ಸಾರ್ವಜನಿಕ ಮೂಲಭೂತ ಸೌಕರ್ಯ ಹೆಚ್ಚಿಸಲು ಅನುದಾನ ದೊರಕಿಸಲಾಗಿದೆ
Grants have been received to enhance public infrastructure
ಲೋಕದರ್ಶನ ವರದಿ
ಹಾನಗಲ್ 29 : ತಾಲೂಕಿನಲ್ಲಿ ಇದೇ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಸಾರ್ವಜನಿಕ ಮೂಲಭೂತ ಸೌಕರ್ಯ ಹೆಚ್ಚಿಸಲು ಅನುದಾನ ದೊರಕಿಸಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು. ತಾಲೂಕಿನ ಅರಳೇಶ್ವರ ಗ್ರಾಮದಲ್ಲಿ ? 50 ಲಕ್ಷ ವೆಚ್ಚದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ಅವರು ಗ್ರಾಮೀಣ ಪ್ರದೇಶಗಳಲ್ಲಿ ಸಂಪರ್ಕ ರಸ್ತೆಗಳು ಹದಗೆಟ್ಟು ಸುಗಮ ಸಂಚಾರಕ್ಕೆ ಪರದಾಡುವ ಸ್ಥಿತಿ ಇತ್ತು. ಆದ್ಯತೆಯ ಮೇಲೆ ಅಂಥ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. 2023 ರ ಸಾರ್ವತ್ರಿಕ ಚುನಾವಣೆಗೆ ಮುನ್ನ ತಾಲೂಕಿನಲ್ಲಿ 52 ದಿನಗಳ ಕಾಲ ದೃಢಸಂಕಲ್ಪ ಯಾತ್ರೆ ಮೂಲಕ ಪಾದಯಾತ್ರೆಯಲ್ಲಿ ಸಂಚರಿಸಿ ಸಮಸ್ಯೆಗಳನ್ನು ಕಣ್ಣಾರೆ ಕಾಣಲಾಗಿತ್ತು. ಆ ಸಮಸ್ಯೆಗಳನ್ನು ಹಂತ, ಹಂತವಾಗಿ ಪರಿಹರಿಸಲಾಗುತ್ತಿದೆ ಎಂದು ತಿಳಿಸಿದರು. ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ, ಮುಖಂಡರಾದ ದಯಾನಂದ ನಾಗನೂರ, ಕೊಟ್ರ್ಪ ಅಂಗಡಿ, ಬಸವರಾಜ ಲೇಖಿ, ಮಲ್ಲೇಶ ಜಾವೋಜಿ, ಫಕ್ಕೀರ್ಪ ತೋಟದ, ಮಕ್ಬೂಲ್ ಹಿತ್ತಲಮನಿ, ಚನ್ನಬಸನಗೌಡ ಕಲಗೌಡ್ರ, ಲಿಂಗರಾಜ ಮಡಿವಾಳರ, ಅರುಣ ಮಣ್ಣಮ್ಮನವರ ಸೇರಿದಂತೆ ಇನ್ನಿತರರಿದ್ದರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 