ಜಾರ್ಜ್‌ ಫರ್ನಾಂಡೀಸ್ಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಸರ್ಕಾರಕ್ಕೆ ಒತ್ತಾಯ

ಜಾರ್ಜ್‌ ಫರ್ನಾಂಡೀಸ್ಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಸರ್ಕಾರಕ್ಕೆ ಒತ್ತಾಯ Government urged to give George Fernandes the position of Corporation Board Chairman

ಕೊಪ್ಪಳ 19:   ಕಲ್ಯಾಣ ಕರ್ನಾಟಕ ಭಾಗದ ಬೀದರ್ ಜಿಲ್ಲೆಯ ಕಾಂಗ್ರೆಸ್ ಮುಖಂಡ ಜಾರ್ಜ್‌ ಫರ್ನಾಂಡೀಸ್ ಅವರಿಗೆ ಕರ್ನಾಟಕ ಸರ್ಕಾರದ ನಿಗಮ ಇಲ್ಲವೇ ಮಂಡಳಿಯ ಸಂಪುಟ ದರ್ಜೆಯ ಸ್ಥಾನಮಾನ ಉಳ್ಳ ಸರಕಾರದ ಅಧೀನ ಸಂಸ್ಥೆ ಗಳಲ್ಲಿ ಕಾರ್ಯನಿರ್ವಹಿಸಲು  ಯಾವುದಾದರೂ ಒಂದು ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಕೊಪ್ಪಳ ಜಿಲ್ಲೆಯ ಕ್ರೈಸ್ತ ಸಮುದಾಯದ ಪ್ರಮುಖರು  ಸೇರಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರ ಕಾಂಗ್ರೆಸ್ ಸರ್ಕಾರಕ್ಕೆ ಮತ್ತು ಪಕ್ಷದ ವರಿಷ್ಠ ಮಂಡಳಿಗಳಲ್ಲಿ ಮನವಿ ಮಾಡಿಕೊಂಡು ಒತ್ತಾಯಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿದ ಕೆಲ ಕಾರ್ಯಕರ್ತರು ಮತ್ತು ಅಭಿಮಾನಿ ಗಳು ಒತ್ತಾಯಿಸಿ ಬೀದರ್ ಜಿಲ್ಲೆಯ ಹಿರಿಯ ಮುಖಂಡ ಜಾರ್ಜ್‌ ಫರ್ನಾಂಡೀಸ್ ಅವರು ಕಳೆದ 18 ವರ್ಷಗಳಿಂದ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ. ವಿವಿಧ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗೆ ಶ್ರಮಿಸುತ್ತಾ ಬಂದಿದ್ದಾರೆ ಅಲ್ಲದೆ ಪಕ್ಷದ ಕಾರ್ಯಕರ್ತರು ಮತ್ತು ಜನಸಾಮಾನ್ಯರ ಪ್ರೀತಿ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ ಬಂದಿದ್ದಾರೆ ಕೂಡಲೇ ಅವರನ್ನು ಸರ್ಕಾರದ ನಿಗಮ ಮಂಡಳಿಗಳಲ್ಲಿ ಅಧ್ಯಕ್ಷ ಸ್ಥಾನ ನೀಡಿ ಇನ್ನಷ್ಟು ಉತ್ತಮ ಜನಸೇವೆ ಸಲ್ಲಿಸುವುದರ ಜೊತೆಗೆ ಪಕ್ಷದ ಸೇವೆ ಮಾಡಲು ಅನುಕೂಲ ಒದಗಿಸಿ ಕೊಡಬೇಕೆಂದು ಪ್ರಭಾಕರ್, ಅನೀಶ್ , ಅಮಿತ್ ರಾಜು ಅಲ್ಲದೆ ಖಾಸಿಂ ಅಲಿ ಹ್ಯಾಟಿ ಸೇರಿದಂತೆ ಅನೇಕರು ತಮ್ಮ ಅಭಿಪ್ರಾಯ ಹೇಳಿದ್ದಾರೆ.

ಅಲ್ಲದೆ ಸರ್ಕಾರಕ್ಕೆ ಮತ್ತು ಪಕ್ಷದ ವರಿಷ್ಠ ಮಂಡಳಿಗಳಲ್ಲಿ ಮನವಿ ಮಾಡಿಕೊಂಡು ಒತ್ತಾಯಿಸಿದ್ದಾರೆ, ಜಾರ್ಜ್‌ ಫರ್ನಾಂಡಿಸ್ ರವರು ಹಿಂದುಳಿದ ಪ್ರದೇಶವಾದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಕ್ರಿಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು ಕಾಂಗ್ರೆಸ್ನ ಬೀದರ್ ನಗರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಜಿಲ್ಲಾ ಘಟಕದ ಕಾರ್ಯದರ್ಶಿ, ವಕ್ತಾರರಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದಾರೆ. 2015 ರಿಂದ 2018 ರ ವರೆಗೆ ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಶಿಕ್ಷಣ ಕ್ಷೇತ್ರಕ್ಕೂ ಕೊಡುಗೆ ನೀಡಿದ್ದಾರೆ. ಪ್ರಸ್ತುತ ಪಕ್ಷದ ಬೀದರ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಕ್ರೈಸ್ತರು ಸೇರಿದಂತೆ ಸರ್ವ ಸಮುದಾಯಗಳ ಪ್ರೀತಿ, ವಿಶ್ವಾಸ ಗಳಿಸಿದ್ದಾರೆ. ಪಕ್ಷದ ಕಿರಿಯ-ಹಿರಿಯ ನಾಯಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ ಎಂದು ಅವರ ಕಾರ್ಯ ವೈಖರಿ ಬಗ್ಗೆ ಹಲವರು ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.ಅವರಿಗೆ ನಿಗಮ ಇಲ್ಲವೇ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಿದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ಸಾಹದಿಂದ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುಕೂಲವಾಗಲಿದೆ.

ಹೀಗಾಗಿ ಪಕ್ಷ ನಿಷ್ಠೆ ಹಾಗೂ ಪಕ್ಷಕ್ಕಾಗಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ನಿಗಮ ಇಲ್ಲವೇ ಮಂಡಳಿ ನೇಮಕದಲ್ಲಿ ಅವರಿಗೆ ಪ್ರಾತಿನಿಧ್ಯ ಕೊಡಬೇಕು ಎಂದು ಪ್ರಭಾಕರ್ ಅನೀಶ್ ಅಮಿತ್ ರಾಜು ಅಲ್ಲದೆ ಖಾಸಿಂ ಅಲಿ ಹ್ಯಾಟಿ ಮತ್ತಿತರರು ಸರ್ಕಾರದ ಮಟ್ಟದಲ್ಲಿ  ಪ್ರಕಟಣೆ ಮೂಲಕ ಬೇಡಿಕೆ ಮಂಡಿಸಿದ್ದಾರೆ ಹಾಗೂ ಕೂಡಲೇ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಅವರು ಸದರಿಯವರಿಗೆ ಅವಕಾಶ ದೊರಕಿಸಿ ಕೊಟ್ಟು ಸಾಮಾಜಿಕ ನ್ಯಾಯ ಎತ್ತಿ ಹಿಡಿಯುವಂತ ಕೆಲಸ ಮಾಡಬೇಕೆಂದು ವರಿಷ್ಠರಲ್ಲಿ ಮನವಿ ಮಾಡಿಕೊಂಡಿದ್ದಾರೆ,