ಗ್ರಾಮ ಸ್ವರಾಜ ವಿಕೇಂದ್ರೀಕರಣ ಮತ್ತು ಸ್ಥಳೀಯ ಆಡಳಿತದ ಚರ್ಚೆಗೆ ರಾಷ್ಟ್ರೀಯ ವೇದಿಕೆ
Gram Swaraj is a national platform for discussion on decentralization and local governance
ಗದಗ 12: ಗ್ರಾಮೀಣ ಜನತಾಂತ್ರಿಕ ವ್ಯವಸ್ಥೆಯ ಬೇರುಗಳನ್ನು ಇನ್ನಷ್ಟು ಬಲಪಡಿಸುವುದು ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸಬಲೀಕರಣಕ್ಕೆ ಹೆಚ್ಚಿನ ಶಕ್ತಿಯನ್ನು ತುಂಬುವ ಉದ್ದೇಶದಿಂದ 18ನೇ ರಾಷ್ಟ್ರೀಯ ಪಂಚಾಯತ್ ಪರಿಷತ್ ಸಮ್ಮೇಳನವನ್ನು ಕರ್ನಾಟಕ ಪಂಚಾಯತ್ ರಾಜ್ ಪರಿಷತ್, ಬೆಂಗಳೂರು ಹಾಗೂ ವಿಶ್ವವಿದ್ಯಾಲಯದ ಸಹಭಾಗಿತ್ವದಲ್ಲಿ ಮತ್ತು ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಪ್ರಾಯೋಜಕತ್ವದಲ್ಲಿ, ಡಿಸೆಂಬರ್ 13 ಮತ್ತು 14, 2025 ರಂದು ಗದಗ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದೆ ಎಂದು ಅಖಿಲ ಭಾರತ ಪಂಚಾಯತ್ ಪರಿಷತ್ ಅಧ್ಯಕ್ಷರು ಮತ್ತು ಮಾಜಿ ಕೇಂದ್ರ ಸಚಿವ ಸುಬೋಧ್ ಕಾಂತ್ ಸಾಹಾಯ್ ಹೇಳಿದರು.
ಅವರು ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಅಖಿಲ ಭಾರತ ಪಂಚಾಯತ್ ಪರಿಷತ್ ನ 18 ನೇ ರಾಷ್ಟ್ರೀಯ ಸಮ್ಮೇಳನ ಕುರಿತು ಏರಿ್ಡಸಿದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಭಾರತದ ಸ್ವಾತಂತ್ರಾ-್ಯ ನಂತರ, ರಾಷ್ಟ್ರದಲ್ಲಿ ವಿಕೇಂದ್ರೀಕೃತ ಆಡಳಿತ ಮತ್ತು ಜನ ಸಹಭಾಗಿತ್ವವನ್ನು ಬಲಪಡಿಸಲು ಪಂಚಾಯತ್ ರಾಜ್ ವ್ಯವಸ್ಥೆಯ ಅಭಿವೃದ್ಧಿಗೆ ಸರ್ಕಾರ ಕ್ರಮಬದ್ಧ ನೀತಿಗಳನ್ನು ಅನುಸರಿಸಿತು. ಬಲವಂತರಾಯ್ ಮೇಹ್ವಾ ಸಮಿತಿಯು ಮೂರು ಹಂತದ ಪಂಚಾಯತ್ ರಾಜ್ ವ್ಯವಸ್ಥೆಗೆ ಮೂಲಭೂತ ರೂಪುರೇಷೆ ನೀಡಿದರೆ, ಅಶೋಕ್ ಮೇಹ್ವಾ ಮತ್ತು ಎಲ್.ಎಂ.ಸಿಂಗ್ವಿ ಸಮಿತಿಗಳು ಸಂಸ್ಥಾತ್ಮಕ ಸ್ವಾಯತ್ತತೆ ಮತ್ತು ಪ್ರಜಾಸತ್ತಾತ್ಮಕ ಸ್ಥಿರತೆಯ ದೃಢತೆಗೆ ಅಗತ್ಯವಾದ ಮಹತ್ವದ ಶಿಫಾರಸುಗಳನ್ನುಮಾಡಿದವು. ಈ ಶಿಫಾರಸುಗಳ ಆಧಾರದಲ್ಲಿ ದಿವಂಗತ ಪ್ರಧಾನಮಂತ್ರಿಗಳಾದ ರಾಜೀವ್ ಗಾಂಧಿಯವರು ಪಂಚಾಯತ್ ರಾಜ್ ಸಂಸ್ಥೆಗಳಿಗೆ ಸಂವಿಧಾನಬದ್ಧ ಸ್ಥಾನಮಾನ ನೀಡುವ ಐತಿಹಾಸಿಕ ನಿರ್ಧಾರವನ್ನು ಕೈಗೊಂಡು, ಗ್ರಾಮಮಟ್ಟದ ಆಡಳಿತವನ್ನು ಭಾರತದ ಜನತಾಂತ್ರಿಕ ವ್ಯವಸ್ಥೆಯ ಆಧಾರಸ್ತಂಭವಾಗಿ ಬಲಪಡಿಸುವ ಅಡಿಪಾಯ ಹಾಕಿದರು ಎಂದರು.
ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿಗಳು (ಪ್ರ) ಹಾಗೂ ಕುಲಸಚಿವರಾದ ಪ್ರೊ. ಡಾ. ಸುರೇಶ ವಿ ನಾಡಗೌಡ ಅವರು ಮಾತನಾಡಿ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮವು ಡಿಸೆಂಬರ್ 13, 2025 ರಂದು ಬೆಳಿಗ್ಗೆ 10.30ರಿಂದ ಗಂಟೆಗೆ ಜರುಗಲಿದೆ. ರಾಜ್ಯ ಸರ್ಕಾರದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಸಮ್ಮೇಳನವನ್ನು ಉದ್ಘಾಟಿಸಿ, ಉದ್ಘಾಟನಾ ಭಾಷಣ ಮಾಡುವರು. ಈ ಸಂದರ್ಭದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಮಾನ್ಯ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಘನ ಉಪಸ್ಥಿತಿಯನ್ನು ವಹಿಸಲಿದ್ದಾರೆ. ಸಮ್ಮೇಳನದ ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟ್ಘಿಬಿಟಿ ಸಚಿವರು ಮತ್ತು ಎಂ.ಜಿ.ಆರ್.ಡಿ.ಪಿ.ಆರ್. ವಿಶ್ವವಿದ್ಯಾಲಯದ ಸಹ- ಕುಲಾಧಿಪತಿಗಳಾದ ಪ್ರಿಯಾಂಕ ಖರ್ಗೆ ಅವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಸರ್ಕಾರದ ಕಾನೂನು, ನ್ಯಾಯ, ಸಂಸತ್ತೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರು ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲವರು ವಹಿಸಲಿದ್ದಾರೆ.
ಉದ್ಘಾಟನಾ ಸಮಾರಂಭದಲ್ಲಿ ಅತಿಥಿಗಳಾಗಿ 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ. ನಾರಾಯಣಸ್ವಾಮಿ, ಕರ್ನಾಟಕ ರಾಜ್ಯ ವಿಕೇಂದ್ರಿಕೃತ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಡಿ.ಆರ್.ಪಾಟೀಲ, ಅಖಿಲ ಭಾರತ ಪಂಚಾಯತ್ ಪರಿಷತ್ ಅಧ್ಯಕ್ಷರು ಮತ್ತು ಮಾಜಿ ಕೇಂದ್ರ ಸಚಿವ ಸುಬೋಧ್ ಕಾಂತ್ ಸಾಹಾಯ್, ಜಿಲ್ಲೆಯ ಸಂಸದರು, ಶಾಸಕರು, ಜಿಲ್ಲಾ-ತಾಲ್ಲೂಕು-ಗ್ರಾಮ ಪಂಚಾಯತ್ ಅಧ್ಯಕ್ಷರುಗಳು ಸಹ ಪಾಲ್ಗೊಳ್ಳಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಕರ್ನಾಟಕ ಪಂಚಾಯತ್ ರಾಜ್ ಪರಿಷತ್ತಿನ ಕಾರ್ಯಕಾರಿ ಅಧ್ಯಕ್ಷ ವಿ.ವೈ. ಘೋರೆ್ಡ, ಉಪಾಧ್ಯಕ್ಷರಾದ ಶ್ರೀಮತಿ ಸೌಭಾಗ್ಯ ಬಸವರಾಜ್ ಅವರು ಉಪಸ್ಥಿತರಿರುವರು. ಸಮ್ಮೇಳನದಲ್ಲಿ ರಾಜ್ಯ ಮತ್ತು ರಾಷ್ಟ್ರದ ವಿವಿಧ ಭಾಗಗಳಿಂದ 1500ಕ್ಕೂ ಹೆಚ್ಚು ಪಂಚಾಯತ್ ಪ್ರತಿನಿಧಿಗಳು, ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಪದಾಧಿಕಾರಿಗಳು, ವಿಷಯ ತಜ್ಞರು, ವಿಶ್ವವಿದ್ಯಾಲಯದ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಕುಲಪತಿ ಡಾ.ಸುರೇಶ ನಾಡಗೌಡ ತಿಳಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಪಂಚಾಯತ್ ರಾಜ್ ಪರಿಷತ್ತಿನ ಕಾರ್ಯಕಾರಿ ಅಧ್ಯಕ್ಷರಾದ ವಿ. ವೈ. ಘೋರೆ್ಡ, ತ್ರಿಪುರ ರಾಜ್ಯದ ಶಾಸಕ ರಾಜೀವ ಸಿನ್ಹ, ಪಂಚಾಯತ್ ಪರಿಷತ್ ಕಾರ್ಯದರ್ಶಿ ಅಶೋಕ ಚೌಹಾಣ, ವಾಸಣ್ಣ ಕುರಡಗಿ, ಜೆ.ಕೆ.ಜಮಾದಾರ, ಪ್ರಕಾಶ ಮಾಚೇನಹಳ್ಳಿ ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 