ರಾಜ್ಯಪಾಲರ ಗಜೇಂದ್ರಗಡ ಪ್ರವಾಸ: ಶಿಷ್ಟಾಚಾರ ಪಾಲನೆಯಲ್ಲಿ ನಿರ್ಲಕ್ಷ್ಯ ಸಹಿಸಲಾಗದು : ಜಿಲ್ಲಾಧಿಕಾರಿ

ರಾಜ್ಯಪಾಲರ ಗಜೇಂದ್ರಗಡ ಪ್ರವಾಸ: ಶಿಷ್ಟಾಚಾರ ಪಾಲನೆಯಲ್ಲಿ ನಿರ್ಲಕ್ಷ್ಯ ಸಹಿಸಲಾಗದು  : ಜಿಲ್ಲಾಧಿಕಾರಿ Governor's visit to Gajendragad: Negligence in adhering to protocol will not be tolerated: Deputy Co

ಗದಗ, ಜು.21: ಗೌರವಾನ್ವಿತ ಕರ್ನಾಟಕದ ರಾಜ್ಯಪಾಲರ ಜುಲೈ 23ರಂದು ನಡೆಯಲಿರುವ ಗಜೇಂದ್ರಗಡ ಪ್ರವಾಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಪೂರ್ವಸಿದ್ಧತಾ ಹಾಗೂ ಶಿಷ್ಟಾಚಾರ ಸಭೆ ನಡೆಯಿತು. ರಾಜ್ಯಪಾಲರ ಪ್ರವಾಸಕ್ಕೆ ಸಂಬಂಧಿಸಿದ ಎಲ್ಲಾ ವ್ಯವಸ್ಥೆಗಳು ಶಿಷ್ಟಾಚಾರದಂತೆ ಹಾಗೂ ಯಾವುದೇ ಲೋಪವಿಲ್ಲದಂತೆ ನಡೆಯಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.  

ಸಭೆಯಲ್ಲಿ ಮಾತನಾಡಿದ ಅವರು, "ರಾಜ್ಯಪಾಲರ ಪ್ರವಾಸದ ವೇಳೆ ಶಿಷ್ಟಾಚಾರ ಪಾಲನೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ನಡೆಯಬಾರದು. ಅಧಿಕಾರಿಗಳಿಗೆ ವಹಿಸಲಾದ ಜವಾಬ್ದಾರಿಗಳನ್ನು ಅತ್ಯಂತ ಹೊಣೆಗಾರಿಕೆಯಿಂದ ನಿರ್ವಹಿಸಬೇಕು. ಯಾವುದೇ ಅವ್ಯವಸ್ಥೆ ಅಥವಾ ಲೋಪ ಕಂಡುಬಂದರೆ ಸಹಿಸಲಾಗುವುದಿಲ್ಲ" ಎಂದು ಎಚ್ಚರಿಕೆ ನೀಡಿದರು. ರಾಜ್ಯಪಾಲರು ಸಂಚರಿಸುವ ಮಾರ್ಗದ ರಸ್ತೆಗಳು ಸಂಪೂರ್ಣ ಸುಸ್ಥಿತಿಯಲ್ಲಿರುವಂತೆ ಸಂಬಂಧಿಸಿದ ಇಲಾಖೆಗಳು ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು. ರಸ್ತೆ ಮಾರ್ಗದಲ್ಲಿ ಯಾವುದೇ ಅಡಚಣೆ ಅಥವಾ ಸಂಚಾರ ದಟ್ಟಣೆ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.  

ಗಜೇಂದ್ರಗಡ ಪಟ್ಟಣದ ಟಿಟಿಡಿ ಕಲ್ಯಾಣ ಮಂಟಪದ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ಸಾಧ್ಯತೆ ಇರುವುದರಿಂದ, ಜನಸಂದಣಿ ನಿಯಂತ್ರಣ, ವಾಹನ ನಿಲುಗಡೆ, ಕುಡಿಯುವ ನೀರು, ಆರೋಗ್ಯ ಸೇವೆ, ಭದ್ರತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸಮರ​‍್ಕವಾಗಿ ಕಲ್ಪಿಸಬೇಕು ಎಂದು ತಿಳಿಸಿದರು. ಅಗತ್ಯವಿದ್ದಲ್ಲಿ ಪರ್ಯಾಯ ವ್ಯವಸ್ಥೆಗಳನ್ನು ಸಾರ್ವಜನಿಕರಿಗೆ ಕಲ್ಪಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.