ಜಾತಿ ಪ್ರಮಾಣ ಪತ್ರಗಳ ವಿತರಣೆಗೆ ಗೋವಿಂದ ಕಾaರಜೋಳ ಸೂಚನೆ

ಬೆಂಗಳೂರು, ಏ.24,ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ  ಲಾಕ್ ಡೌನ್  ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ಜಾತಿ ಪ್ರಮಾಣ ಪತ್ರಗಳನ್ನು ವಿತರಣೆ  ಮಾಡದಿರುವ ಬಗ್ಗೆ ದೂರುಗಳು ಬಂದಿದ್ದು, ಅರ್ಹ ಫಲಾನುಭವಿಗಳಿಗೆ  ಜಾತಿ  ಪ್ರಮಾಣ ಪತ್ರಗಳನ್ನು ವಿತರಿಸಲು ಕ್ರಮಕೈಗೊಳ್ಳುವಂತೆ  ಕಂದಾಯ ಇಲಾಖೆಯ ಪ್ರಧಾನ  ಕಾರ್ಯದರ್ಶಿಯವರಿಗೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಸೂಚಿಸಿದ್ದಾರೆ. ಆರೋಗ್ಯ ತಪಾಸಣೆ, ಶಸ್ತ್ರಚಿಕಿತ್ಸೆ ಗೊಳಪಡುವ ಫಲಾನುಭವಿಗಳು,  ವಿದ್ಯಾರ್ಥಿಗಳು,  ಉದ್ಯೋಗಾಕಾಂಕ್ಷಿಗಳು ಜಾತಿ ಪ್ರಮಾಣ ಪತ್ರದ ಕೊರತೆಯಿಂದ ತೊಂದರೆಗೊಳಗಾಗಿದ್ದಾರೆ. ಅರ್ಹ  ಆಕಾಂಕ್ಷಿ ಫಲಾನುಭವಿಗಳಿಗೆ ಜಾತಿ ಪ್ರಮಾಣ ಪತ್ರಗಳನ್ನು ವಿತರಿಸಲು ರಾಜ್ಯದ ಎಲ್ಲಾ  ತಹಶಿಲ್ದಾರರಿಗೆ ನಿರ್ದೇಶಿಸುವಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ  ಪ್ರಸಾದ್ ಅವರಿಗೆ ಕಾರಜೋಳ ಸೂಚಿಸಿದ್ದಾರೆ.