ರಾಜಪೂತ ಸಮುದಾಯಕ್ಕೆ ಪ್ರಾಧಿಕಾರ ರಚಿಸುವಂತೆ ಸರ್ಕಾರಕ್ಕೆ ಒತ್ತಾಯ
Government urged to form an authority for the Rajput community
ಲೋಕದರ್ಶನ ವರದಿ
ಗದಗ 30 : ರಾಜ್ಯದಲ್ಲಿ ಲಕ್ಷಾಂತರ ಜನಸಂಖ್ಯೆ ಹೊಂದಿರುವ ರಜಪೂತ ಸಮಾಜವು ಆರ್ಥಿಕವಾಗಿ ಶೈಕ್ಷಣಿಕವಾಗಿ ಹಾಗೂ ಉದ್ಯೋಗ ರಂಗದಲ್ಲಿ ತೀವ್ರವಾಗಿ ಹಿಂದುಳಿದಿದೆ. ನಮ್ಮ ಯುವ ಪೀಳಿಗೆಗೆ ಸೂಕ್ತ ಪ್ರೋತ್ಸಾಹ ಮತ್ತು ಮಾರ್ಗದರ್ಶನ ಸಿಗದೇ ಸಮಾಜವು ಇಂದಿಗೂ ಮುಖ್ಯವಾಹಿನಿಗೆ ಬರುವದು ಸಾಧ್ಯವಾಗಿಲ್ಲ ಆದ್ದರಿಂದ ರಜಪೂತ ಪ್ರಾಧಿಕಾರವನ್ನು ರಾಜ್ಯ ಸರಕಾರ ಪ್ರಾರಂಭಿಸಿ ಸೂಕ್ತ ಸಹಾಯ ಸೌಲಭ್ಯಗಳು ಒದಗಿಸಿಕೊಡಬೇಕೆಂದು ಗದಗ ಬೆಟಗೇರಿ ರಜಪೂತ ಸಮಾಜದ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳಿಗೆ ಗದಗ ಜಿಲ್ಲಾಧಿಕಾರಿ ಶ್ರೀ ಸಿ.ಎನ್. ಶ್ರೀಧರ ಅವರಿಗೆ ಇಂದು ಸಮಾಜದ ಅಧ್ಯಕ್ಷ ಗಣೇಶಸಿಂಗ್ ಬ್ಯಾಳಿ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿಗಳು ಸೂಕ್ತ ಶಿಫಾರಸ್ಸಿನೊಂದಿಗೆ ಮುಖ್ಯಮಂತ್ರಿಗಳಿಗೆ ಕಳುಹಿಸಿಕೊಡಲಾಗುವದೆಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ದೇವಿಸಿಂಗ್ ಬ್ಯಾಳಿ, ಶೇಡುಸಿಂಗ್ ಜಮಾದಾರ ಮತ್ತಿತರರು ಉಪಸ್ಥಿತರಿದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 