ಶಿಗ್ಗಾವಿ ಪಟ್ಟಣದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ಭಾವಚಿತ್ರದ ಭವ್ಯ ಮೆರವಣಿಗೆ
Grand procession of the portrait of Lord Ayyappa in Shiggavi town
ಶಿಗ್ಗಾವಿ 05 : ಪಟ್ಟಣದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹಿತ ಶ್ರೀ ಅಯ್ಯಪ್ಪ ಸ್ವಾಮಿಯ ಭಾವಚಿತ್ರದ ಭವ್ಯ ಮೆರವಣಿಗೆಯು ಸಕಲ ವಾದ್ಯ ವೈಭವಗಳೋಂದಿಗೆ ಜರುಗಿತು. ಪಟ್ಟಣದ ಪೋಸ್ಟ ಆಫೀಸ್ ಹತ್ತಿರ ಇರುವ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿನ ದೇವಸ್ಥಾನದಲ್ಲಿ ಶಿಗ್ಗಾವಿ ವಿರಕ್ತಮಠದ ಸಂಗನಬಸವ ಮಹಾಸ್ವಾಮಿಗಳು ಮೆರವಣಿಗೆಗೆ ಚಾಲನೆ ನೀಡಿದರು. ಅಯ್ಯಪ್ಪಸ್ವಾಮಿ ದೇವಸ್ಥಾನದಿಂದ ಆರಂಭವಾದ ಮೆರವಣಿಗೆಯು ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ನಂತರ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಅಯ್ಯಪ್ಪಸ್ವಾಮಿಯ ಮಹಾಪೂಜೆ ಹಾಗೂ ದೀಪೋತ್ಸವ, ಅನ್ನಸಂತರೆ್ಣ ಕಾರ್ಯಕ್ರಮ ಜರುಗಿತು.
ಇದೇ ಜ.10ರ ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಇರು್ಮಡಿ ಕಾರ್ಯಕ್ರಮ ನಂತರ ಪ್ರಮುಖ ಬೀದಿಗಳಲ್ಲಿ ಮೇರವಣಿಗೆ ಮೂಲಕ ಶಬರಿಮಲೈ ಯಾತ್ರೆ ಹೊರಡುವರು, ಯಾತ್ರೆಯಿಂದ ಮರಳಿ ಬಂದ ನಂತರ ಜ.20ರ ಮಂಗಳವಾರದಂದು ಸಾಯಂಕಾಲ 6 ಗಂಟೆಗೆ ಸತ್ಯನಾರಾಯಣ ಪೂಜೆ ನಂತರ ಮಾಲಾ ವಿಸರ್ಜನೆ ಮಾಡಲಾಗುವುದು. ಜೊತೆಗೆ ಜ.14 ರ ಬುಧವಾರ ಸಾಯಂಕಾಲ ಮಕರ ಸಂಕ್ರಮಣದ ಪ್ರಯುಕ್ತ ಅಯ್ಯಪ್ಪಸ್ವಾಮಿ ಸನ್ನಿಧಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಜರುಗುಲಿವೆ.
ಈ ಸಂದರ್ಭದಲ್ಲಿ ಸಮೀತಿಯ ಮಂಜುನಾಥ ಬಾಣದ, ರಾಮಣ್ಣ ಪೂಜಾರ, ಸಂತೋಷ ಕಟ್ಟಿಮನಿ, ರವಿ ಭಜಂತ್ರಿ, ಭೀಮಸ್ವಾಮಿ ಗೌಳಿ, ಕಿರಣ ಬಡ್ಡಿ ಸೇರಿದಂತೆ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯ ಸದಸ್ಯರು ಹಾಗೂ ಮಾಲಾಧಾರಿಗಳು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 