ಗ್ರಾಮದೇವಿ ಜಾತ್ರೆ: ತಹಶೀಲ್ದಾರ್ ಕಾರ್ಯಾಲಯದಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ
Gramdevi Fair: Preliminary meeting of officials at the Tahsildar's office
ಸವದತ್ತಿ 30: ಪಟ್ಟಣದ ಗ್ರಾಮದೇವಿಯ ಜಾತ್ರಾ ಮಹೋತ್ಸವದ ಯಶಸ್ವಿ ನಿರ್ವಹಣೆ ಹಾಗೂ ಸಾರ್ವಜನಿಕ ಸೌಲಭ್ಯಗಳ ಕುರಿತು ಚರ್ಚಿಸಲು ತಾಲೂಕು ಆಡಳಿತ ಸೌಧದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಅಧಿಕಾರಿಗಳ ಮಹತ್ವದ ತುರ್ತು ಸಭೆ ಜರುಗಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ ಮಾತನಾಡಿ, ಜಾತ್ರೆಯ ಯಶಸ್ಸಿಗೆ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು. ವಿಶೇಷವಾಗಿ ಲಕ್ಷಾಂತರ ಭಕ್ತರು ಸೇರುವುದರಿಂದ ಕುಡಿಯುವ ನೀರು ಮತ್ತು ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ರಾಮದುರ್ಗ ವಿಭಾಗದ ಡಿವೈಎಸ್ಪಿ ಚಿದಂಬರ ಮಡಿವಾಳರ ಮಾತನಾಡಿದ ಅವರು ಲಕ್ಷಾಂತರ ಭಕ್ತರು ಆಗಮಿಸುವ ನೀರೀಕ್ಷೆಯಿರುವುದರಿಂದ, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.ತಾ.ಪಂ ಇಒ ಆನಂದ ಬಡಕುಂದ್ರಿ ಗ್ರಾಮೀಣ ಭಾಗದಿಂದ ಬರುವ ಭಕ್ತಾದಿಗಳಿಗೆ ಅಗತ್ಯವಿರುವ ಪೂರಕ ವ್ಯವಸ್ಥೆಗಳನ್ನು ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.ಸವದತ್ತಿ ಯಲ್ಲಮ್ಮ ನಗರಸಭೆ ವತಿಯಿಂದ ಪೌರಾಯುಕ್ತ ಸಂಗನಬಸಯ್ಯ ಗದಗಿಮಠ ಮಾತನಾಡಿದ ಅವರು ನಿರಂತರ ಕುಡಿಯುವ ನೀರಿನ ಪೂರೈಕೆ ಹಾಗೂ ಸ್ವಚ್ಛತೆ ಕಾಪಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.ಈ ಸಂದರ್ಭದಲ್ಲಿ ತಾಲೂಕಾ ಆರೋಗ್ಯ ಇಲಾಖೆಯಿಂದ ಆರೋಗ್ಯ ನೀರೀಕ್ಷಕ ಅಶೋಕ ಮುರಗೋಡ ಮಾತನಾಡಿ ಭಕ್ತರ ಅನುಕೂಲಕ್ಕಾಗಿ ಮೂರು ವಿಶೇಷ ಕ್ಲಿನಿಕ್ಗಳನ್ನು ಗಡೇಕಾರ ಪ್ಲಾಟ್, ಎಪಿಎಂಸಿ, ಮತ್ತು ಗ್ರಾಮದೇವಿಯ ಹತ್ತಿರ ಆನಿಅಗಸಿ, ಸ್ಥಾಪಿಸಲಾಗುವುದು. ಜೊತೆಗೆ 3 ಅಂಬುಲೆನ್ಸ್ ಹಾಗೂ ಆಹಾರ ಮತ್ತು ನೀರಿನ ಗುಣಮಟ್ಟ ತಪಾಸಣೆಗಾಗಿ ಮೊಬೈಲ್ ತಂಡಗಳನ್ನು ರಚಿಸಲಾಗುವುದು ಎಂದು ಮಾಹಿತಿ ನೀಡಿದರು.
ಹೆಸ್ಕಾಂ ಇಲಾಖೆ ಅಧಿಕಾರಿ ವಿಶಾಪೂರಕರ ಮಾತನಾಡಿ ಗ್ರಾಮದೇವಿ ಜಾತ್ರೆಯ ಅವಧಿಯಲ್ಲಿ ನಿರಂತರ ವಿದ್ಯುತ್ ಪೂರೈಕೆಗೆ ಕ್ರಮ ವಹಿಸಲಾಗುವುದು ಎಂದು ಹೇಳಿದರು.ಪಿಐ ಸುರೇಶ ಬೆಂಡೆಗುಂಬಳ, ಶಿರೆಸ್ತೇದಾರ ಶಶಿರಾಜ ವನಕಿ, ಪಶುವೈದ್ಯಾಧಿಕಾರಿ ಡಾ.ಅನಿಲ ಮರಲಿಂಗನವರ, ಆರ್.ಆರ್. ಕುಲಕರ್ಣಿ, ಶಿವಪ್ರಕಾಶ್ ಪಾಟೀಲ, ಮತ್ತು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 