋಷಿಸಿವೆ. ಇನ್ನೊಂದೆಡೆ, ಖಾಸಗಿ ಕಾಲೇಜುಗಳಲ್ಲಿ ಸರಾಗವಾಗಿ ಪಾಠಗಳು ನಡೆದು ಅಲ್ಲಿನ ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಾಗುತ್ತಿದ್ದಾರೆ.  

ರಾಜ್ಯದ ಬಡ ವಿದ್ಯಾರ್ಥಿಗಳಿಗಾದ ಈ ಘೋರ ಅನ್ಯಾಯವನ್ನು ಖಂಡಿಸಿ ಎಐಡಿಎ ನೇತೃತ್ವದಲ್ಲಿ ರಾಜ್ಯದ ವಿದ್ಯಾರ್ಥಿಗಳು ಕಳೆದ ಎರಡು ತಿಂಗಳಿಂದ ಹೋರಾಟ ನಡೆಸಿದ್ದಾರೆ.  ಈಲ್ಲಾ ಮಟ್ಟದಲ್ಲಿ ಪ್ರತಿಭಟನೆಗಳನ್ನು ನಡೆಸಿ, ಸೆಪ್ಟೆಂಬರ್ 27ರಂದು ರಾಜ್ಯವಾಪಿ ಸ್ವಯಂಪ್ರೇರಿತರಾಗಿ ತರಗತಿ ಬಹಿಷ್ಕರಿಸಿದ್ದಾರೆ. ಈಶ್ವರ ಚಂದ್ರ ವಿದ್ಯಾಸಾಗರ್, ಜ್ಯೋತಿರಾವ್ ಪುಲೆ, ಕ್ರಾಂತಿಕಾರಿ ಭಗತ್ ಸಿಂಗ್, ನೇತಾಜಿಯವರ ಆದರ್ಶಗಳಿಂದ ಪ್ರೇರಿತರಾಗಿ ತಮ್ಮ ಶಿಕ್ಷಣದ ಹಕ್ಕನ್ನು ಕಾಪಾಡಿಕೊಳ್ಳಲು ವಿದ್ಯಾರ್ಥಿಗಳು ನಡೆಸಿದ ಹೋರಾಟಕ್ಕಿಂದು ಜಯ ದೊರೆತಿದೆ. ಅಚಿತಿಮವಾಗಿ, ಕರ್ನಾಟಕ ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರ ನೇಮಕಾತಿಗೆ ಮುಂದಾಗಿದೆ. ವಿದ್ಯಾರ್ಥಿಗಳ ಕೂಗಿಗೆ ಸ್ಪಂದಿಸಿದ ಸರ್ಕಾರದ ನಡೆಯನ್ನು ಎಐಡಿಎ ಸ್ವಾಗತಿಸುತ್ತದೆ. ಆದರೆ, ಪ್ರತಿ ವಿಷಯಕ್ಕೆ ಕನಿಷ್ಠ 30 ಗಂಟೆ ಪಾಠ ನಡೆಸಿದ ನಂತರವಷ್ಟೇ ಪರೀಕ್ಷೆಗಳನ್ನು ನಡೆಸಬೇಕೆಂದು ರಾಜ್ಯ ಸರ್ಕಾರವನ್ನು ಈ ಮೂಲಕ ಆಗ್ರಹಿಸುತ್ತಿದ್ದೇವೆ. 

ಹೋರಾಟದಿಂದ ಮಾತ್ರವೇ ಬದಲಾವಣೆ ಸಾಧ್ಯ ಎಂಬ ಸಂದೇಶವನ್ನು ಕರ್ನಾಟಕದ ವಿದ್ಯಾರ್ಥಿಗಳು ಈ ಮೂಲಕ ಎಲ್ಲೆಡೆ ಸಾರಿದ್ದಾರೆ.  ಹೋರಾಟದಲ್ಲಿ ಭಾಗಿಯಾದ ಧಾರವಾಡ ಜಿಲ್ಲೆಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಎಲ್ಲ ವಿದ್ಯಾರ್ಥಿಗಳಿಗೆ ಇಂದು ಎಐಡಿ ಧಾರವಾಡ ಜಿಲ್ಲಾ ಸಮಿತಿಯಿಂದ ಕ್ರಾಂತಿಕಾರಿ ಅಭಿನಂದನೆಗಳನ್ನು ತಿಳಿಸಲಾಯಿತು. ತರಗತಿಗಳನ್ನು ಪೂರ್ಣಗೊಳಿಸದೆ ಪರೀಕ್ಷೆಗಳನ್ನು ನಡೆಸಿದ್ದಲ್ಲಿ, ಮುಂಬರುವ ದಿನಗಳಲ್ಲಿ ಈ ಸಮಸ್ಯೆಯ ವಿರುದ್ಧ ವಿದ್ಯಾರ್ಥಿಗಳು ಒಟ್ಟಾಗಿ ಹೋರಾಡಬೇಕಾಗುತ್ತದೆ ಎಂಬ ಕರೆಯನ್ನು ಸಹ ನೀಡಲಾಯಿತು. 

ಈ ಸಂದರ್ಭದಲ್ಲಿ ಸಂಘಟನೆಯ ಅಧ್ಯಕ್ಷರಾದ ಸಿಂಧೂ ಕೌದಿ, ಕಚೇರಿ ಕಾರ್ಯದರ್ಶಿ ಸ್ಫೂರ್ತಿ ಚಿಕ್ಕಮಠ, ಕಾರ್ಯಕರ್ತರಾದ ಸಿದ್ದು, ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.