ಗ್ರಾಮ ಪಂಚಾಯತ್ ಚುನಾವಣೆಗೆ ಅಧಿಸೂಚನೆ ಪ್ರಕಟ

ಬೆಂಗಳೂರು, ಜ.  11, 2020ನೇ ಸಾಲಿನ ಗ್ರಾಮ ಪಂಚಾಯತ್ ಚುಬಾವಣೆಗೆ ರಾಜ್ಯ ಚುನಾವಣಾ ಆಯೋಗ  ಅಧಿಸೂಚನೆ ಪ್ರಕಟಿಸಿದ್ದು, ಏ 5 ಮತ್ತು 9ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ.ಮೊದಲ ಹಂತದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,ಚಿಕ್ಕಬಳ್ಳಾಪುರ,ತುಮಕೂರು, ಹಾಸನ, ಮಂಡ್ಯ, ಕೋಲಾರ, ಹಾಸನ, ಮಂಡ್ಯ, ಮಡಿಕೇರಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಮತದಾನ ನಡೆಯಲಿದೆ. ಎರಡನೇ ಹಂತದಲ್ಲಿ ಉತ್ತರ ಕರ್ನಾಟಕ‌ ಮತ್ತು ಕರಾವಳಿ ಭಾಗಗಳಿಗೆ ಚುನಾವಣೆ ನಡೆಯಲಿದೆ.ಇವಿಎಂ ಮತಯಂತ್ರಗಳನ್ನು ಈ ಬಾರಿಯೂ ಬಳಕೆ ಮಾಡಲಾಗುತ್ತಿದ್ದು ಬೆಳಿಗ್ಗೆ 6 ರಿಂದ ಸಂಜೆ‌6ರವರೆಗೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ.