ಭವ್ಯ ಗಣೇಶ ಮೂರ್ತಿಗೆ ಅದ್ದೂರಿ ಸ್ವಾಗತ
Grand welcome for the magnificent Ganesha idol
ಭವ್ಯ ಗಣೇಶ ಮೂರ್ತಿಗೆ ಅದ್ದೂರಿ ಸ್ವಾಗತ
ಬೆಳಗಾವಿ 13: ನಗರದ ಖಡೆಬಜಾರದಲ್ಲಿರುವ ರಾಷ್ಟ್ರೀಯ ಗಣೇಶೋತ್ಸವ ಮಹಾಮಂಡಳ ವತಿಯಿಂದ ಭವ್ಯ ಗಣೇಶ ಮೂರ್ತಿಯ ಆಗಮನದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಅದ್ದೂರಿ ಸ್ವಾಗತ ಕಾರ್ಯಕ್ರಮ ನಡೆಯಿತು. ಪ.ಪೂ. ಕಾರಂಜಿಮಠದ ಗುರುಸಿದ್ದ ಮಹಾಸ್ವಾಮೀಜಿ ಹಾಗೂ ಬಾಪಟಗಲ್ಲಿಯ ನಾಗನಾಥ ಮಹಾಸ್ವಾಮೀಜಿ ಅವರು ಗಣೇಶ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ಸ್ವಾಗತ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಭವ್ಯ ಗಣೇಶ ಮೂರ್ತಿಯ ಆಗಮನದ ಹಿನ್ನೆಲೆಯಲ್ಲಿ ಭಕ್ತರು ಹಾಗೂ ಸಾರ್ವಜನಿಕರಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಗಣೇಶನ ದರ್ಶನ ಪಡೆದು ಉತ್ಸವದ ಸಂಭ್ರಮವನ್ನು ಹೆಚ್ಚಿಸಿದರು. ಈ ಸಂದರ್ಭದಲ್ಲಿ ಮಹಾಮಂಡಳದ ಪದಾಧಿಕಾರಿ ವಿಜಯ ಜಾಧವ, ಬಿಜೆಪಿ ಯುವ ಮುಖಂಡ ಹಾಗೂ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮಹಾಂತೇಶ ವಕ್ಕುಂದ, ಹೇಮಂತ ಹವಳ, ರವಿ ಕಲಘಟಗಿ, ಪ್ರಮುಖರಾದ ಶ್ಯಾಮ ಬತ್ತುಲಕರ, ಬಸವರಾಜ ಹಳಿಂಗಳಿ, ಅರ್ಜುನ ರಜಪೂತ್ ಸೇರಿದಂತೆ ಗಣೇಶೋತ್ಸವ ಮಹಾಮಂಡಳದ ಪ್ರಮುಖ ಕಾರ್ಯಕರ್ತರು ಹಾಗೂ ಸ್ವಯಂಸೇವಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 