ವೈಜ್ಞಾನಿಕ ಕನಿಷ್ಠ ಕೂಲಿ ಜಾರಿಗಾಗಿ ಗ್ರಾಪಂ ನೌಕರರ ಆಗ್ರಹ
Gram Panchayat employees demand implementation of scientific minimum wage
ಗೋಕಾಕ, 25 ; ಉಚ್ಚ ನ್ಯಾಯಾಲಯದ ಆದೇಶದಂತೆ ವೈಜ್ಞಾನಿಕ ಕನಿಷ್ಠ ವೇತನ ಜಾರಿ ಮಾಡಬೇಕು ಎಂದು ಗ್ರಾಮ ಪಂಚಾಯತ ನೌಕರರು ಆಗ್ರಹಿಸಿದ್ದಾರೆ.
ಗೋಕಾಕ ತಾಲೂಕಾ ಗ್ರಾಮ ಪಂಚಾಯತ ನೌಕರರ ಸಂಘದ ನೇತೃತ್ವದಲ್ಲಿ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಪರುಶರಾಮ ಗಸ್ತೆ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಇತ್ತಿಚಿಗೆ ಬೆಂಗಳೂರಿನಲ್ಲಿ ಧರಣಿ ನಡೆಸುವುದರೊಂದಿಗೆ ವೈಜ್ಞಾನಿಕ ಕನಿಷ್ಠ ಕೂಲಿ ಜಾರಿಗಾಗಿ ಹಾಗೂ ಬಂಡವಾಳಿಗರ ಪರವಾದ ಕಾನೂನು ತಿದ್ದುಪಡಿಗಳನ್ನು ವಿರೋಧಿಸಿ ಸಹಿ ಸಂಗ್ರಹ ಚಳುವಳಿಯನ್ನು ಈಗಾಗಲೇ ಆರಂಭಿಸಲಾಗಿದೆ.
ರಾಜ್ಯ ಸರ್ಕಾರವು ಗ್ರಾಮ ಪಂಚಾಯತ ನೌಕರರಿಗೆ ಕನಿಷ್ಠ ವೇತನ ಜಾರಿ ಮಾಡಿದೆ. ಆದರೆ, ಸರ್ಕಾರ ಜಾರಿ ಮಾಡಿರುವ ಕನಿಷ್ಠ ವೇತನ ಆದೇಶವು ಅವೈಜ್ಞಾನಿಕವಾಗಿದೆ ಎಂದು ನೌಕರರ ಆರೋಪವಾಗಿದೆ. ಉಚ್ಚ ನ್ಯಾಯಾಲಯದ ಆದೇಶದಂತೆಯೇ ವೈಜ್ಞಾನಿಕ ಕನಿಷ್ಠ ಕೂಲಿ ಜಾರಿ ಮಾಡಲು ಆಗ್ರಹಿಸಿದೆ.
ಸರ್ಕಾರವು ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಉದ್ಯೋಗ ಈ ಉದ್ದಿಮೆಗಳಲ್ಲಿ ತೊಡಗಿರುವ ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಬರುವಂತೆ ಆದೇಶಿಸಿತ್ತು. ಈ ಆದೇಶವು ಅವೈಜ್ಞಾನಿಕವಾಗಿದ್ದು ಈ ನಡೆಯನ್ನು ಪ್ರಶ್ನಿಸಿ ಸಂಘವು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಮತ್ತೆ ರಿಟ್ ಅರ್ಜಿ ಸಲ್ಲಿಸಿದ ಪ್ರಯುಕ್ತ ಉಚ್ಚ ನ್ಯಾಯಾಲಯವು ಕೆಲ ಅಂಶಗಳನ್ನು ನೀಡಿದ್ದು ಕನಿಷ್ಠ ವೇತನ ನಿಗದಿಪಡಿಸಲು ರಾಜ್ಯ ಸರ್ಕಾರಕ್ಕೆ ಅಧಿಸೂಚನೆ ಹೊರಡಿಸಿದೆ. ಆದರೆ ಈಗ ರಾಜ್ಯ ಸರ್ಕಾರವು ಹೊರಡಿಸಿದ ಆದೇಶವು ಅವೈಜ್ಞಾನಿಕವಾಗಿದೆ ಎಂದು ಸಂಘದ ವಾದವಾಗಿದ್ದು ಈ ಕನಿಷ್ಠ ವೇತನದ ವಿಷಯದ ಕುರಿತು 2021 ರಿಂದ 2025ರ ವರೆಗೆ ನ್ಯಾಯಾಲಯದಲ್ಲಿ ನಡೆದ ವಾದ ವಿವಾದಗಳ ಅಂಶಗಳನ್ನು ಅಧಿಸೂಚನೆಯಲ್ಲಿ ಪರಿಗಣಿಸಿ ಸೇರೆ್ಡ ಮಾಡಿಕೊಂಡು ಜಾರಿ ಮಾಡಬೇಕೆಂದು ಸಂಘದ ಒತ್ತಾಯವಾಗಿದೆ.
ಈ ಅವಧಿಯಲ್ಲಿ ನ್ಯಾಯಾಲಯ ಸೂಚಿಸಿದ ಅರ್ಜಿ ಅಧಿಸೂಚನೆಯಂತೆ ಸುಮಾರು 10 ಅಂಶಗಳನ್ನು ಪರಿಗಣಿಸಿ ಕನಿಷ್ಠ ವೇತನ ನಿಗದಿಪಡಿಸಲು ಆದೇಶ ಹೊರಡಿಸಿದೆ. ಕಾರಣ ನ್ಯಾಯಾಲಯದ ಆದೇಶದ ಅನುಗುಣವಾಗಿಯೇ ಕನಿಷ್ಠ ವೇತನವನ್ನು ನಿಗದಿಪಡಿಸಬೇಕೆಂದು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಗೋಕಾಕ ತಾಲೂಕಾ ಗ್ರಾಮ ಪಂಚಾಯತ ನೌಕರ ಸಂಘದ ಅಧ್ಯಕ್ಷ ಮಡ್ಡೆಪ್ಪ ಭಜಂತ್ರಿ,ಕಾರ್ಯದರ್ಶಿ ಬಾಳಪ್ಪ ದುಂಡಾನಟ್ಟಿ, ವಿಜಯ ಸೊಲ್ಲಾಪೂರ, ಆನಂದ ಗುಡಕೇತ್ರ, ಸಂಜೀವ ನಾಯಿಕ, ಸುರೇಶ ಬಾನಸಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 