ಸವದತ್ತಿಯಲ್ಲಿ ಗ್ರಾಮದೇವಿ ಜಾತ್ರಾ ಮಹೋತ್ಸವ
Grama Devi Jatra Festival in Savadatti
ಕುಂಭಮೇಳ ವಾದ್ಯಗೋಷ್ಠಿಗಳೊಂದಿಗೆ ವೈಭವದ ಮೆರವಣಿಗೆ
ಸವದತ್ತಿ 04: ಪಟ್ಟಣದ ಆರಾಧ್ಯ ದೈವ ಶ್ರೀ ಗ್ರಾಮದೇವತೆಯ ಜಾತ್ರಾ ಮಹೋತ್ಸವವು ಸೋಮವಾರ ಅತ್ಯಂತ ಸಡಗರ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ ಜರುಗಿತು.
ನಗರದ ಪ್ರಮುಖ ರಸ್ತೆಗಳಲ್ಲಿ ನಡೆದ ಮೆರವಣಿಗೆಯು ಭಕ್ತಿಯ ಪರಾಕಾಷ್ಠೆಯನ್ನು ಮೆರೆಯಿತು.ನಗರದ ಎಪಿಎಂಸಿ ಸರ್ಕಲ್‌ನಿಂದ ನೋಡಿದಲ್ಲಿ ಇಡೀ ರಸ್ತೆಯು ಹಳದಿಮಯವಾಗಿ ಅಮ್ಮನ ಭಂಡಾರ ಕಂಗೊಳಿಸುತ್ತಿತ್ತು. ಸಹಸ್ರಾರು ಸಂಖ್ಯೆಯಲ್ಲಿ ಸೇರಿದ್ದ ಭಕ್ತರು, ಸುಮಂಗಲೆಯರ ಪೂರ್ಣಕುಂಭಗಳ ಮೆರವಣಿಗೆ ಮತ್ತು ಮೇಳೈವ ವಾದ್ಯಗೋಷ್ಠಿಗಳು ಜಾತ್ರಾ ಮಹೋತ್ಸವದ ಭವ್ಯತೆಗೆ ಸಾಕ್ಷಿಯಾದವು. ಭಂಡಾರ ಮತ್ತು ಹೂವುಗಳ ಮಳೆಯಲ್ಲಿ ಶ್ರೀ ಗ್ರಾಮದೇವತೆಯ ಉತ್ಸವ ಮೂರ್ತಿಯು ಭಕ್ತರ ಜಯಘೋಷದ ನಡುವೆ ಸಾಗಿಬಂತು. ಜಾತ್ರಾ ಸಮಿತಿಯ ಗೌರವಾಧ್ಯಕ್ಷ ಹಾಗೂ ಶಾಸಕ ವಿಶ್ವಾಸ ವೈದ್ಯ ಮತ್ತು ಜಾತ್ರಾ ಸಮಿತಿಯ ಅಧ್ಯಕ್ಷ ವಿರೂಪಾಕ್ಷ ಮಾಮನಿ ಅವರ ನೇತೃತ್ವದಲ್ಲಿ ಈ ಸಕಲ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಿದವು. ಪರಂಪರೆಯಂತೆ 16 ಮನೆತನದ ರೈತರು ಹಾಗೂ ಹಿರಿಯರು ಜಾತ್ರೆಯ ಧಾರ್ಮಿಕ ವಿಧಿವಿಧಾನಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಮಾರ್ಗದರ್ಶನ ನೀಡಿದರು. ತಾಳ-ತಂಬೂರಿ, ಡೊಳ್ಳು ಕುಣಿತ ಹಾಗೂ ವಿವಿಧ ಕಲಾತಂಡಗಳ ಪ್ರದರ್ಶನವು ಜಾತ್ರೆಯ ಮೆರುಗನ್ನು ಹೆಚ್ಚಿಸಿದವು. ಸವದತ್ತಿ ತಾಲೂಕು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು.ಬಳಿಕ ಜಾತ್ರಾ ಸಮಿತಿಯ ಗೌರವಾಧ್ಯಕ್ಷ ಶಾಸಕ ವಿಶ್ವಾಸ ವೈದ್ಯ ಮಾತನಾಡಿದ ಅವರು ಗ್ರಾಮದೇವತೆಯು ಸವದತ್ತಿಯ ಸಮಸ್ತ ಜನತೆಗೆ ಹಾಗೂ ವಿಶೇಷವಾಗಿ ಮಕ್ಕಳಿಗೆ ಸದಾ ಕಾಲ ಸುಖ, ಶಾಂತಿ ಮತ್ತು ಸಮೃದ್ಧಿಯನ್ನು ಕರುಣಿಸಲಿ, ಎಂದು ಅವರು ಹಾರೈಸಿದರು. ಜನರು ಕೃಷಿ ಮತ್ತು ವ್ಯಾಪಾರದಲ್ಲಿ ಪ್ರಗತಿ ಹೊಂದಲು ಹಾಗೂ ನಾಡಿನಲ್ಲಿ ಉತ್ತಮ ಮಳೆಯಾಗಿ ಸಮೃದ್ಧಿ ನೆಲೆಸಲು ದೇವಿಯ ಕೃಪೆ ಅಗತ್ಯವಿದೆ ಎಂದು ಅವರು ಆಶಯ ವ್ಯಕ್ತಪಡಿಸಿದರು. ದೇಶದ ಭವಿಷ್ಯವಾಗಿರುವ ಮಕ್ಕಳಿಗೆ ಉತ್ತಮ ಆರೋಗ್ಯ ಮತ್ತು ಜ್ಞಾನ ಸಿಗಲಿ, ದೇವಿಯು ಅವರಿಗೆ ಸನ್ಮಾರ್ಗದಲ್ಲಿ ನಡೆಯುವ ಶಕ್ತಿ ನೀಡಲಿ ಎಂದು ವಿಶೇಷವಾಗಿ ಪ್ರಾರ್ಥಿಸಿದರು. ಜಾತ್ರಾ ಮಹೋತ್ಸವಗಳು ಕೇವಲ ಧಾರ್ಮಿಕ ಆಚರಣೆಯಲ್ಲ, ಅವು ಸಮಾಜದಲ್ಲಿ ಒಗ್ಗಟ್ಟು ಮತ್ತು ಸೌಹಾರ್ದತೆಯನ್ನು ಬೆಳೆಸುವ ವೇದಿಕೆಗಳಾಗಿವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಾತ್ರಾ ಸಮಿತಿಯ ಅಧ್ಯಕ್ಷ ವಿರೂಪಾಕ್ಷ ಮಾಮನಿ ಮಾತನಾಡಿ ಗ್ರಾಮದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡು ಜಾತ್ರೆಗಳು ಕೇವಲ ಸಂಭ್ರಮದ ಆಚರಣೆಯಲ್ಲ, ಅವು ನಮ್ಮ ಸಂಸ್ಕೃತಿ ಮತ್ತು ಒಗ್ಗಟ್ಟಿನ ಸಂಕೇತ ಎಂದು ಅಭಿಪ್ರಾಯಪಟ್ಟರು.ಜಾತ್ರಾ ಮಹೋತ್ಸವಗಳು ಗ್ರಾಮದ ಜನರ ನಡುವೆ ಪ್ರೀತಿ ಮತ್ತು ಸೌಹಾರ್ದತೆಯನ್ನು ಬೆಳೆಸುತ್ತವೆ. ನಮ್ಮ ಪೂರ್ವಜರು ಹಾಕಿಕೊಟ್ಟ ಇಂತಹ ಸಂಪ್ರದಾಯಗಳನ್ನು ಉಳಿಸಿ ಬೆಳೆಸಿಕೊಂಡು ಹೋಗುವುದು ನಮ್ಮೆಲ್ಲರ ಆದ್ಯ ಕರ್ತವ್ಯ, ಎಂದರು, ಒಟ್ಟಾರೆಯಾಗಿ, ಶಾಸಕ ವಿಶ್ವಾಸ ವೈದ್ಯರು ಹಾಗೂ ವಿರೂಪಾಕ್ಷ ಮಾಮನಿ ಅವರ ಸಾರಥ್ಯದಲ್ಲಿ, ಸಕಲ ಜನತೆಯ ಸಹಕಾರದೊಂದಿಗೆ ಈ ಬಾರಿಯ ಗ್ರಾಮದೇವಿ ಜಾತ್ರೆಯು ಅಭೂತಪೂರ್ವ ಯಶಸ್ಸು ಕಂಡಿತು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 