ನವದೆಹಲಿ, ಫೆ 28 : ರಾಜ್ಯಗಳು ಶೇ100 ರಷ್ಟು ಭೂಸ್ವಾಧೀನ ಒದಗಿಸುವ ಯೋಜನೆಗಳಲ್ಲಿ ಹೂಡಿಕೆ ಮಾಡಲು ಆದ್ಯತೆ ನೀಡುವಂತೆ ರೈಲ್ವೆ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ರೈಲ್ವೆ ಇಲಾಖೆಗೆ ಸೂಚಿಸಿದ್ದಾರೆ.
ರಾಜ್ಯದ ಆರ್ಥಿಕಾಭಿವೃದ್ಧಿ ಆದ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಸರಕು ಸಾಗಣೆಗೆ ಸರಿಯಾದ ಪ್ರಾಮುಖ್ಯತೆ ನೀಡುವಾಗ ರೈಲ್ವೆ ಯೋಜನೆಗಳನ್ನು ಪರಿಶೀಲಿಸಲು ಮತ್ತು ಆದ್ಯತೆ ನೀಡುವಂತೆ ಗೋಯಲ್ ರಾಜ್ಯಗಳಿಗೆ ಕರೆ ನೀಡಿದ್ದಾರೆ.
ಕೈಗಾರಿಕಾ ಮತ್ತು ಆಂತರಿಕ ವ್ಯಾಪಾರ ಉತ್ತೇಜನಾ ಇಲಾಖೆಯಲ್ಲಿ 17 ಬೃಹತ್ ಗಾತ್ರದ ಮೂಲಸೌಕರ್ಯ ಯೋಜನೆಗಳ ಪರಿಶೀಲನೆಗಾಗಿ ಗುರುವಾರ ಇಲ್ಲಿ ಕರೆದಿದ್ದ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯನಿರತ ಬಂಡವಾಳವನ್ನು ಅತ್ಯುತ್ತಮವಾಗಿ ಬಳಸಿಕೊಳ್ಳಲು ಸಾಲ ಪತ್ರಗಳ ಮೂಲಕ ನಿಧಿ ವಿತರಿಸುವಂತೆ ರೈಲ್ವೆ ಸಚಿವರು ಸೂಚಿಸಿದರು.
ಮರ ಕಡಿಯುವುದನ್ನು ತಪ್ಪಿಸಲು ಮರ ಕಸಿ ಮಾಡುವಲ್ಲಿ ತಂತ್ರಜ್ಞಾನದ ಬಳಕೆಯನ್ನು ಪರಿಗಣಿಸುವಂತೆ ಎಲ್ಲಾ ರಾಜ್ಯಗಳು ಹಾಗೂ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಕ್ಕೆ ಗೋಯಲ್ ಸೂಚಿಸಿದರು. ಈಗಾಗಲೇ ನಡೆಸಿರುವ ಪ್ರಯತ್ನಗಳನ್ನು ಗಮನದಲ್ಲಿಟ್ಟುಕೊಂಡು ಮರ ಕಸಿ ಮಾಡಲು ಲಭ್ಯವಿರುವ ಅತ್ಯುತ್ತಮ ತಂತ್ರಜ್ಞಾನಗಳ ಕುರಿತು ಪರಿಕಲ್ಪನಾ ವರದಿ ನೀಡುವಂತೆ ಸಚಿವಾಲಯಕ್ಕೆ ಸಚಿವಾಲಯದ ಹೆಚ್ಚುವರಿ ನಿರ್ದೇಶಕರಿಗೆ ಸೂಚಿಸಿದ್ದಾರೆ.
ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ರಾಜ್ಯ ಸಚಿವ ಸೋಮ್ ಪ್ರಕಾಶ್ ಭಾಗವಹಿಸಿದ್ದರು. ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ವಿದ್ಯುತ್ ಯೋಜನೆಗಳಿಗೆ ಹೆಚ್ಚುವರಿ ಪ್ರಸರಣ ಮಾರ್ಗಗಳನ್ನು ಸ್ಥಾಪಿಸುವ ಮಹತ್ವವನ್ನು ಗೋಯಲ್ ಒತ್ತಿಹೇಳಿದರು. ಬೆಂಗಳೂರಿನಲ್ಲಿ ಮೂಲಸೌಕರ್ಯಗಳ ಕೊರತೆಯಿಂದಾಗಿ ವಿದ್ಯುತ್ ಕೊರತೆ ಮೊದಲೇ ಉದ್ಭವಿಸಿದೆ ಎಂದು ಅವರು ಹೇಳಿದ್ದಾರೆ.