ದುರ್ಗಾದೇವಿ ಜಾತ್ರಾ ಮಹೋತ್ಸವದಲ್ಲಿ ಅದ್ದೂರಿ ಪಲ್ಲಕ್ಕಿ ಉತ್ಸವ

ದುರ್ಗಾದೇವಿ ಜಾತ್ರಾ ಮಹೋತ್ಸವದಲ್ಲಿ ಅದ್ದೂರಿ ಪಲ್ಲಕ್ಕಿ ಉತ್ಸವ Grand palanquin procession at the Durga Devi Jatra Mahotsava

ಲೋಕದರ್ಶನ ವರದಿ 

ದೇವರಹಿಪ್ಪರಗಿ 31 : ಪ್ರತಿ ವರ್ಷದಂತೆ ಈ ವರ್ಷವೂ ಆಷಾಢ ಮಾಸದ ಅಂಗವಾಗಿ ಪಟ್ಟಣದಲ್ಲಿ ಅಧಿದೇವತೆ ಶ್ರೀ ದುರ್ಗಾದೇವಿಯ ಜಾತ್ರಾ ಮಹೋತ್ಸವವು ಭಕ್ತಿಭಾವದಿಂದ ಹಾಗೂ ಸಂಭ್ರಮದಿಂದ ಅದ್ದೂರಿಯಾಗಿ ಪಲ್ಲಕ್ಕಿ ಉತ್ಸವ ಶುಕ್ರವಾರ ನಡೆಯಿತು.

ಜಾತ್ರಾ ಮಹೋತ್ಸವದಲ್ಲಿ ದೇವರ ಹಿಪ್ಪರಗಿ ಮತಕ್ಷೇತ್ರದ ಬಿಜೆಪಿ ಮುಖಂಡರಾದ ಬಸನಗೌಡ ಪಾಟೀಲ ಯಡಿಯಾಪೂರ ಭಾಗವಹಿಸಿ, ದುರ್ಗಾದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.ನಂತರ ದೇವಸ್ಥಾನ ಕಮಿಟಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಿದರು. 

ಸನ್ಮಾನ ಸ್ವೀಕರಿಸಿ ಮಾತನಾಡಿದ ಬಿಜೆಪಿ ಮುಖಂಡರಾದ ಬಸನಗೌಡ ಪಾಟೀಲ ಯಡಿಯಾಪೂರ ಅವರು, "ಜಗಜ್ಜನನಿ ದುರ್ಗಾದೇವಿಯ ಕೃಪಾಶೀರ್ವಾದವು ನಾಡಿನ ಸಮಸ್ತ ಜನತೆಗೆ ಸುಖ, ಶಾಂತಿ, ಸಮೃದ್ಧಿ, ಉತ್ತಮ ಆರೋಗ್ಯ ಹಾಗೂ ಐಶ್ವರ್ಯವನ್ನು ಕರುಣಿಸಲಿ ಎಂದು ತಾಯಿ ಜಗನ್ಮಾತೆಯಲ್ಲಿ ಪ್ರಾರ್ಥಿಸುತ್ತೇನೆ.ಎಲ್ಲರ ಜೀವನ ಸುಖಮಯವಾಗಿರಲಿ ಎಂಬುದು ನನ್ನ ಹಾರೈಕೆ ಎಂದು ಹೇಳಿದರು. 

ಜಾತ್ರಾ ಮಹೋತ್ಸವದ ಅಂಗವಾಗಿ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆದು ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದ್ದು, ದೇವರ ಹಿಪ್ಪರಗಿ ಪಟ್ಟಣದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿತ್ತು.ಇದೇ ಸಂದರ್ಭದಲ್ಲಿ ಮುಖಂಡರುಗಳಾದ ಶ್ರೀಧರ ನಾಡಗೌಡ, ಸಮುದಾಯದ ಮುಖಂಡರುಗಳಾದ ಧರ್ಮಣ್ಣ ವಗ್ಗರ, ನಿಜಲಿಂಗಪ್ಪ ಮ್ಯಾಕೇರಿ,  

ಶಿವರಾಯ ವಗ್ಗರ,ಪರಶುರಾಮ ಬೇವಿನಗಿಡದ, ಶ್ರೀಕಾಂತ್ ವಗ್ಗರ,ಸಂಜು ಸನಾದಿ,ರಾಹುಲ್ ದೊಡಮನಿ,ಕಿರಣ್ ವಗ್ಗರ,ನಾಗೇಶ್ ವಗ್ಗರ, ಪ್ರವೀಣ್ ವಗ್ಗರ, ಮಹಾಂತೇಶ ವಗ್ಗರ, ಮರಲಿಂಗಪ್ಪ ಪಡಗನೂರ, ಮಂಜುನಾಥ ಪಡಗನೂರ, ಸದು ಬೇವಿನಗಿಡದ ಸೇರಿದಂತೆ ಪಟ್ಟಣದ ಪ್ರಮುಖರು,ಗಣ್ಯರು ಹಾಗೂ ಇತರರು ಉಪಸ್ಥಿತರಿದ್ದರು.