10 ವರ್ಷಗಳ ಬಳಿಕ ನಾಗನೂರಿನಲ್ಲಿ ಗ್ರಾಮದೇವಿ ಜಾತ್ರಾ ಮಹೋತ್ಸವ
Gramadevi Jatra Mahotsava in Naganur after 10 years
ಮೂಡಲಗಿ ಜು. 6: ತಾಲ್ಲೂಕಿನ ನಾಗನೂರು ಪಟ್ಟಣದಲ್ಲಿ 10 ವರ್ಷಗಳ ಬಳಿಕ ಗ್ರಾಮದೇವಿ ಜಾತ್ರಾ ಮಹೋತ್ಸವವು ಜುಲೈ 7ರಿಂದ 11ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಗ್ರಾಮೀಣ ಕ್ರೀಡಾ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ.
ಘೋಡಗೇರಿ ಶಿವಾನಂದ ಮಠದ ಮಲ್ಲಯ್ಯ ಮಹಾಸ್ವಾಮಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಜಾತ್ರೆಗೆ ಜು. 7ರಂದು ಬೆಳಿಗ್ಗೆ ಗ್ರಾಮದೇವಿಯ ಮೂರ್ತಿಯ ಮೆರವಣಿಗೆ, ಪ್ರತಿಷ್ಠಾಪನೆ ಹಾಗೂ ವಿಶೇಷ ಪೂಜೆಗಳೊಂದಿಗೆ ಚಾಲನೆ ದೊರೆಯಲಿದೆ. ಬಳಿಕ ಐದು ದಿನಗಳ ಕಾಲ ವಿವಿಧ ಓಣಿಗಳಲ್ಲಿ ದೇವಿಯ ಪ್ರತಿಷ್ಠಾಪನೆ, ಪೂಜೆ, ಉಡಿ ತುಂಬುವ ಕಾರ್ಯಕ್ರಮಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಜು. 11ರಂದು ಸಂಜೆ 4 ಗಂಟೆಗೆ ಗ್ರಾಮದೇವಿಯ ಮಹಾರಥೋತ್ಸವ ಜರುಗಲಿದ್ದು, ದೇವಾಲಯಕ್ಕೆ ಮೆರವಣಿಗೆಯೊಂದಿಗೆ ದೇವಿಯ ಮೂರ್ತಿಯನ್ನು ಕರೆತಂದು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುವುದು. ಜು. 13ರಂದು ಶಾಂತಿ ಹೋಮದೊಂದಿಗೆ ಜಾತ್ರೆ ಸಂಪನ್ನಗೊಳ್ಳಲಿದೆ.
ಜಾತ್ರೆಯ ಅಂಗವಾಗಿ ಜು. 8ರಿಂದ 10ರವರೆಗೆ ಹಾಸ್ಯ ರಸಮಂಜರಿ, ಗೀಗೀ ಪದಗಳು ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿಸಲಾಗಿದೆ. ಜು. 8ರಂದು ಚಿಕ್ಕಾಲಗುಂಡಿ ಅಂಜನಿ ಪುತ್ರ ನಾಟ್ಯ ಸಂಘದಿಂದ ‘ತಾಯಿಯ ಋಣ ಮಣ್ಣಿನ ಗುಣ’ ಸಾಮಾಜಿಕ ನಾಟಕ ಪ್ರದರ್ಶನ ನಡೆಯಲಿದೆ.
ಗ್ರಾಮೀಣ ಕ್ರೀಡೆಗಳಿಗೂ ವಿಶೇಷ ಸ್ಥಾನ ಕಲ್ಪಿಸಲಾಗಿದ್ದು, ಜು. 9ರಂದು ಓಪನ್ ಟಗರಿನ ಕಾಳಗ ಸ್ಪರ್ಧೆ, ಜು. 11 ಹಾಗೂ 12ರಂದು ಓಪನ್ ಕಬಡ್ಡಿ ಪಂದ್ಯಾವಳಿ ಮತ್ತು ಜು. 12ರಂದು ಜೋಡೆತ್ತಿನ ಗಾಡಿ ಹಾಗೂ ಜೋಡು ಕುದುರೆಗಾಡಿ ಶರತ್ತುಗಳು ನಡೆಯಲಿವೆ. ವಿವಿಧ ಸ್ಪರ್ಧೆಗಳ ವಿಜೇತರಿಗೆ ನಗದು ಬಹುಮಾನಗಳನ್ನು ಘೋಷಿಸಲಾಗಿದೆ.
ಕೋವಿಡ್ನಿಂದಾಗಿ ಕಳೆದ ಹತ್ತು ವರ್ಷಗಳಿಂದ ಜಾತ್ರೆ ನಡೆದಿರಲಿಲ್ಲ. ಈ ಬಾರಿ ಜಾತ್ರೆ ಪುನರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಪಟ್ಟಣವನ್ನು ವಿದ್ಯುತ್ ದೀಪಾಲಂಕಾರದಿಂದ ಸಿಂಗರಿಸಲಾಗಿದ್ದು, ಭಕ್ತರ ಆಗಮನಕ್ಕೆ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. ಸ್ಥಳೀಯರು ಮನೆಗಳನ್ನು ಅಲಂಕರಿಸಿ, ಬಂಧು-ಬಳಗವನ್ನು ಆಹ್ವಾನಿಸುವ ಮೂಲಕ ಜಾತ್ರೆಯ ಸಂಭ್ರಮಕ್ಕೆ ಸಜ್ಜಾಗಿದ್ದಾರೆ.
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ 