ಕನ್ನಡಿಗರ ಹಿತರಕ್ಷಣೆಗೆ ಸರ್ಕಾರ ಬದ್ಧ: ಮುಖ್ಯಮಂತ್ರಿ ಯಡಿಯೂರಪ್ಪ


ಬೆಂಗಳೂರು:  ನಮ್ಮ ಸಕರ್ಾರ ಕನ್ನಡ ಹಾಗೂ ಕನ್ನಡಿಗರ ಹಿತರಕ್ಷಣೆಗೆ ಬದ್ಧವಾಗಿದೆ. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್  ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ 


ಬೆಂಗಳೂರಿನಲ್ಲಿ ಭಾನುವಾರ ಜೈನ ಧರ್ಮದ ಜನರ ಮೇಲೆ ನಡೆದ ದಾಳಿ ಹಿನ್ನೆಲೆಯಲ್ಲಿ ಯಡಿಯೂರಪ್ಪ ಈ ಸ್ಪಷ್ಟನೆ ನೀಡಿದ್ದಾರೆ. 


ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಈ ಘಟನೆಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದೆಯೇ ಹೊರತು ಕನ್ನಡ ಪರ ಹೋರಾಟಗಾರರನ್ನು ಗುರಿಯಾಗಿಸಿಕೊಂಡು  ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ಹೇಳಿದ್ದಾರೆ