ಹೋರಾಟಗಾರರ ಮೇಲೆ ಸರ್ಕಾರ ಮಾಡಿರುವ ಲಾಠಿ ಚಾರ್ಜ್ ಖಂಡನೀಯ: ಶಿವಾಚಾರ್ಯರ ಸ್ವಾಮೀಜಿ
Govt's lathi charge on militants is condemnable: Shivacharya Swamiji
ಹೋರಾಟಗಾರರ ಮೇಲೆ ಸರ್ಕಾರ ಮಾಡಿರುವ ಲಾಠಿ ಚಾರ್ಜ್ ಖಂಡನೀಯ: ಶಿವಾಚಾರ್ಯರ ಸ್ವಾಮೀಜಿ
ದೇವರಹಿಪ್ಪರಗಿ 13: ವೀರಶೈವ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ಆಗ್ರಹಿಸಿ ಬೆಳಗಾವಿ ಸುವರ್ಣ ವಿಧಾನಸೌಧದ ಬಳಿ ಪ್ರತಿಭಟನೆ ಮಾಡುತ್ತಿದ್ದ ಹೋರಾಟಗಾರರ ಮೇಲೆ ಸರ್ಕಾರ ಲಾಠಿ ಚಾರ್ಜ್ ಮಾಡಿರುವುದು ಖಂಡನೀಯ ಎಂದು ಪಟ್ಟಣದ ಜಡೆ ಮಠದ ಷ.ಬ್ರ ಶ್ರೀ ಜಡಿಸಿದ್ದೇಶ್ವರ ಶಿವಾಚಾರ್ಯರ ಸ್ವಾಮೀಜಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಹೋರಾಟ ಮಾಡುವ ಹಕ್ಕಿದೆ. ವೀರಶೈವ ಲಿಂಗಾಯತ ಸಮಾಜದಲ್ಲಿ ನೂರಕ್ಕೂ ಅಧಿಕ ಉಪಪಂಗಡಗಳಿವೆ. ಪಂಚಮಸಾಲಿ ಸಮಾಜದಲ್ಲಿ ಬಹುತೇಕರು ಕೃಷಿ ಕಾರ್ಮಿಕರು, ಆರ್ಥಿಕವಾಗಿ ದುರ್ಬಲರಾಗಿದ್ದಾರೆ. ಅಂತಹವರಿಗೆ ವಿದ್ಯಾಭ್ಯಾಸ, ಉದ್ಯೋಗ ಕ್ಷೇತ್ರದಲ್ಲಿ ಮೀಸಲಾತಿ ದೊರೆಯಬೇಕೆಂಬ ಕಾರಣಕ್ಕಾಗಿ ಕೂಡಲಸಂಗಮ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹಲವು ವರ್ಷಗಳಿಂದ ಹೋರಾಟ ನಡೆಯುತ್ತಿದೆ. ಸರ್ಕಾರ ಹೋರಾಟಗಾರರನ್ನು ಕರೆದು ವಾಸ್ತವ ನೆಲೆಗಟ್ಟಿನಲ್ಲಿ ಚರ್ಚೆ ನಡೆಸಿ ಸಮಸ್ಯೆಗೆ ಪರಿಹಾರ ಒದಗಿಸಬೇಕೇ ಹೊರತು ಹೋರಾಟವನ್ನು ಹತ್ತಿಕ್ಕುವುದು, ಶ್ರೀಗಳ ಹಾಗೂ ಹೋರಾಟಗಾರರ ಮೇಲೆ ಪ್ರಕರಣವನ್ನು ದಾಖಲಿಸುವುದು ಉತ್ತಮ ಬೆಳವಣಿಗೆಯಲ್ಲ.
ವೀರಶೈವ ಲಿಂಗಾಯತ ಸಮಾಜದ ಎಲ್ಲ ಒಳಪಂಗಡದವರಿಗೂ ಕೇಂದ್ರದ ಒಬಿಸಿ ಮೀಸಲಾತಿ ದೊರೆಯಬೇಕೆಂಬ ಕೂಗು ಈ ಹಿಂದಿನಿಂದಲೂ ಇದೆ. ಅದಕ್ಕೂ ರಾಜ್ಯ ಸರ್ಕಾರ ಸ್ಪಂದಿಸಬೇಕು. ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಸ್ವಾಮೀಜಿ ಒತ್ತಾಯಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 